ಸಮುದಾಯ ಭವನ ಕಾಮಗಾರಿಗೆ ಕ್ರಮ
Team Udayavani, Jul 25, 2020, 7:40 AM IST
ಮದ್ದೂರು: ಮಾದನಾಯಕನಹಳ್ಳಿ ಶ್ರೀಸಿದ್ದರಾಮೇಶ್ವರ ದೇವಾಲಯದ ಸಮುದಾಯ ಭವನ, ಕೆ.ಹೊನ್ನಲಗೆರೆ ಸಮುದಾಯ ಭವನ ಕಾಮಗಾರಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುತ್ತೇವೆ ಎಂದು ಶಾಸಕ ಡಿ.ಸಿ. ತಮ್ಮಣ್ಣ ತಿಳಿಸಿದರು.
ತಾಲೂಕಿನ ಕೆ.ಹೊನ್ನಲಗೆರೆ, ಮಾದನಾಯಕನಹಳ್ಳಿ ಹಾಗೂ ಬ್ಯಾಡರಹಳ್ಳಿಯ ಸಮುದಾಯ ಭವನ ಕಾಮಗಾರಿಗೆ ಶುಕ್ರವಾರ ಭೂಮಿ ಪೂಜೆ ನೆರವೇರಿಸಿ ಮಾತನಾಡಿ, ಬ್ಯಾಡರಹಳ್ಳಿಯ ಮಾರುತಿ ಸಮುದಾಯ ಭವನ ನಿರ್ಮಾಣ ಹಾಗೂ ಕೆ.ಹೊನ್ನಲಗೆರೆ, ಭೀಮನಕೆರೆ ವ್ಯಾಪ್ತಿಯ ಕೆರೆಗಳ ಒತ್ತುವರಿ ತೆರವು, ಕೆರೆ ಅಭಿವೃದ್ಧಿ ಜತೆಗೆ ಪ್ರವಾಸಿತಾಣವನ್ನಾಗಿಸಲು 5 ಕೋಟಿ ರೂ. ಮಂಜೂರಾಗಿದೆ. ವಾಯುವಿಹಾರ, ದೀಪದ ವ್ಯವಸ್ಥೆ ಇತರೆ ಕಾಮಗಾರಿಗಳು ನೆರವೇರಲಿದೆ ಎಂದರು.
ಮಾಜಿ ಶಾಸಕ ಬಿ.ರಾಮಕೃಷ್ಣ ಮಾತನಾಡಿ, ತಾವು ವಿಧಾನಪರಿಷರ್ ಸದಸ್ಯರಾಗಿದ್ದ ವೇಳೆ ಕೆ.ಹೊನ್ನಲಗೆರೆ ಅಕ್ಕಪಕ್ಕದ ಗ್ರಾಮಗಳ ನಿವಾಸಿಗಳಿಗೆ ಅಗತ್ಯ ಸಮುದಾಯ ಭವನ ನಿರ್ಮಾಣಕ್ಕೆ ಕ್ರಮವಹಿಸಲಾಗಿತ್ತು. ಶಾಸಕರ ಅನುದಾನ ಸೇರಿದಂತೆ ವೈಯಕ್ತಿಕವಾಗಿ 80 ಲಕ್ಷ ರೂ.ಗಳ ಕಾಮಗಾರಿ ಕೈಗೊಂಡಿದ್ದಾಗಿ ವಿವರಿಸಿದರು. ಪಿಕಾರ್ಡ್ ಬ್ಯಾಂಕ್ ಮಾಜಿ ಅಧ್ಯಕ್ಷ ಕಾಡಪ್ಪ, ತಾಪಂ ಮಾಜಿ ಸದಸ್ಯ ರಾಜೇಂದ್ರ ಕುಮಾರ್, ಗ್ರಾಪಂ ಮಾಜಿ ಅಧ್ಯಕ್ಷ ನಾಗೇಶ್, ಸದಸ್ಯ ಟಿ.ಆರ್.ಗಿರೀಶ್, ಮಾಜಿ ಸದಸ್ಯ ಕೆಂಗಲ್‌ಗೌಡ, ಪಿಕಾರ್ಡ್‌ಬ್ಯಾಂಕ್ ನಿರ್ದೇಶಕ ಅಪ್ಪಾಜೀಗೌಡ, ಮುಖಂಡರಾದ ರಾಜಣ್ಣ, ನಿಂಗೇಗೌಡ, ಪುಟ್ಟಸ್ವಾಮಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು
Kannada Sahitya Sammelana: ಮೊದಲ ಬಾರಿಗೆ ದೃಷ್ಟಿಚೇತನರ ವಿಶೇಷ ಕವಿಗೋಷ್ಠಿ
Maddur; ಕೆಲಸದ ಒತ್ತಡ: ಎಂಜಿನಿಯರ್ ಆತ್ಮಹ*ತ್ಯೆ
Karnataka Congress: ಯಾವುದೇ ಒಪ್ಪಂದ ಆಗಿಲ್ಲ: ಸಿಎಂ ಸಿದ್ದರಾಮಯ್ಯ
Mandya: ಬಹುಮಾನ ಗೆದ್ದ ಹಳ್ಳಿಕಾರ್ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!
MUST WATCH
ಹೊಸ ಸೇರ್ಪಡೆ
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.