ಮಹಾ ಮಳೆಗೆ ಸೇತುವೆಗಳು ಮುಳುಗುವ ಭೀತಿ
Team Udayavani, Jul 21, 2020, 9:05 AM IST
ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಸ್ಥಾನದ ಎಣ್ಣೆ ಹೊಂಡದಲ್ಲಿ ಸೋಮವಾರ ಮಳೆ ನೀರು ಹರಿದು ಬಂದಿದೆ
ಚಿಕ್ಕೋಡಿ: ನೆರೆಯ ಮಹಾರಾಷ್ಟ್ರದ ಕೊಂಕಣ ಭಾಗ ಮತ್ತು ಗಡಿ ಭಾಗದಲ್ಲಿ ಮತ್ತೆ ಮಳೆ ಸುರಿಯಲಾರಂಭಿಸಿದ್ದು, ಗಡಿ ಭಾಗದ ಕೃಷ್ಣಾ ಮತ್ತು ಉಪನದಿಗಳ ನೀರಿನ ಮಟ್ಟದಲ್ಲಿ ಏರಿಕೆ ಕಂಡು ಬರುತ್ತಿದೆ. ಕಳೆದ ಒಂದು ವಾರದಿಂದ ಬಿಡುವು ನೀಡಿದ್ದ ಮಳೆ ಸೋಮವಾರ ಸಂಜೆಯಿಂದ ಜಿಟಿಜಿಟಿ ಸುರಿಯಲು ಆರಂಭಿಸಿದೆ.
ಹೀಗಾಗಿ ಚಿಕ್ಕೋಡಿ ಮತ್ತು ಗಡಿ ಭಾಗದ ವಿವಿಧ ಕಡೆಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ನೆರೆಯ ಕೊಂಕಣ ಭಾಗದಲ್ಲಿ ಮಳೆ ಸುರಿಯುತ್ತಿದೆ. ಪರಿಣಾಮ ನದಿಗಳ ನೀರಿನ ಮಟ್ಟದಲ್ಲಿ ಒಂದು ಅಡಿಯಷ್ಟು ಏರಿಕೆ ಕಂಡು ಬಂದಿದೆ. ಕೃಷ್ಣಾ, ದೂಧಗಂಗಾ ಮತ್ತು ವೇದಗಂಗಾ ನದಿಗಳಲ್ಲಿ ಹೆಚ್ಚಿನ ಪ್ರಮಾಣದ ನೀರು ಹರಿದು ಬರುತ್ತಿದೆ. ಸೋಮವಾರ ರಾತ್ರಿ ಹೆಚ್ಚಾಗಿ ಮಳೆ ಸುರಿದರೆ ಮಂಗಳವಾರ ಸಂಜೆಯವರಿಗೆ ತಾಲೂಕಿನ ಸೇತುವೆಗಳು ಸೇತುವೆ ಮುಳುಗುವ ಹಂತ ತಲುಪಲಿದೆ. ಈಗಾಗಲೇ ಮಹಾರಾಷ್ಟ್ರದ ರಾಜಾಪೂರ ಬ್ಯಾರೇಜ್‌ದಿಂದ ಕೃಷ್ಣಾ ನದಿಗೆ 40 ಸಾವಿರ ಕ್ಯೂಸೆಕ್ ನೀರು ಹರಿದು ಬರಲಾರಂಭಿಸಿದೆ. ದೂಧಗಂಗಾ ಮತ್ತು ವೇದಗಂಗಾ ನದಿಗಳಿಗೆ 10.560 ಕ್ಯೂಸೆಕ್ ನೀರು ಬರಲಾರಂಭಿಸಿದೆ. ಚಿಕ್ಕೋಡಿ ತಾಲೂಕಿನ ಕಲ್ಲೋಳ ಹತ್ತಿರ ಒಟ್ಟು 50,560 ಕ್ಯೂಸೆಕ್ ನೀರು ಹರಿದು ಹಿಪ್ಪರಗಿ ಬ್ಯಾರೇಜಗೆ ಹೋಗುತ್ತಿದೆ. ಅಲ್ಲಿಂದ 44 ಸಾವಿರ ಕ್ಯೂಸೆಕ್ ನೀರು ಹರಿದು ಆಲಮಟ್ಟಿಗೆ ಹೋಗುತ್ತಿದೆ ಎಂದು ತಹಶೀಲ್ದಾರ್ ಸುಭಾಷ ಸಂಪಗಾವಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
CT Ravi case:ಬೆಳಗಾವಿ ಕೋರ್ಟ್ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ
Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್ ಭಾಗ್ವತ್
Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ
Kaup town: ಟ್ರಾಫಿಕ್ ಒತ್ತಡ, ಪಾರ್ಕಿಂಗ್ ಕಿರಿಕಿರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.