ಕಳ್ಳ ಚಿನ್ನದಿಂದ ಉಗ್ರರಿಗೆ ನೆರವು; ಎನ್‌ಐಎ ರಿಮಾಂಡ್‌ ವರದಿಯಲ್ಲಿ ಉಲ್ಲೇಖ


Team Udayavani, Jul 22, 2020, 9:12 AM IST

ಕಳ್ಳ ಚಿನ್ನದಿಂದ ಉಗ್ರರಿಗೆ ನೆರವು; ಎನ್‌ಐಎ ರಿಮಾಂಡ್‌ ವರದಿಯಲ್ಲಿ ಉಲ್ಲೇಖ

ಕೊಚ್ಚಿ/ತಿರುವನಂತಪುರ: ಚಿನ್ನ ಕಳ್ಳ ಸಾಗಣೆ ಮಾಡುವ ಮಾಡುವ ಮೂಲಕ ದೇಶದ ಅರ್ಥ ವ್ಯವಸ್ಥೆ ಕುಸಿವಂತೆ ಮಾಡುವ ಉದ್ದೇಶವೂ ಸ್ವಪ್ನ ಸುರೇಶ್‌ ಗ್ಯಾಂಗ್‌ಗೆ ಇತ್ತು. ಅದರಿಂದ ಬಂದ ಹಣವನ್ನು ಉಗ್ರವಾದಿಗಳಿಗೆ ವಿತರಿಸುವ ಬಗ್ಗೆ ಯೋಚಿಸಲಾಗಿತ್ತು ಎಂದು ಎನ್‌ಐಎ ಹೇಳಿದೆ.

ಕೊಚ್ಚಿಯಲ್ಲಿರುವ ಎನ್‌ಐಎ ವಿಶೇಷ ಕೋರ್ಟ್‌ಗೆ ಸಲ್ಲಿಸಲಾಗಿರುವ ರಿಮ್ಯಾಂಡ್‌ ರಿಪೋರ್ಟ್‌ನಲ್ಲಿ ಈ ಅಂಶ ಉಲ್ಲೇಖೀಸಲಾಗಿದೆ. ಕೇರಳದ ರಾಜಕೀಯ ವಲಯದಲ್ಲಿ ವಿವಾದ ಸೃಷ್ಟಿಸಿರುವ ಪ್ರಕರಣದಲ್ಲಿ ಸ್ವಪ್ನಾ ಹಾಗೂ ಸಂದೀಪ್‌ ನಾಯರ್‌ ಕಳ್ಳಸಾಗಣೆಯಲ್ಲಿ ತಮ್ಮ ಪಾತ್ರ ಇರುವುದನ್ನು ಒಪ್ಪಿಕೊಂಡಿದ್ದಾರೆ. ಪ್ರಕರಣದ ಸೂತ್ರಧಾರಿ ರಮೀಜ್‌. ಆತನ ಆಣತಿಯಂತೆ ಸ್ವಪ್ನಾ ಮುಂತಾದವರು ನಡೆದುಕೊಳ್ಳುತ್ತಿದ್ದರು. ಲಾಕ್‌ಡೌನ್‌ ಅವಧಿಯಲ್ಲಿ ಹೆಚ್ಚೆಚ್ಚು ಚಿನ್ನದ ಕಳ್ಳಸಾಗಣೆ ಮಾಡಬಹುದೆಂಬ ಲೆಕ್ಕಾಚಾರ ಹಾಕಿದ್ದ ರಮೀಜ್‌ ಆ ನಿಟ್ಟಿನಲ್ಲಿ ಕಾರ್ಯ ನಿರತನಾಗಿದ್ದ ಎಂದು ವರದಿಯಲ್ಲಿ ಉಲ್ಲೇಖೀಸಲಾಗಿದೆ

ಕಸ್ಟಡಿ ವಿಸ್ತರಣೆ: ಎನ್‌ಐಎ ಬಂಧನದಲ್ಲಿರುವ ಸ್ವಪ್ನ ಸುರೇಶ್‌ ಹಾಗೂ ಸಂದೀಪ್‌ ನಾಯರ್‌ ಬಂಧನಾವಧಿಯನ್ನು ಜು. 24ರವರೆಗೆ ವಿಸ್ತರಿಸಲಾಗಿದೆ. ಕೊಚ್ಚಿಯಲ್ಲಿರುವ ಎನ್‌ಐಎ ವಿಶೇಷ ಕೋರ್ಟ್‌ ಈ ಆದೇಶ ನೀಡಿದೆ. ಈ ನಡುವೆ, ಸ್ವಪ್ನ ಸುರೇಶ್‌ ಅವರು ತಮಗೆ ಜಾಮೀನು ನೀಡಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆ ಕೂಡ, ಜು. 24ರಂದು ನಡೆಯುವ ನಿರೀಕ್ಷೆಯಿದೆ.

