“ಮರಾಠಾ ಕೋಟಾದಿಂದ ಒಬಿಸಿ ಮೀಸಲಾತಿ ಮೇಲೆ ಪರಿಣಾಮ ಇಲ್ಲ’
Team Udayavani, Jul 24, 2020, 4:09 PM IST
ಮುಂಬಯಿ, ಜು. 23: ಉದ್ಯೋಗ ಮತ್ತು ಶಿಕ್ಷಣದಲ್ಲಿನ ಮರಾಠ ಕೋಟಾ ಜಾರಿಯಾದರೆ ಇತರ ಹಿಂದುಳಿದ ವರ್ಗಗಳ ಮೀಸಲಾತಿಯ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಭರವಸೆ ನೀಡಿದ್ದಾರೆ.
ಈ ಕುರಿತ ಅನುಮಾನಗಳನ್ನು ಪರಿಹರಿಸಲು ಒಬಿಸಿಗಳ ಪ್ರತಿನಿಧಿಗಳು ಮತ್ತು ರಾಜ್ಯದ ಅಡ್ವೊಕೇಟ್ ಜನರಲ್ ನಡುವೆ ಸಭೆ ಆಯೋಜಿಸಲಾಗುವುದು ಎಂದು ಉದ್ಧವ್ ಹೇಳಿದ್ದಾರೆ. ಮುಖ್ಯಮಂತ್ರಿ ಅವರು ಇಲ್ಲಿ ಒಬಿಸಿಗಳ ಪ್ರತಿನಿಧಿಗಳೊಂದಿಗೆ ವೀಡಿಯೋ ಕಾನ ರೆನ್ಸ್
ಮೂಲಕ ಸಭೆ ನಡೆಸಿದರು. ಮರಾಠ ಕೋಟಾ ಪ್ರಕರಣವನ್ನು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ಈ ಕುರಿತ ಬಾಂಬೆ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದರೆ ಅದು ತಮ್ಮ ಮೀಸಲಾತಿ ಮೇಲೆ ಪರಿಣಾಮ ಬೀರುತ್ತದೆ ಎಂಬ ಆತಂಕದಿಂದ ಒಬಿಸಿಗಳು ದೂರವಾಗಬೇಕು ಎಂದು ಠಾಕ್ರೆ ಅವರು ಸಭೆಗೆ ತಿಳಿಸಿದರು ಎಂದು ಅಧಿ ಕೃತ ಪ್ರಕಟಣೆಯಲ್ಲಿ ತಿಳಿಸಿದೆ. ಈ ಸಂದರ್ಭ ಸಭೆಯಲ್ಲಿ ಸಚಿವ ಅಶೋಕ್ ಚವಾಣ್, ಛಗನ್ ಭುಜ್‌ಬಲ್, ಏಕನಾಥ ಶಿಂಧೆ, ವಿಜಯ್ ವಾಡೆಟ್ಟಿವಾರ್, ಧನಂಜಯ್ ಮುಂಡೆ ಮತ್ತಿತರರು ಭಾಗವಹಿಸಿದ್ದರು.
ಮಹಾರಾಷ್ಟ್ರದ ಮರಾಠ ಸಮುದಾಯಕ್ಕೆ ಉದ್ಯೋಗ ಮತ್ತು ಶೈಕ್ಷಣಿಕ ಸಂಸ್ಥೆಗಳ ಪ್ರವೇಶದಲ್ಲಿ ಮೀಸಲಾತಿ ನೀಡಲು ಸಾಮಾಜಿಕ ಮತ್ತು ಶೈಕ್ಷಣಿಕ ಹಿಂದುಳಿದ ವರ್ಗಗಳ (ಎಸ್‌ಬಿಸಿ) ಕಾಯಿದೆ, 2018 ಅನ್ನು ಜಾರಿಗೆ ತರಲಾಯಿತು. ಬಾಂಬೆ ಹೈಕೋರ್ಟ್ ಕಳೆದ ವರ್ಷದ ಜೂನ್‌ನಲ್ಲಿ ಈ ಕಾಯಿದೆಯನ್ನು ಎತ್ತಿಹಿಡಿಯುವಾಗ, ಶೇ.16ರಷ್ಟು ಮೀಸಲಾತಿ ಸಮರ್ಥನೀಯವಲ್ಲ. ಮೀಸಲಾತಿಯು ಉದ್ಯೋಗದಲ್ಲಿ ಶೇ. 12 ಮತ್ತು ಶೈಕ್ಷಣಿಕ ಪ್ರವೇಶದಲ್ಲಿ ಶೇ.13 ಅನ್ನು ಮೀರಬಾರದು ಎಂದು ಹೇಳಿದೆ. ಅನಂತರ ಈ ಕಾಯಿದೆಯನ್ನು ಸುಪ್ರೀಂ ಕೋರ್ಟ್ ಮುಂದೆ ಪ್ರಶ್ನಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ
Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ
ಕ್ಲೀವ್ ಲ್ಯಾಂಡ್: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ
ಮೊಗವೀರ್ಸ್ ಬಹ್ರೈನ್ ಪ್ರೊ ಕಬಡ್ಡಿ;ತುಳುನಾಡ್ ತಂಡ ಪ್ರಥಮ,ಪುನಿತ್ ಬೆಸ್ಟ್ All ರೌಂಡರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.