ಜನಸಂಖ್ಯಾ ನಿಯಂತ್ರಣಕ್ಕೆ ಕ್ರಮವಹಿಸಿ
Team Udayavani, Jul 25, 2020, 7:37 AM IST
ಮಳವಳ್ಳಿ: ಜನಸಂಖ್ಯಾ ನಿಯಂತ್ರಣದ ಕ್ರಮಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಈ ಮೂಲಕ ಜನಸಂಖ್ಯಾ ಸ್ಫೋಟದಿಂದ ಆಗುವ ಅನಾಹುತಗಳನ್ನು ತಡೆಯ ಬೇಕು ಎಂದು ತಹಶೀಲ್ದಾರ್ ಕೆ.ಚಂದ್ರಮೌಳಿ ತಿಳಿಸಿದರು.
ತಾಲೂಕು ಆರೋಗ್ಯ ಇಲಾಖೆ ಕಚೇರಿಯ ಆವರಣದಲ್ಲಿ ಶುಕ್ರವಾರ ಆಯೋಜಿಸಿದ್ದ ಜನಸಂಖ್ಯಾ ದಿನಾಚರಣೆ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿ, ಜನಸಂಖ್ಯಾ ಹೆಚ್ಚಳದಿಂದಾಗುವ ಸಮಸ್ಯೆಗಳ ಬಗ್ಗೆ ಅರಿವು ಮೂಡಿಸಲು ಪ್ರತಿವರ್ಷ ಇಂತಹ ಹಲವು ಕಾರ್ಯಕ್ರಮವನ್ನು ಮಾಡಲಾಗು ತ್ತಿದೆ. ಜನಸಂಖ್ಯಾ ಸ್ಫೋಟದಿಂದ ದೇಶದ ಆರ್ಥಿಕ ಪರಿಸ್ಥಿತಿ ಮೇಲೆ ಸಾಕಷ್ಟು ಪರಿಣಾಮ, ಹಲವು ಸಮಸ್ಯೆಗಳು ಉದ್ಭವಿಸುತ್ತವೆ. ಆದ್ದರಿಂದ ಜನಸಂಖ್ಯೆ ತಡೆಗಟ್ಟಲು ಇರುವ ಮಾರ್ಗಗಳನ್ನು ಎಲ್ಲರೂ ಅನುಸರಿಸಬೇಕು. ಸರ್ಕಾರ ಮತ್ತು ಇಲಾಖೆ ಜತೆ ಸಾರ್ವಜನಿಕರು ಸಹಕಾರ ನೀಡಿದರೆ ಮಾತ್ರ ಜನಸಂಖ್ಯೆ ತಡೆಗಟ್ಟಲು ಸಾಧ್ಯವಾಗಲಿದೆ ಎಂದು ಹೇಳಿದರು.
ಏರುತ್ತಿರುವ ಜನಸಂಖ್ಯೆ ನಿಯಂತ್ರಣದಿಂದ ದೇಶದ ಅಭಿವೃದ್ಧಿ ಸಾಧ್ಯ. ವಿಶ್ವದಲ್ಲಿ ಚೀನಾ ನಂತರ ಭಾರತ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶವಾಗಿದೆ. ಜನಸಂಖ್ಯೆ ಹೆಚ್ಚಳ ಅನೇಕ ಸಮಸ್ಯೆಗಳಿಗೆ ಕಾರಣವಾಗಿದೆ. ಅನಕ್ಷರತೆ, ಬಡತನ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಪರಿಣಾಮಕಾರಿಯಾಗಿ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ ಎಂದು ತಿಳಿಸಿದರು.
ತಾಲೂಕು ವೈದ್ಯಾಧಿಕಾರಿ ಡಾ.ವೀರಭದ್ರಪ್ಪ, ತಾಪಂ ಇಒ ಬಿ.ಎಸ್.ಸತೀಶ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಡಾ.ಶಿವಾನಂದ, ತಾಲೂಕು ಆರೋಗ್ಯ ಶಿಕ¡ಣಾಧಿಕಾರಿ ಡಾ.ವೀರಣ್ಣಗೌಡ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು
Kannada Sahitya Sammelana: ಮೊದಲ ಬಾರಿಗೆ ದೃಷ್ಟಿಚೇತನರ ವಿಶೇಷ ಕವಿಗೋಷ್ಠಿ
Maddur; ಕೆಲಸದ ಒತ್ತಡ: ಎಂಜಿನಿಯರ್ ಆತ್ಮಹ*ತ್ಯೆ
Karnataka Congress: ಯಾವುದೇ ಒಪ್ಪಂದ ಆಗಿಲ್ಲ: ಸಿಎಂ ಸಿದ್ದರಾಮಯ್ಯ
Mandya: ಬಹುಮಾನ ಗೆದ್ದ ಹಳ್ಳಿಕಾರ್ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!
MUST WATCH
ಹೊಸ ಸೇರ್ಪಡೆ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.