ಆತಂಕ ಮೂಡಿಸಿದ ಜಯಶ್ರೀ ಫೇಸ್ಬುಕ್ ಪೋಸ್ಟ್
Team Udayavani, Jul 23, 2020, 5:51 AM IST
ಬೆಂಗಳೂರು: ನಟಿ ಹಾಗೂ ಬಿಗ್‌ಬಾಸ್-3 ಸ್ಪರ್ಧಿ ಜಯಶ್ರೀ ರಾಮಯ್ಯ ಅವರು ಆತ್ಮಹತ್ಯೆ ಮಾಡಿಕೊಳ್ಳುವ ರೀತಿಯಲ್ಲಿ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದು, ಸಂಬಂಧಿಕರು ಮತ್ತು ಸ್ನೇಹಿತರಲ್ಲಿ ಆತಂಕ ಮೂಡಿಸಿತ್ತು.
ಜಯಶ್ರೀ ಖಿನ್ನತೆಗೆ ಒಳಗಾಗಿದ್ದ ಕಾರಣ ಮಂಗಳವಾರ ರಾತ್ರಿ ಜಯನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.
ತಡರಾತ್ರಿ ಪರಿಚಯಸ್ಥರು ಆಸ್ಪತ್ರೆಗೆ ಬಂದು ಅವರ ಜತೆ ಜಗಳವಾಡಿದ್ದರು ಎನ್ನಲಾಗಿದೆ.
ಅದರಿಂದ ಬೇಸರಗೊಂಡ ಅವರು ಬುಧವಾರ ಬೆಳಗ್ಗೆ ಫೇಸ್‌ಬುಕ್‌ನಲ್ಲಿ ‘ಐ ಕ್ವಿಟ್, ಗುಡ್ ಬೈ’ ಎಂದು ಪೋಸ್ಟ್ ಮಾಡಿದ್ದರು.
ಅದನ್ನು ಕಂಡ ಕೆಲವರು ಕರೆ ಮಾಡಿದರೂ ಆಕೆ ಸ್ವೀಕರಿಸಿಲ್ಲ. ಬಳಿಕ ಪುಟ್ಟೇನಹಳ್ಳಿ ಪೊಲೀಸರಿಗೆ ಮಾಹಿತಿ ನೀಡಲಾಯಿತು.
ಪೊಲೀಸರು ಆಕೆ ಇರುವ ಸ್ಥಳವನ್ನು ಪತ್ತೆ ಹಚ್ಚಿ ಆಸ್ಪತ್ರೆಗೆ ಧಾವಿಸಿ ಆತ್ಮಹತ್ಯೆಯಂತಹ ನಿರ್ಧಾರ ಕೈಗೊಳ್ಳದಂತೆ ಮನವಿ ಮಾಡಿದ್ದಾರೆ. ಆದರೆ ಪ್ರಕರಣ ದಾಖಲಿಸಿಕೊಂಡಿಲ್ಲ ಎಂದು ಪೊಲೀಸರು ಹೇಳಿದರು.
ಪೋಸ್ಟ್ ಡಿಲೀಟ್: ಸ್ನೇಹಿತರು, ಸಂಬಂಧಿಕರು ಫೋನ್ ಕರೆ ಮಾಡುತ್ತಿದ್ದಂತೆ ಜಯಶ್ರೀ ತನ್ನ ಪೋಸ್ಟ್ ಡಿಲೀಟ್ ಮಾಡಿದ್ದಾರೆ. ಬಳಿಕ ತಾನು ಸುರಕ್ಷಿತವಾಗಿದ್ದೇನೆ ಎಂದು ಮತ್ತೊಂದು ಪೋಸ್ಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.