ಶೀಘ್ರದಲೇ ಪಾಲಕರ ನೀತಿ ಜಾರಿ: ಠಾಕೂರ್‌


Team Udayavani, Jul 21, 2020, 11:28 AM IST

ಶೀಘ್ರದಲೇ ಪಾಲಕರ ನೀತಿ ಜಾರಿ: ಠಾಕೂರ್‌

ಮುಂಬಯಿ, ಜು. 20: ಮಕ್ಕಳ ರಕ್ಷಣೆ ಮತ್ತು ಪುನರ್ವಸತಿಗಾಗಿ ಮಹಾರಾಷ್ಟ್ರ ಸರಕಾರ ಶೀಘ್ರದಲ್ಲೇ ಪಾಲಕರ ನೀತಿಯನ್ನು ಜಾರಿಗೆ ತರಲಿದೆ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಯಶೋಮತಿ ಠಾಕೂರ್‌ ಹೇಳಿದ್ದಾರೆ.

ಪಿಟಿಐ ಜತೆಗೆ ಮಾತನಾಡಿದ ಅವರು, ಪಾಲಕರ ನೀತಿ ಕೇವಲ ಅನಾಥರಿಗೆ ಮಾತ್ರವಲ್ಲದೆ ಆರೈಕೆ ಮತ್ತು ರಕ್ಷಣೆಯ ಅಗತ್ಯವಿರುವ ಮಕ್ಕಳಿಗೂ ಅನಿವಾರ್ಯವಾಗಿದೆ ಎಂದು ತಿಳಿಸಿದ್ದಾರೆ.

ತರಬೇತಿ ನೀಡುವ ಯೋಜನೆ :  ಪ್ರತಿ ಮಗುವಿಗೆ ಕುಟುಂಬದಲ್ಲಿ ತನ್ನ ಆರೈಕೆ ಮಾಡುವ ಹಕ್ಕು ಬೇಕಾಗಿರುವುದರಿಂದ ನಾವು ಸಾಕು ಪೋಷಕರ ನೀತಿಯನ್ನು ರೂಪಿಸಿದ್ದೇವೆ. ಈ ಯೋಜನೆ ಮೂಲಕ ಮಗುವಿಗೆ ಅಲ್ಪ ಅಥವಾ ವಿಸ್ತೃತ ಅವ ಧಿಗೆ ಮನೆಯನ್ನು ಒದಗಿಸಲಾಗುತ್ತದೆ ಎಂದವರು ಹೇಳಿದ್ದಾರೆ. ಈ ನೀತಿಯ ಭಾಗವಾಗಿ ಸಾಕು ಕುಟುಂಬಗಳನ್ನು ಅವರ ಸಾಮರ್ಥ್ಯ, ಉದ್ದೇಶ, ಮತ್ತು ಮಕ್ಕಳನ್ನು ನೋಡಿಕೊಳ್ಳುವಲ್ಲಿ ಅವರ ಪೂರ್ವಾನುಭವದ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಆಯ್ಕೆ ಮಾಡಲಾದ ಈ ಸಾಕು ಕುಟುಂಬಗಳಿಗೆ ಮಗುವಿನ ಅಗತ್ಯತೆಗಳು ಮತ್ತು ಹಕ್ಕುಗಳನ್ನು ಪೂರೈಸಲು ತರಬೇತಿ ನೀಡಲಾಗುವುದು ಎಂದು ಠಾಕೂರ್‌ ತಿಳಿಸಿದ್ದಾರೆ.

ಮಾರ್ಗಸೂಚಿಗಳು ಸಿದ್ಧವಾಗಿವೆ :  ಈ ಸಾಕು ಕುಟುಂಬವು ಶಾಶ್ವತವಾಗಿರುವುದಿಲ್ಲ ಮತ್ತು ಮಗುವಿನ ಮೇಲೆ ಕಾನೂನು ಹಕ್ಕುಗಳನ್ನು ಹೊಂದಿರುವುದಿಲ್ಲ ಎಂದವರು ಹೇಳಿದ್ದಾರೆ. ಬಾಲಾಪರಾಧ  ನ್ಯಾಯ ಕಾಯಿದೆಯಡಿ ಸಾಕು ಪೋಷಕರನ್ನು ಕಡ್ಡಾಯಗೊಳಿಸಲಾಗಿದೆ. ಈ ಕುರಿತ ಮಾರ್ಗಸೂಚಿಗಳನ್ನು ಈಗಾಗಲೇ ಸಿದ್ಧಪಡಿಸಲಾಗಿದೆ ಮತ್ತು ವಿವಿಧ ಮಧ್ಯಸ್ಥಗಾರರ ಸರಿಯಾದ ತರಬೇತಿಯ ಬಳಿಕ ಅನುಷ್ಠಾನ ಶೀಘ್ರದಲ್ಲೇ ಪ್ರಾರಂಭವಾಗಲಿದೆ ಎಂದು ಸಚಿವೆ ಮಾಹಿತಿ ನೀಡಿದ್ದಾರೆ. ಮಕ್ಕಳ ಆರೈಕೆ ಮತ್ತು ರಕ್ಷಣೆ ಮುಖ್ಯವಾಗಿದೆ. ಈ ನೀತಿಯನ್ನು ಮುಂಬಯಿ ಉಪನಗರ, ಸೊಲ್ಲಾಪುರ, ಪುಣೆ, ಪಾಲ್ಘರ್‌ ಮತ್ತು ಅಮರಾವತಿಯಲ್ಲಿ ಪ್ರಾಯೋಗಿಕ ಆಧಾರದ ಮೇಲೆ ಜಾರಿಗೆ ತರಲಾಗುವುದು ಎಂದವರು ಹೇಳಿದ್ದಾರೆ.

