ಕಳಸ ಪೊಲೀಸ್ ಠಾಣೆಯ ನಾಲ್ವರು ಸಿಬ್ಬಂದಿಗೆ ಕೋವಿಡ್
Team Udayavani, Jul 22, 2020, 12:27 PM IST
ಮೂಡಿಗೆರೆ: ಕಳಸ ಪೊಲೀಸ್ ಠಾಣೆಯ ನಾಲ್ವರು ಸಿಬ್ಬಂದಿಗಳಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. ಸಿಬ್ಬಂದಿಗಳಿಗೆ ಸೋಂಕು ತಗುಲಿರುವ ಮಾಹಿತಿ ಲಭ್ಯವಾಗುತ್ತಿದ್ದಂತೆ ಕಳಸ ಪೊಲೀಸ್ ಠಾಣೆಯನ್ನು ಸೀಲ್‌ಡೌನ್ ಮಾಡಲಾಗಿದೆ.
ಠಾಣೆಯಿಂದ ನೂರು ಮೀಟರ್ ವ್ಯಾಪ್ತಿಯ ಎಲ್ಲಾ ಅಂಗಡಿ- ಮುಂಗಟ್ಟುಗಳನ್ನು ಬಂದ್ ಮಾಡಲಾಗಿದ್ದು, ಪೊಲೀಸ್ ಠಾಣೆ ಹಾಗೂ ಕೆ.ಎಂ. ರಸ್ತೆಯನ್ನು ಸ್ಯಾನಿಟೈಸ್ ಮಾಡಲಾಯಿತು. ಸೋಂಕಿತರನ್ನು ಚಿಕ್ಕಮಗಳೂರು ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಅವರ ಪ್ರಥಮ ಸಂಪರ್ಕಕ್ಕೆ ಬಂದವರ ಗಂಟಲು ದ್ರವ ಪರಿಶೀಲನೆಗೆ ಹಾಗೂ ದ್ವಿತೀಯ ಸಂಪರ್ಕ ಹೊಂದಿದವರಿಗೆ ಹೋಂ ಕ್ವಾರಂಟೈನ್ ಮಾಡುವಂತೆ ಸೂಚಿಸಲಾಗಿದೆ. ವೈದ್ಯ ಡಾ| ಪ್ರೇಮ್ ಕುಮಾರ್, ಕಂದಾಯ ನಿರೀಕ್ಷಕ ಅಜ್ಜೆಗೌಡ, ಪಿಡಿಒ ಕವೀಶ್, ಲೆಕ್ಕ ಪರಿಶೋಧಕ ಸಂತೋಷ್, ವಿ.ಎ. ಪ್ರಸನ್ನ ಇದ್ದರು.
ಕಳಸದ ಜನತೆಯಲ್ಲಿ ಹೆಚ್ಚಿದ ಆತಂಕ: ಕಳಸದ ಮುಖ್ಯ ರಸ್ತೆಯಲ್ಲಿಯೇ ಇರುವ ಪೊಲೀಸ್ ಠಾಣೆಯ ನಾಲ್ವರು ಪೊಲೀಸರಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಸಹಜವಾಗಿ ಕಳಸ ಊರಿನ ಜನತೆಯಲ್ಲಿ ಆತಂಕ ಮನೆಮಾಡಿದೆ. ಈ ಹಿಂದೆ ನಾಲ್ವರಿಗೆ ಸೋಂಕು ದೃಢಪಟ್ಟು ಅವರು ಗುಣಮುಖರಾಗಿ ಹಿಂತಿರುಗಿ ಬಂದ ಸ್ವಲ್ಪದರಲ್ಲಿಯೇ ಮತ್ತೆ ನಾಲ್ವರಿಗೆ ಸೋಂಕು ದೃಢಪಟ್ಟಿರುವುದು, ಅದರಲ್ಲಿಯೂ ಸದಾ ಸಾರ್ವಜನಿಕ ಸಂಪರ್ಕದಲ್ಲಿ ಇರಬೇಕಾದ ಪೊಲೀಸರಿಗೆ ಸೋಂಕು ದೃಢಪಟ್ಟಿರುವುದು ಜನರ ನಿದ್ದೆಗೆಡಿಸಿದೆ. ಕಳಸ ಪ್ರವಾಸಿ ತಾಣವಾಗಿದ್ದು ತಾಲೂಕಿಗೆ ಬರುವ ಪ್ರವಾಸಿಗರನ್ನು ತಪಾಸಣೆ ಮಾಡುವ ವೇಳೆಯಲ್ಲಿ ಸೋಂಕು ಹರಡಿರಬಹುದು ಅಥವಾ ಹೊರ ರಾಜ್ಯಕ್ಕೆ ಕರ್ತವ್ಯಕ್ಕೆ ತೆರಳಿದಾಗ ಸೋಂಕು ತಗುಲಿತ್ತೋ ಎನ್ನುವ ವಿಚಾರ ಚರ್ಚೆಯಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ
Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ
Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್‌ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.