ಸಚಿವ ಜಲೀಲ್‌ ನಂಟಿನ ಬಗ್ಗೆ ತನಿಖೆ?: ಕೇರಳದ ಉನ್ನತ ಶಿಕ್ಷಣ ಸಚಿವ ಕೆ.ಟಿ. ಜಲೀಲ್‌ ಹಾಗೂ ಯುಎಇ ದೂತಾವಾಸ ಕಚೇರಿಯ ಸಿಬಂದಿಯ ನಡುವೆ ಇದ್ದ ಸಂಬಂಧದ ಬಗ್ಗೆ ವಿದೇಶಾಂಗ ಇಲಾಖೆ ಮಾಹಿತಿ ಕಲೆಹಾಕಿದ್ದು ಆ ಬಗ್ಗೆ ಪರಿಶೀಲನೆ ನಡೆಸಲಾರಂಭಿಸಿದೆ ಎಂದು “ಮಾತೃ ಭೂಮಿ ಇಂಗ್ಲಿಷ್‌’ ವರದಿ ಮಾಡಿದೆ. ರಂಜಾನ್‌ ವೇಳೆ, ಯುಎಇಯಿಂದ ತರಿಸಲಾಗಿದ್ದ ಕಿಟ್‌ಗಳನ್ನು ವಿತರಣೆ ಮಾಡಿರುವ ವಿವಾದದ ಬಗ್ಗೆಯೂ ಸಚಿವಾಲಯ ಪರಿಶೀಲನೆ ನಡೆಸುತ್ತಿದೆ.

ಮತ್ತೂಂದೆಡೆ, ಯುಎಇ ದೂತಾವಾಸ ಕಚೇರಿಯ ಸಿಬ್ಬಂದಿಯ ಜೊತೆಗೆ ಜಲೀಲ್‌ ಅವರು ನಂಟು ಹೊಂದಿರುವುದು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ನಿಯಮಗಳ ಪ್ರಕಾರ, ಯಾವುದೇ ವಿದೇಶಿ ದೂತಾವಾಸಗಳ ಸಿಬಂದಿಯ ಜೊತೆಗೆ ರಾಜ್ಯ ಸರಕಾರಗಳ ಸಚಿವರು, ರಾಜ್ಯಗಳ ಶಾಸಕರು ನಂಟು ಹೊಂದಿರುವಂತಿಲ್ಲ. ಆದರೆ, ಇಲ್ಲಿಯೂ ನಿಯಮ ಉಲ್ಲಂಘನೆಯಾಗಿದೆ ಎಂದು ಹೇಳಲಾಗಿದೆ.

ಅಧಿಕಾರಿಗಳು ಶಾಮೀಲು?
ಕೇರಳ ಚಿನ್ನದ ಕಳ್ಳಸಾಗಣೆಯಲ್ಲಿ ಕೇಂದ್ರ ಸರಕಾರದ ತನಿಖಾ ಸಂಸ್ಥೆಗಳ ತನಿಖೆ ಮತ್ತಷ್ಟು ಆಳವಾಗಿ ಸಾಗುತ್ತಿದ್ದಂತೆ ಹಲವಾರು ಸ್ಫೋಟಕ ವಿಚಾರಗಳು ಹೊರ ಬರಲಾರಂಭಿಸಿವೆ. ಈ ಪ್ರಕರಣದ ಆರೋಪಿಯಾಗಿರುವ ಸ್ವಪ್ನಾ ಸುರೇಶ್‌, ಕೇರಳ ಪೊಲೀಸ್‌ನ ಇಬ್ಬರು ಉನ್ನತ ಅಧಿಕಾರಿಗಳ ಜೊತೆಗೆ ನಂಟು ಹೊಂದಿರುವ ಬಗ್ಗೆ ಕೆಲವಾರು ಸುಳಿವು ಸಿಕ್ಕಿದ್ದು, ಅವರ ಸಹಾಯದಿಂದಲೇ ಆಕೆ ಈವರೆಗೆ ಕೆಲವಾರು ಕಳ್ಳಸಾಗಣೆಗಳನ್ನು ಸುಲಭವಾಗಿ ನಡೆಸಿಕೊಂಡು ಹೋಗಿರಬಹುದು ಎಂದು ಅನುಮಾನಿಸಲಾಗಿದೆ.

ಟಾಪ್ ನ್ಯೂಸ್

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ..ಮೀನುಗಾರಿಕಾ ದೋಣಿಯಲ್ಲಿದ್ದ 6 ಟನ್ ಮಾದಕ ವಸ್ತು ವಶ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

suicide

Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು

accident

Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ

1-eee

Shiradi: ಬಸ್‌ ಢಿಕ್ಕಿಯಾಗಿ ಪಾದಚಾರಿ ಸಾ*ವು

death

Bengaluru:ಮೂಲ್ಕಿಯ ಬಡಗಿ ಖಾಸಗಿ ಹೊಟೇಲ್‌ ನಲ್ಲಿ ಆತ್ಮಹ*ತ್ಯೆ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.