ಕೋವಿಡ್ ಪೀಡಿತ ಮಕ್ಕಳಲ್ಲಿ ಕಾಣಿಸಿಕೊಂಡ ಕವಾಸಕಿ; ಮುಂಬಯಿ ಆಸ್ಪತ್ರೆಯಲ್ಲಿ 2 ಮಕ್ಕಳ ಸಾವು
ಚೇತರಿಕೆಯಾಗಿರುವ ಮಕ್ಕಳು ಡಿಸ್ಚಾರ್ಜ್: ವೈದ್ಯರ ಸ್ಪಷ್ಟನೆ
Team Udayavani, Jul 23, 2020, 9:22 AM IST
ಸಾಂದರ್ಭಿಕ ಚಿತ್ರ
ಮುಂಬಯಿ: ಕೋವಿಡ್ ಸೋಂಕಿಗೆ ಒಳಗಾಗಿ ಮುಂಬಯಿಯ ವಾಡಿಯಾ ಮಕ್ಕಳ ಆಸ್ಪತ್ರೆಗೆ ದಾಖಲಾದ 100 ಮಕ್ಕಳ ಪೈಕಿ 18 ಮಕ್ಕಳಲ್ಲಿ ಕವಾಸಕಿ ಮಾದರಿಯ ರೋಗ ಕಾಣಿಸಿಕೊಂಡಿದ್ದು, ಇದು ವೈದ್ಯರ ಕಳವಳಕ್ಕೆ ಕಾರಣವಾಗಿದೆ.
ಮಕ್ಕಳಿಗೆ ಜ್ವರ ಬರುವುದು, ಚರ್ಮದ ಮೇಲೆ ಕೆಂಪನೆಯ ಗುಳ್ಳೆಗಳು ಏಳುವುದು, ಕಣ್ಣು ಕೆಂಪಾಗುವುದು, ಆಯಾಸ ಮತ್ತು ಅತಿಭೇದಿ ಈ ರೋಗದ ಲಕ್ಷಣಗಳು. ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆ ದೊರೆಯದಿದ್ದರೆ ಮಕ್ಕಳು ಸಾವಿಗೀಡಾಗುವ ಸಾಧ್ಯತೆ ಇದೆ. ಮುಂಬಯಿಯಲ್ಲಿ ಈಗಾಗಲೇ ಇಬ್ಬರು ಮಕ್ಕಳು ಈ ರೋಗದಿಂದ ಮೃತಪಟ್ಟಿದ್ದಾರೆ. ಜಪಾನಿನ ಶಿಶುವೈದ್ಯ ಟೊಮಿಸ್ಕಾ ಕವಾಸಕಿಯವರು ಈ ರೋಗವನ್ನು ಮೊದಲಿಗೆ ಪತ್ತೆ ಹಚ್ಚಿದ್ದರಿಂದ ಇದಕ್ಕೆ ಅವರ ಹೆಸರನ್ನು ಇಡಲಾಗಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ವಾಡಿಯಾ ಮಕ್ಕಳ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕಿ ಡಾ| ಶಕುಂತಳಾ ಪ್ರಭು, ಈ ರೋಗದ ಸೋಂಕಿನಿಂದ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಆ ಪೈಕಿ ಒಂದು ಮಗುವಿಗೆ ಈ ಸೋಂಕಿನ ಜತೆ ಕ್ಯಾನ್ಸರ್ ಇತ್ತು. ನಾಲ್ವರು ಮಕ್ಕಳು ಚೇತರಿಸಿಕೊಳ್ಳುತ್ತಿ ದ್ದಾರೆ. ಉಳಿದ ಮಕ್ಕಳು ಗುಣಮುಖ ರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ ಎಂದು ಅವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Varanasi: ಕುಟುಂಬಿಕರ ಎದುರಿಗೆ ಪೊಲೀಸ್ ಅಧಿಕಾರಿಗೆ ಥಳಿಸಿದ ಗುಂಪು
Rishabh Pant: ಅಪಘಾತದ ವೇಳೆ ನೆರವಾದವರಿಗೆ ಗಿಫ್ಟ್ ನೀಡಿದ ರಿಷಭ್ ಪಂತ್
Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ
BBK11: ಇವತ್ತು ಬಿಗ್ಬಾಸ್ ಮನೆಯಿಂದ ಆಚೆ ಬರುವುದು ಇವರೇ ನೋಡಿ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.