ಸಮಾಲೋಚನಾ ಗುಂಪುಗಳ ರಚನೆ :  ಕೋವಿಡ್ ಲಾಕ್‌ಡೌನ್‌ ಸಮಯದಲ್ಲಿ 3,164 ಮೇಲ್ವಿಚಾರಕರು ಮತ್ತು ಅಂಗನವಾಡಿ ಕಾರ್ಯಕರ್ತರು ವಾಟ್ಸಾಪ್‌ ಗುಂಪುಗಳನ್ನು ರೂಪಿಸಿ ಶಾಲಾಪೂರ್ವ ಚಟುವಟಿಕೆಗಳ ವೀಡಿಯೋಗಳ ಮೂಲಕ 1,43,504 ಮಕ್ಕಳನ್ನು ತಲುಪಿಸಿದ್ದಾರೆ. ಅಂತೆಯೇ ಪೋಷಣೆ, ಆರೋಗ್ಯ ಮತ್ತು ನೈರ್ಮಲ್ಯದ ಸಮಸ್ಯೆಗಳನ್ನು ಪರಿಹರಿಸಲು ಪೋಷಕರ ಮೊಬೈಲ್‌ ಆಧಾರಿತ ಸಮಾಲೋಚನಾ ಗುಂಪುಗಳನ್ನು ಕೂಡ ರಚಿಸಲಾಗಿದೆ ಎಂದು ಸಚಿವೆ ಠಾಕೂರ್‌ ಹೇಳಿದ್ದಾರೆ. ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳು ಮತ್ತು ದುರ್ಬಲ ಗರ್ಭಿಣಿಯರು ಮತ್ತು ಹಾಲುಣಿಸುವ ತಾಯಂದಿರ ಬೆಳವಣಿಗೆಯ ಮೇಲ್ವಿಚಾರಣೆಯನ್ನು ಪುನರಾರಂಭಿಸುವಂತೆಯೂ ಇಲಾಖೆಯ ಅಧಿ  ಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

1—amanatulla-khan

Waqf; ಅಮಾನತುಲ್ಲಾ ಖಾನ್ ಗೆ ಜಾಮೀನು: ಮೋದಿಯ ಸುಳ್ಳು ಪ್ರಕರಣ ಬಹಿರಂಗ ಎಂದ ಆಪ್

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

Vimana 2

Kochi airport; ಶಬರಿಮಲೆ ಭಕ್ತರಿಗೆ ಅನುಕೂಲವಾಗುವಂತೆ ವಿಶೇಷ ವ್ಯವಸ್ಥೆಗಳು

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

1-kanna

Maharashtra Election; ಫಡ್ನವಿಸ್ ಪತ್ನಿಯ ವಿರುದ್ಧ ಕನ್ಹಯ್ಯಾ ಕುಮಾರ್ ಹೇಳಿಕೆ

1-raga

Modiji ಸಂವಿಧಾನವನ್ನು ಓದಲೇ ಇಲ್ಲ, ಹಾಗಾಗಿ…: ರಾಹುಲ್ ಗಾಂಧಿ

ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

Belagavi: ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-putthige-2

State Formation: ಶ್ರೀ ಕೃಷ್ಣ ಬೃಂದಾವನ ಹೂಸ್ಟನ್ ಶಾಖೆಯಲ್ಲಿ ಸಂಸ್ಥಾಪನಾ ದಿನಾಚರಣೆ

Desi Swara: ಇಟಲಿಯಲ್ಲಿ ದೀಪಾವಳಿ ಬೆಳಕು!

Desi Swara: ಇಟಲಿಯಲ್ಲಿ ದೀಪಾವಳಿ ಬೆಳಕು!

12-

Desiswara: ನ್ಯೂಯಾರ್ಕ್‌ ಸರಕಾರದಿಂದ ಭರ್ಜರಿ ದೀಪಾವಳಿ ಆಚರಣೆ

11-1

Desiswara: ಜಾಗತಿಕ ಬೆಳಕಿನ ಹಬ್ಬ ದೀಪಾವಳಿ – ಬೆಳಕೆಂದರೆ ಬರಿಯ ಬೆಳಕಲ್ಲ…

10-

Desiswara: ಕನ್ನಡ ಉಳಿವಿಗೆ ಜವಾಬ್ದಾರಿಯುತ ನಡೆ ನಮ್ಮದಾಗಲಿ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

POLICE-5

Malpe: ಜುಗಾರಿ ಅಡ್ಡೆಗೆ ದಾಳಿ, ವಶಕ್ಕೆ

POlice

Malpe: ಜೂಜಾಟ; 12 ಮಂದಿ ಅಂದರ್‌; ಪ್ರಕರಣ ದಾಖಲು

1—amanatulla-khan

Waqf; ಅಮಾನತುಲ್ಲಾ ಖಾನ್ ಗೆ ಜಾಮೀನು: ಮೋದಿಯ ಸುಳ್ಳು ಪ್ರಕರಣ ಬಹಿರಂಗ ಎಂದ ಆಪ್

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

Vimana 2

Kochi airport; ಶಬರಿಮಲೆ ಭಕ್ತರಿಗೆ ಅನುಕೂಲವಾಗುವಂತೆ ವಿಶೇಷ ವ್ಯವಸ್ಥೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.