ವಿದ್ಯಾರ್ಥಿಗಳಿಗೆ ಸೇತುಬಂಧ ಹೊಸ ಅನುಭವ
ದೂರದರ್ಶನದ ಶೈಕ್ಷಣಿಕ ಕಾರ್ಯಕ್ರಮಕ್ಕೆ ಮೆಚ್ಚುಗೆ
Team Udayavani, Jul 21, 2020, 7:04 AM IST
ಬೆಂಗಳೂರು: ಖಾಸಗಿ ಶಿಕ್ಷಣ ಸಂಸ್ಥೆಗಳು ಮಕ್ಕಳಿಗೆ ಆನ್‌ಲೈನ್ ತರಗತಿ ನೀಡಿದರೆ, ಸರ್ಕಾರವು ಸರ್ಕಾರಿ ಶಾಲಾ ಮಕ್ಕಳಿಗೆ ಅತ್ಯಂತ ಅಚ್ಚುಕಟ್ಟಾದ ವ್ಯವಸ್ಥೆಯಲ್ಲಿ ದೂರದರ್ಶನದ ಮೂಲಕ ಶಿಕ್ಷಣ ನೀಡುತ್ತಿರುವುದು ಎಲ್ಲರ ಮೆಚ್ಚುಗೆಗೆ ಗಳಿಸಿದೆ.
ರಾಜ್ಯ ಪಠ್ಯಕ್ರಮದ 8, 9 ಹಾಗೂ 10ನೇ ತರಗತಿಯ ಮಕ್ಕಳಿಗೆ ಏಕಕಾಲದಲಿ ಟಿವಿ ಮೂಲಕ ವಿವಿಧ ತರಗತಿ ಗಳನ್ನು ಬೋಧಿ ಸುವ ಸೇತುಬಂಧ ಕಾರ್ಯಕ್ರಮ ಸೋಮವಾರದಿಂದ ಆರಂಭಗೊಂಡಿದ್ದು, ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪಾಲಕ, ಪೋಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಸೋಮವಾರ ಬೆಳಗ್ಗೆಯಿಂದಲೇ ವಿದ್ಯಾರ್ಥಿಗಳು ಮನೆಯ ಟಿ.ವಿ. ಎದುರು ಕುಳಿತು, ಪಾಠ ಕೇಳುತ್ತಾ, ಸೂಕ್ತ ನೋಟ್ಸ್ ಕೂಡ ಮಾಡಿಕೊಂಡಿದ್ದರು. ಶಾಲೆಯ ತರಗತಿ ಕೊಠಡಿಯಲ್ಲಿ ವಿಷಯವಾರು ಪುಸ್ತಕದೊಂದಿಗೆ ಶಿಕ್ಷಕರ ಬೋಧನೆ ಕೇಳಲು ಸಜ್ಜಾಗಿ ಕುಳಿತುಕೊಳ್ಳುವಂತೆ ಮಕ್ಕಳು ಮನೆಯಲ್ಲಿ ಟಿವಿ ಮುಂದೆ ಕುಳಿತು, ವಿಷಯವಾರು ಬೋಧನೆಯನ್ನು ಆಲಿಸಿದ್ದಾರೆ. ಅನೇಕ ಕಡೆಗಳಲ್ಲಿ ಮಕ್ಕಳು ಸಾಮಾಜಿಕ ಅಂತರ ಕಾಯ್ದುಕೊಂಡು ಒಂದೇ ಮನೆಯಲ್ಲಿ ಕುಳಿತುಕೊಂಡಿದ್ದಾರೆ. ಇನ್ನು ಕೆಲವುಕಡೆಗಳಲ್ಲಿ ಶಿಕ್ಷಕರು ಮಕ್ಕಳೊಂದಿಗೆ ಕುಳಿತು ಟಿವಿಯಲ್ಲಿ ಬರುತ್ತಿದ್ದ ಪಾಠವನ್ನು ಆಲಿಸಿದ್ದಾರೆ ಹಾಗೂ ಮಕ್ಕಳಲ್ಲಿ ಎದ್ದಿದ್ದ ಸಂಶಯವನ್ನು ಬಗೆಹರಿಸಿದ್ದಾರೆ.
ಆನ್‌ಲೈನ್ ವ್ಯವಸ್ಥೆಗಿಂತ ಟಿ.ವಿ. ಮಾಧ್ಯಮದಲ್ಲಿ ಅತ್ಯಂತ ಪರಿಣಾಮಕಾರಿಯಾಗಿ ಮಕ್ಕಳಿಗೆ ಬೋಧನೆ ಮಾಡಬಹುದು ಎಂಬುದನ್ನು ಸೇತುಬಂಧ ಕಾರ್ಯಕ್ರಮ ತೋರಿಸಿಕೊಟ್ಟಿದೆ. ಒಂದೇ ದಿನದಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಈ ವ್ಯವಸ್ಥೆಯಡಿ ಪಾಠ ಕೇಳಿದ್ದಾರೆ. ಮೊಬೈಲ್, ಲ್ಯಾಪ್‌ಟಾಪ್ ಕೂಡ ಬಳಸಿಲ್ಲ. ಮನೆಯಲ್ಲಿರುವ ಇರುವ ಟಿವಿಯ ಮುಂದೆ ಕುಳಿತು ಪೂರ್ಣ ಪಾಠ ವನ್ನು ಆಲಿಸಿದ್ದಾರೆ ಎಂದು ಪ್ರೌಢಶಾಲೆಯ ಹಿರಿಯ ಶಿಕ್ಷಕರಾದ ಮಂಜುನಾಥ್ ಮಾಹಿತಿ ನೀಡಿದರು.
