ಕೋವಿಡ್ ಸೋಂಕಿತರ ಮನೆ ಸೀಲ್‌ಡೌನ್
Team Udayavani, Jul 24, 2020, 11:32 AM IST
ಮಲೇಬೆನ್ನೂರು: ಪಟ್ಟಣದ 10ನೇ ವಾರ್ಡ್‌ನ ಇಂದಿರಾನಗರ, 2ನೇ ವಾರ್ಡ್ ನಲ್ಲಿ ಕೋವಿಡ್ ಸೋಂಕು ದೃಢಪಟ್ಟಿದ್ದು, ಸೋಂಕಿತರ ಮನೆಯನ್ನು ಸೀಲ್‌ಡೌನ್ ಮಾಡಲಾಗಿದೆ ಎಂದು ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಲಕ್ಷ್ಮೀದೇವಿ ತಿಳಿಸಿದರು.
10ನೇ ವಾರ್ಡ್‌ನ ಇಂದಿರಾ ನಗರದಲ್ಲಿ ಈ ಹಿಂದೆ 43 ವರ್ಷದ ಮಹಿಳೆಗೆ ಪಾಸಿಟೀವ್ ಸೋಂಕು ದೃಢಪಟ್ಟಿತ್ತು. ಆ ಮಹಿಳೆ ನಿಧನ ಹೊಂದಿದ್ದು, 21ನೇ ತಾರೀಖು ಆಕೆಯ ಗಂಡನಿಗೂ ಪಾಸಿಟಿವ್ ವರದಿ ಬಂದಿತ್ತು. ಮನೆಯ 15 ಜನರು ಹೋಂ ಕ್ವಾರಂಟೈನ್ ಆಗಿದ್ದು, 20ನೇ ತಾರೀಖೀನಂದು ಗಂಟಲುದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಗುರುವಾರ 5 ಜನರಲ್ಲಿ ಪಾಸಿಟಿವ್ ಬಂದಿದ್ದು, ಇನ್ನುಳಿದ 10 ಜನರ ವರದಿ ಬರಬೇಕಿದೆ. ಅವರಿಗೆ 14 ದಿನಗಳವರೆಗೆ ಹೋಂ ಕ್ವಾರಂಟೈನ್‌ನಲ್ಲಿರುವಂತೆ ಸೂಚಿಸಲಾಗಿದೆ ಎಂದರು.
ಅನಾರೋಗ್ಯದಿಂದ ಬಳಲುತ್ತಿದ್ದ 2ನೇ ವಾರ್ಡ್‌ನ 66 ವರ್ಷದ ವೃದ್ಧೆ ಜು. 21ರಂದು ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಬಂದಿದ್ದರು. ಅವರಲ್ಲಿ ಕೋವಿಡ್-19 ಲಕ್ಷಣಗಳು ಕಂಡು ಬಂದಿದ್ದರಿಂದ ಜಿಲ್ಲಾಸ್ಪತ್ರೆಗೆ ಕಳುಹಿಸಿಕೊಡಲಾಗಿತ್ತು. ಸೋಂಕಿತ ಮಹಿಳೆ ಗುರುವಾರ ನಿಧನರಾಗಿದ್ದಾರೆ. ರೋಗಿಯ ಜೊತೆಯಲ್ಲಿದ್ದ 3 ಜನರ ಗಂಟಲು ದ್ರವ ಮಾದರಿ ಕಳುಹಿಸಲಾಗಿದೆ ಎಂದರು.
ಪುರಸಭೆ ಮುಖ್ಯಾಧಿಕಾರಿ ಧರಣೇಂದ್ರಕುಮಾರ್, ಉಪತಹಶೀಲ್ದಾರ್ ಆರ್. ರವಿ, ಪರಿಸರ ಅಭಿಯಂತರ ಉಮೇಶ್, ಆರೋಗ್ಯ ನಿರೀಕ್ಷಕ ಗುರುಪ್ರಸಾದ್ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ
Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!
MUST WATCH
ಹೊಸ ಸೇರ್ಪಡೆ
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.