ಸೋಂಕಿತರ ಸಂಖ್ಯೆ 813ಕ್ಕೇರಿಕೆ
Team Udayavani, Jul 22, 2020, 8:15 AM IST
ತುಮಕೂರು: ಮಂಗಳವಾರ 37 ಜನರಿಗೆ ಸೋಂಕು ದೃಢ ಪಟ್ಟಿದ್ದು, ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 813ಕ್ಕೆ ಏರಿಕೆಯಾಗಿದ್ದು, ಸೋಂಕಿಗೆ ಮತ್ತೆ ಇಬ್ಬರು ಬಲಿಯಾಗಿದ್ದು ಮೃತರ ಸಂಖ್ಯೆ 28ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿ ಕಾರಿ ಡಾ. ನಾಗೇಂದ್ರಪ್ಪ ತಿಳಿಸಿದ್ದಾರೆ.
ತುಮಕೂರು ತಾಲೂಕಿನಲ್ಲಿ 20, ಶಿರಾ – 6, ಕುಣಿಗಲ್ – 2, ಪಾವಗಡ-3, ಗುಬ್ಬಿ – 3, ತಿಪಟೂರು – 2, ಮಧುಗಿರಿ-1 ಸೇರಿ ಒಟ್ಟು 37 ಜನರಲ್ಲಿ ಸೋಂಕು ಕಂಡು ಬಂದಿದೆ. ಜಿಲ್ಲೆಯಲ್ಲಿ ಈ ವರೆಗೆ 27,731 ಜನರ ಗಂಟಲು ದ್ರವ ಪರೀಕ್ಷೆ ಮಾಡಲಾಗಿದ್ದು, ಅದರಲ್ಲಿ 23,206 ಜನರಿಗೆ ನೆಗೆಟಿವ್ ಬಂದಿದೆ. ಅದರಲ್ಲಿ ನಿಗಾವಣೆಯಲ್ಲಿ 2,050 ಜನರಿದ್ದು ಪ್ರಥಮ ಸಂಪರ್ಕ 1074, ದ್ವೀತಿಯ 976 ಜನರಿದ್ದು 813 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಅದರಲ್ಲಿ 436 ಜನ ಗುಣಮುಖರಾಗಿದ್ದಾರೆ, ಇನ್ನೂ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ 349 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. ಐಸಿಯುನಲ್ಲಿ 11 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದರು.
ಇಬ್ಬರ ಸಾವು: ಜಿಲ್ಲೆಯಲ್ಲಿ ಕೋವಿಡ್ ಸೋಂಕಿಗೆ ಮೃತಪಡು ತ್ತಿರುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಒಂದೇ ದಿನ ಇಬ್ಬರು ಕೋವಿಡ್ ಸೋಂಕಿಗೆ ಬಲಿಯಾಗುವ ಮೂಲಕ ಮೃತರ ಸಂಖ್ಯೆ 28ಕ್ಕೆ ಏರಿಕೆಯಾಗಿದೆ. ತುಮಕೂರಿನ ಬನಶಂಕರಿ ಬಡಾ ವಣೆಯ 76 ವರ್ಷದ ವೃದ್ಧೆ, ಗುಬ್ಬಿ ನಿಟ್ಟೂರು ಗ್ರಾಮದ 52 ವರ್ಷದ ವ್ಯಕ್ತಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಧುಗಿರಿ: ಕಚೇರಿಯಲ್ಲೇ DYSP ರಾಸಲೀಲೆ!!: ವಿಡಿಯೋ ಸೆರೆ
Minister ಸೋಮಣ್ಣ, ಸಿ.ಎಸ್. ಹೆಸರಲ್ಲಿ ನಕಲಿ ಸಹಿ, ಲೆಟರ್ಹೆಡ್: ಬಂಧನ
Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು
Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ ಸಾವು
Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.