ಅಸ್ಸಾಂ ಪ್ರವಾಹ: ಇಲ್ಲಿಯವರೆಗೂ 89 ಜನರು ಬಲಿ, ಸಂಕಷ್ಟದಲ್ಲಿವೆ 26ಜಿಲ್ಲೆಯ 2,525 ಗ್ರಾಮಗಳು

Team Udayavani, Jul 23, 2020, 7:59 AM IST

assam

ಗುವಾಹಟಿ: ಅಸ್ಸಾಂನಲ್ಲಿನ ಪ್ರವಾಹವು 26 ಜಿಲ್ಲೆಗಳ ಮೇಲೆ ಪರಿಣಾಮ ಬೀರಿದ್ದು, ಜುಲೈ 22 ರವರೆಗೆ 89 ಜನರನ್ನು ಬಲಿ ತೆಗೆದುಕೊಂಡಿದೆ ಎಂದು ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಎಎಸ್‌ ಡಿಎಂಎ) ತಿಳಿಸಿದೆ.

ಎಎಸ್‌ ಡಿಎಂಎ ಬುಧವಾರ ನೀಡಿದ ವರದಿಯ ಪ್ರಕಾರ, ಬಾರ್ಪೆಟಾ, ದಿಬ್ರುಘರ್, ಕೊಕ್ರಜಾರ್, ಬೊಂಗೈಗಾಂವ್, ಟಿನ್ಸುಕಿಯಾ, ಇತರ ಜಿಲ್ಲೆಗಳಲ್ಲಿ ಪ್ರವಾಹ ತೀವ್ರವಾಗಿ ಪರಿಣಾಮ ಬೀರಿದ್ದು ಅಪಾರ ನಷ್ಟ ಸಂಭವಿಸಿದೆ. ಮಾತ್ರವಲ್ಲದೆ 26,31,343 ಜನರನ್ನು ಪ್ರವಾಹ ಬಾಧಿಸಿದೆ.

ಬ್ರಹ್ಮಪುತ್ರ ಮತ್ತು ಅದರ ಉಪನದಿಗಳಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿರುವ ಕಾರಣ ಸುಮಾರು 2,525 ಗ್ರಾಮಗಳು ಸಂಕಷ್ಟಕ್ಕೀಡಾಗಿದ್ದು, 1,15,515,25 ಹೆಕ್ಟೇರ್ ಪ್ರದೇಶದಲ್ಲಿನ ಬೆಳೆಗಳು ನಾಶವಾಗಿದೆ.

ನೆರೆಯ ತೀವ್ರತೆಗೆ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ 120ಕ್ಕಿಂತ ಹೆಚ್ಚು ಪ್ರಾಣಿಗಳು ಸಾವನ್ನಪ್ಪಿದ್ದು, 147 ವನ್ಯಜೀವಿಗಳನ್ನು ರಕ್ಷಿಸಲಾಗಿದೆ. ಅದರ ಜೊತೆಗೆ ಹಲವಾರು ಪ್ರಾಣಿಗಳು ನೆರೆಯ ಆರ್ಭಟದಿಂದ ಪಾರಾಗಲು ಎತ್ತರದ ಪ್ರದೆಶಗಳತ್ತ ವಲಸೆ ಹೋಗಿವೆ ಎಮದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.

ಸದ್ಯ 42,282 ಜನರು 391 ವಿವಿಧ ಪರಿಹಾರ ಕೇಂದ್ರದಲ್ಲಿ ಆಶ್ರಯ ಪಡೆದಿದ್ದಾರೆ. ರಾಜ್ಯ ವಿಪ್ಪತ್ತು ನಿರ್ವಹಣಾ ತಂಡ ಮತ್ತು ರಾಷ್ಟ್ರೀಯ ವಿಪ್ಪತ್ತು ನಿರ್ವಹಣಾ ತಂಡ ಮತ್ತು ಸ್ಥಳೀಯರು ಸೇರಿಕೊಂಡು ಸುಮಾರು 452 ಜನರನ್ನು ಪ್ರವಾಹದಿಂದ ರಕ್ಷಿಸಿದ್ದಾರೆ ಎನ್ನಲಾಗಿದೆ.

ತಗ್ಗುಪ್ರದೇಶದಲ್ಲಿ ನೀರಿನ ಹರಿವು ಹೆಚ್ಚಾಗಿದ್ದು, ಹಲವೆಡೆ ರಸ್ತೆ, ಸೇತುವೆ ಮಾತ್ರವಲ್ಲದೆ ಮನೆಗಳಿಗೂ ಹಾನಿಯಾಗಿದೆ. ಕೇಂದ್ರ ಸರ್ಕಾರ ಅಸ್ಸಾಂಗೆ ಮೊದಲ ಹಂತದ ಹಣಕಾಸಿನ ನೆರವು 346 ಕೋಟಿ ರೂಪಾಯಿಯನ್ನು ಬುಧವಾರ ಘೋಷಿಸಿದ್ದು, ಕೂಡಲೇ ಬಿಡುಗಡೆ ಮಾಡುವುದಾಗಿ ತಿಳಿಸಿದೆ. ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೊನೊವಾಲ್ ಅವರು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಜತೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ಸ್ಥಿತಿಗತಿಯನ್ನು ವಿವರಿಸಿದ್ದು, ಹೆಚ್ಚಿನ ನೆರವು ಕೋರಿದ್ದಾರೆ.

ಟಾಪ್ ನ್ಯೂಸ್

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ec-aa

Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ

Gundlupet-Arrest

Gundlupet: ಜಿಂಕೆ ಮಾಂಸ ಸಾಗಾಣೆ: ಐವರ ಬಂಧಿಸಿದ ಅರಣ್ಯಾಧಿಕಾರಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ec-aa

Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ

amit Shah (2)

Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ

1-ragaaa

PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

DKShi

Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Kasargod: ನಾಟಕ ತಂಡ ಸಂಚರಿಸುತ್ತಿದ್ದ ಬಸ್‌ ಮಗುಚಿ ಇಬ್ಬರು ನಟಿಯರ ಸಾವು

Kasargod: ನಾಟಕ ತಂಡ ಸಂಚರಿಸುತ್ತಿದ್ದ ಬಸ್‌ ಮಗುಚಿ ಇಬ್ಬರು ನಟಿಯರ ಸಾವು

3

Kasaragod: ಎಡನೀರು ಶ್ರೀ ವಿಷ್ಣುಮಂಗಲ ದೇವಸ್ಥಾನದಿಂದ ಕಳವು; ಆರೋಪಿಯ ಬಂಧನ

Kumble: ಕುಂಬಳೆ ಪೇಟೆಯಲ್ಲಿ ವಿದ್ಯಾರ್ಥಿಗಳ ಹೊಡೆದಾಟ

Kumble: ಕುಂಬಳೆ ಪೇಟೆಯಲ್ಲಿ ವಿದ್ಯಾರ್ಥಿಗಳ ಹೊಡೆದಾಟ

Road mishap: ರಿಕ್ಷಾಗೆ ಕಾರು ಢಿಕ್ಕಿ; ನಾಲ್ವರಿಗೆ ಗಾಯ

Road mishap: ರಿಕ್ಷಾಗೆ ಕಾರು ಢಿಕ್ಕಿ; ನಾಲ್ವರಿಗೆ ಗಾಯ

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.