ಬ್ಯಾಂಕ್ ಅಭಿವೃದ್ಧಿಗೆ ಸಾಲ ಮರು ಪಾವತಿ ಅವಶ್ಯ
Team Udayavani, Jul 24, 2020, 7:43 AM IST
ರಾಮನಗರ: ಪಡೆದ ಸಾಲವನ್ನು ಸಕಾಲದಲ್ಲಿ ಮರು ಪಾವತಿ ಮಾಡುವುದು ಬ್ಯಾಂಕಿನ ಪ್ರಗತಿಗೆ ಪೂರಕ ಎಂದು ಕರ್ನಾಟಕ ರಾಜ್ಯ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಕೆ.ಷಡಕ್ಷರಿ ತಿಳಿಸಿದರು.
ನಗರದ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿರ್ಮಿಸಿರುವ ಮೇಲಂತಸ್ತಿನ ಕಟ್ಟಡ ಮತ್ತು ಇ-ಸ್ಟಾಂಪಿಂಗ್ ಕೇಂದ್ರ ಉದ್ಘಾಟಿಸಿ ಮಾತ ನಾಡಿದರು. ನಿರ್ದೇಶಕರು ಬ್ಯಾಂಕ್ ಮತ್ತು ರೈತರ ನಡುವೆ ಉತ್ತಮ ಬಾಂಧವ್ಯ ವೃದ್ಧಿಸಬೇಕು. ರೈತರು ಮತ್ತು ಬ್ಯಾಂಕಿನ ನಡುವಿನ ಭಾಂಧವ್ಯ ಉತ್ತಮವಾಗಿದ್ದರೆ ಬ್ಯಾಂಕಿನ ಅಭಿವೃದ್ಧಿ ಸಾಧ್ಯವೆಂದರು.
ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಜಿ.ಪರಮೇಶ್, ಎಲ್ಲಾ ನಿರ್ದೇಶಕರ ಸಹಕಾರದಿಂದ ಮೇಲಂತಸ್ತಿನ ಕಟ್ಟಡ 15 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗಿದೆ ಎಂದರು. ಕಸ್ಕಾರ್ಡ್ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಡಾ. ಕೆ.ಸಿ. ಯತೀಶ್‌ಕುಮಾರ್, ಜಿಲ್ಲಾ ವ್ಯವಸ್ಥಾಪಕ ಎ.ಪಿ. ಲೋಕೇಶ್, ಪಿಕಾರ್ಡ್ ಬ್ಯಾಂಕ್ ಉಪಾಧ್ಯಕ್ಷ ಅಬ್ದುಲ್ ಖಲೀಲ್, ನಿರ್ದೇಶಕರಾದ ಎಂ.ಆರ್. ಶಿವಕುಮಾರಸ್ವಾಮಿ, ಡಿ.ಎಂ.ಮಹದೇವಯ್ಯ, ಯು. ನರಸಿಂಹಯ್ಯ, ಆರ್.ಮಲ್ಲೇಶ್, ಶಿವಮ್ಮ, ಕೃಷ್ಣ, ಅಪ್ಪಾಜಿ, ಶಿವಲಿಂಗಮ್ಮ, ಜಯಲಕ್ಷ್ಮಮ್ಮ, ಹರೀಶ್, ಎಸ್.ಬಿ.ರಾಜಣ್ಣ, ವ್ಯವಸ್ಥಾಪಕ ವೆಂಕಟೇಶ್, ಎಪಿಎಂಸಿ ಮಾಜಿ ಅಧ್ಯಕ್ಷ ದೊರೆಸ್ವಾಮಿ, ತಾಲೂಕು ಜೆಡಿಎಸ್ ಅಧ್ಯಕ್ಷ ರಾಜಶೇಖರ್ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Fraud: “ವಿಡಿಯೋಗೆ ಲೈಕ್ ನೀಡಿ’ 13.97 ಲಕ್ಷ ಕಳೆದುಕೊಂಡರು!
C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!
By Election: ದೇವೇಗೌಡರನ್ನು 1994ರಲ್ಲಿ ಮುಖ್ಯಮಂತ್ರಿ ಮಾಡಿದ್ದೇ ನಾನು: ಸಿಎಂ ಸಿದ್ದರಾಮಯ್ಯ
Ramanagara: ಆರು ಟ್ರಾನ್ಸ್ ಫಾರ್ಮರ್ ಗಳ ಕಳವು
MUST WATCH
ಹೊಸ ಸೇರ್ಪಡೆ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.