ಉಪಕರಣ ಆರೋಪ; “ಹುಲಿ ಬಂತು ಹುಲಿ ಕತೆ!’; ಸಿದ್ದರಾಮಯ್ಯರಿಗೆ ಸೋಮಣ್ಣ ತಿರುಗೇಟು
Team Udayavani, Jul 23, 2020, 11:39 AM IST
ಬೆಂಗಳೂರು: ಕೋವಿಡ್-19ಗೆ ಸಂಬಂಧಿಸಿದ ಉಪಕರಣಗಳ ಖರೀದಿ ಅವ್ಯವಹಾರ ಆರೋಪ “ಹುಲಿ ಬಂತು ಹುಲಿ…’ ಎಂಬ ಕತೆಯಾಗಿದೆ ಎಂದು ವಸತಿ ಸಚಿವ ವಿ. ಸೋಮಣ್ಣ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದರು.
ಬಸವೇಶ್ವರ ನಗರದ ಸರ್ಕಾರಿ ಯುನಾನಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸ್ಥಾಪಿಸಲಾಗಿರುವ 175 ಹಾಸಿಗೆಗಳ ಸಾಮರ್ಥ್ಯದ “ಕೋವಿಡ್ ನಿಗಾ ಕೇಂದ್ರ’ವನ್ನು ಉದ್ಘಾಟಿಸಿ ಬಳಿಕ ಮಾತನಾಡಿದರು. “ಸಿದ್ದರಾಮಯ್ಯ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ. ಅವರ ಆರೋಪ ಬರೀ “ಹುಲಿ ಬಂತು ಹುಲಿ…’ ಎಂಬಂತಾಗಿದೆ. ಅಕ್ರಮ ನಡೆದಿರುವ ಬಗ್ಗೆ ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ. ವಿಧಾನಸಭೆ ಅಧಿವೇಶನದಲ್ಲಿ ಅವರ ಎಲ್ಲ ಆರೋಪಗಳಿಗೂ ಸರ್ಕಾರ ಉತ್ತರ ನೀಡಲಿದೆ’ ಎಂದರು. ಸರ್ಕಾರದ ತಪ್ಪುಗಳನ್ನು ಸರಿಮಾಡುವ ಅಧಿಕಾರ ಪ್ರತಿಪಕ್ಷ ಹಾಗೂ ಪ್ರತಿಪಕ್ಷ ನಾಯಕರಿಗೆ ಇದೆ. ಆದರೆ, ಅನಗತ್ಯ ಟೀಕೆಗಳನ್ನು ಮಾಡುವುದೇ ಕೆಲಸ ಆಗಬಾರದು. ಹೀಗೆ ಅವ್ಯವಹಾರ ನಡೆದಿದೆ ಎಂದಾದರೆ, ಸಿದ್ದರಾಮಯ್ಯ ಅವರು ದಾಖಲೆ
ನೀಡಲಿ ಎಂದು ಸೋಮಣ್ಣ ಸವಾಲು ಹಾಕಿದರು.
“ಈ ಭಾಗದಲ್ಲಿ ಸೋಂಕು ಲಕ್ಷಣಗಳಿಲ್ಲದ (ಎ-ಸಿಮ್ಟ್ ಮ್ಯಾಟಿಕ್) ಮತ್ತು ಕಡಿಮೆ ಲಕ್ಷಣಗಳಿರುವವರ ಆರೈಕೆಗಾಗಿ ಈ ಆಸ್ಪತ್ರೆ ಉದ್ಘಾಟಿಸಲಾಗಿದೆ. ಯಾವುದೇ
ಲಕ್ಷಣಗಳಿಲ್ಲದ ಹಾಗೂ ಕಡಿಮೆ ಲಕ್ಷಣಗಳಿರುವ ಸೋಂಕಿತರು ಮನೆಯಲ್ಲೇ ಆರೈಕೆಯಲ್ಲಿ ಇರಬಹುದು. ಒಂದು ವೇಳೆ ಸೂಕ್ತ ಸೌಲಭ್ಯ ಇಲ್ಲದಿದ್ದರೆ, ಅಂತಹವರನ್ನು ಈ ಕೇಂದ್ರಕ್ಕೆ ಕರೆತಂದು ಆರೈಕೆ ಮಾಡಲಾಗುತ್ತದೆ’ ಎಂದು ಹೇಳಿದರು. ಕೋವಿಡ್ ಸೋಂಕು ಭಯಾನಕ ಕಾಯಿಲೆ ಅಲ್ಲ. ಸೂಕ್ತ ಸಮಯಕ್ಕೆ ಚಿಕಿತ್ಸೆ ಪಡೆದುಕೊಂಡರೆ ಕೇವಲ ಎಂಟು ದಿನಗಳಲ್ಲಿ ಕೊರೊನಾ ಮುಕ್ತರಾಗಿ ಮನೆಗೆ ಹಿಂತಿರುಗಬಹುದು ಎಂದರು. ಡಿಸಿಎಂ ಡಾ.ಸಿ.ಎನ್. ಅಶ್ವತ್ಥ ನಾರಾಯಣ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್, ಸ್ಥಳೀಯ ಬಿಬಿಎಂಪಿ ಸದಸ್ಯರು ಹಾಗೂ ಅಧಿಕಾರಿಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.