ತಿದ್ದುಪಡಿ ಗೆಜೆಟ್ ಪ್ರತಿ ಸುಟ್ಟು ಆಕ್ರೋಶ
Team Udayavani, Jul 22, 2020, 7:47 AM IST
ಮೈಸೂರು: ಪ್ರತಿವರ್ಷ ಜು.21ರಂದು ರೈತ ಹುತಾತ್ಮ ದಿನಾಚರಣೆಗೆ ಬದಲಾಗಿ ಈ ಬಾರಿ ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ವಿರೋಧಿಸಿ ಸಾಮೂಹಿಕ ನಾಯಕತ್ವದಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ತಿದ್ದುಪಡಿ ಕಾಯ್ದೆ ಗೆಜೆಟ್ ಪ್ರತಿ ಸುಟ್ಟು ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ರೈತಸಂಘದ ಜಿಲ್ಲಾಧ್ಯಕ್ಷ ವಿದ್ಯಾಸಾಗರ ಟಿ.ರಾಮೇಗೌಡ, ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ಯಾವುದೇ ಚರ್ಚೆಗಳಿಲ್ಲದೆ ಸಾಧಕ ಬಾಧಕಗಳನ್ನು ಅವಲೋಕಿಸದೆ ತಮ್ಮ ಸ್ವಾರ್ಥಕ್ಕೆ ತಮ್ಮ ಇಚ್ಛಾನುಸಾರ ತಮಗೆ ಚುನಾವಣೆಗಳಲ್ಲಿ ಹಣ ಸಹಾಯ ಮಾಡಿದ ಮತ್ತು ಸರ್ಕಾರ ರಚಿಸಲು ಅಡ್ಡದಾರಿ ಮೂಲಕ ಬೇಕಾದಷ್ಟು ಹಣ ತೊಡಗಿಸಿದ ಬಂಡವಾಳಶಾಹಿಗಳಿಗೆ ಋಣ ತೀರಿಸಲು ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಮಾಡಿದ್ದಾರೆಂದು ಆರೋಪಿಸಿದರು.
ಮುಖ್ಯಮಂತ್ರಿಗಳು ಏಕಾಏಕಿ ಸುಗ್ರೀವಾಜ್ಞೆ ಮೂಲಕ ಕಾಯ್ದೆಗೆ ತಿದ್ದುಪಡಿ ತಂದಿರುವುದನ್ನು ವಿರೋಧಿಸಿ ಎಲ್ಲಾ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿ ಕಚೇರಿಯ ಮುಂದೆ ಒಂದು ದಿನದ ಧರಣಿ ನಡೆಸಿದ್ದೇವೆ. ಮನವಿ ಪತ್ರವನ್ನು ಡೀಸಿ ಮೂಲಕ ಸಿಎಂಗೆ ರವಾನಿಸುತ್ತಿದ್ದೇವೆ. ನಮ್ಮ ಹೋರಾಟಕ್ಕೆ ಸೂಕ್ತ ಪ್ರತಿಕ್ರಿಯೆ ಬರದಿದ್ದರೆ ಆ.15ರಂದು ಎಲ್ಲಾ ಜಿಲ್ಲಾ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಕರಾಳ ಸ್ವಾತಂತ್ರ್ಯ ದಿನಾಚರಣೆ ಆಚರಿಸುವ ಮೂಲಕ ಅನಿರ್ದಿಷ್ಟಾವಧಿ ಸತ್ಯಾಗ್ರಹ ಮಾಡುವುದಾಗಿ ಎಚ್ಚರಿಸಿದರು.
ಬಳಿಕ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದರು. ಪ್ರತಿಭಟನೆಯಲ್ಲಿ ರಘು ಹಿಮ್ಮಾವು, ಮಂಜುಕಿರಣ್, ಕಳ್ಳಿಪುರ ಮಹದೇವಸ್ವಾಮಿ ಇತರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
Congress: ಜಮೀರ್ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್
H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!
Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.