ಟಿ.ವಿ. ಇಲ್ಲದ ಮನೆಯ ಮಕ್ಕಳು ಪಕ್ಷದ ಮನೆಗೆ ಹೋಗಿ, ಸಹಪಾಠಿ ವಿದ್ಯಾರ್ಥಿಯೊಂದಿಗೆ ತರಗತಿ ಯಲ್ಲಿ ಭಾಗಿಯಾಗಿದ್ದಾರೆ. ಅನೇಕ ಕಡೆಗಳಲ್ಲಿ ಮಕ್ಕಳು ಪಾಠವನ್ನು ಗಂಭೀರವಾಗಿ ಕೇಳುತ್ತಿದ್ದಾರೋ ಅಥವಾ ಇಲ್ಲವೋ ಎಂಬುದನ್ನು ಪಾಲಕ, ಪೋಷಕರೇ ಗಮನಿಸುತ್ತಿದ್ದರು. ವಿದ್ಯಾರ್ಥಿಗಳಿಗೆ ಮತ್ತು ನಮಗೆ ಒಂದು ರೀತಿಯ ಹೊಸ ಅನುಭವ ನೀಡಿದೆ ಎಂದು ಮುಖ್ಯಶಿಕ್ಷಕರೊಬ್ಬರು ವಿವರ ನೀಡಿದರು.
8ರಿಂದ 10ನೇ ತರಗತಿಗಳ ಕಲಿಕೆಯ ನಿರಂತರತೆಗಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಸೇತು ಬಂಧ ಕಾರ್ಯಕ್ರಮ ಅನುಷ್ಠಾನ ಮಾಡಿದೆ. ಮೊದಲ ದಿನದ ತರಗತಿಗಳು ಸೋಮವಾರ ನಡೆದಿದೆ. ವಿದ್ಯಾರ್ಥಿ ಗಳಿಗೆ ತರಗತಿ ಕೊಠಡಿಯ ಅನುಭವ ಸಿಗದೇ ಇದ್ದರೂ, ಕಲಿಕೆ ಹಾಗೂ ಬೋಧನಾ ವಿಧಾನದ ವಿಶಿಷ್ಟ ಅನುಭವನ್ನು ವಿದ್ಯಾರ್ಥಿಗಳಿಗೆ ನೀಡುತ್ತಿದ್ದೇವೆ ಎಂದು ರಾಜ್ಯ ಶಿಕ್ಷಣ ಸಂಶೋಧನೆ ಹಾಗೂ ತರಬೇತಿ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಹೇಳಿದರು.
ಮಕ್ಕಳು ಅತ್ಯಂತ ಸುಲಭವಾಗಿ ಅರ್ಥೈಸಿಕೊಳ್ಳಬಹುದಾದ ಸರಳ ವಿಧಾನದಲ್ಲೇ ಬೋಧನೆಯಿದೆ. ಪಾಠದ ಮಧ್ಯದಲ್ಲಿ ಏನೇ ಸಂಶಯಗಳು ಎದುರಾ ದರೂ ಅದನ್ನು ಪ್ರತ್ಯೇಕವಾಗಿ ಬರೆದಿಟ್ಟುಕೊಂಡು ತರಗತಿ ಮುಗಿದ ನಂತರ ವಿದ್ಯಾರ್ಥಿಗಳು ಸಂಬಂಧ ಪಟ್ಟ ಶಾಲೆಯ ಶಿಕ್ಷಕರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಬಗೆಹರಿಸಿಕೊಳ್ಳುವ ವ್ಯವಸ್ಥೆಯಿದೆ. ಶಿಕ್ಷಕರು ಕೂಡ ವಿದ್ಯಾರ್ಥಿಗಳ ಮನೆಗೆ ಭೇಟಿ ನೀಡಲಿದ್ದಾರೆ ಎಂದು ಶಿಕ್ಷಣ ಇಲಾಖೆಯ ಅಧಿಕಾರಿ ವಿವರಿಸಿದರು.
ಸೇತುಬಂಧ ಕಾರ್ಯಕ್ರಮಕ್ಕೆ ಮೊದಲ ದಿನವೇ ನಿರೀಕ್ಷೆಗೂ ಮೀರಿದ ಪ್ರತಿಕ್ರಿಯೆ ಬಂದಿದೆ. ದೂರದರ್ಶನದ ಪ್ರಸಾರವಾದ ತರಗತಿಗಳನ್ನು ಮಕ್ಕಳ ಅನುಕೂಲಕ್ಕಾಗಿ ಯೂಟ್ಯೂಬ್ ಚಾನಲ್‌ಗಳಲ್ಲೂ ಅಪ್‌ಲೋಡ್ ಮಾಡಿದ್ದೇವೆ. ಈಗ ಇಂಗ್ಲಿಷ್ ಮಾಧ್ಯಮ ತರಗತಿಗಳ ಬೇಡಿಕೆಯು ಹೆಚ್ಚುತ್ತಿದೆ. ಹೀಗಾಗಿ ಈ ನಿಟ್ಟಿನಲ್ಲೂ ಕ್ರಮ ತೆಗೆದುಕೊಳ್ಳುತ್ತಿದ್ದೇವೆ. ಗ್ರಾಮೀಣ ಭಾಗದ ಪ್ರತಿ ವಿದ್ಯಾರ್ಥಿಯನ್ನು ತಲುಪುವುದು ನಮ್ಮ ಉದ್ದೇಶವಾಗಿದೆ. –ಎಂ.ಆರ್.ಮಾರುತಿ, ನಿರ್ದೇಶಕ, ಡಿಎಸ್‌ಇಆರ್‌ಟಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.