ಟಾಸ್ಕ್ ಫೋರ್ಸ್ ಸಮಿತಿಯಿಂದ ಜಾಗೃತಿ
Team Udayavani, Jul 25, 2020, 8:48 AM IST
ನರಗುಂದ: ಕೋವಿಡ್ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರನ್ನು ಜಾಗೃತಗೊಳಿಸುವ ಉದ್ದೇಶದಿಂದ ಪುರಸಭೆ ಕಾರ್ಯಾಲಯದ ಕೋವಿಡ್-19 ವಾರ್ಡ್ ಮಟ್ಟದ ಟಾಸ್ಕ್ಫೋರ್ಸ್ ಸಮಿತಿ ಸಭೆಯನ್ನು ಪಟ್ಟಣದ ಅಲ್ಲಿಭಾಯಿ ನಗರದಲ್ಲಿ ನಡೆಸಿ ಜನಜಾಗೃತಿ ಮೂಡಿಸಲಾಯಿತು.
ಕೋವಿಡ್ ಹಿನ್ನೆಲೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾದವರ ಮನೆಗೆ ಭೇಟಿ ನೀಡುವ ಮೂಲಕ ಸಾರ್ವಜನಿಕರಲ್ಲಿ ತಿಳಿವಳಿಕೆ ನೀಡಲಾಯಿತು. ಪುರಸಭೆ ಸದಸ್ಯ ಚಂದ್ರಗೌಡ ಪಾಟೀಲ ಮಾತನಾಡಿ, ಕೋವಿಡ್ ರೋಗ ಸಾಮಾನ್ಯ ಸಾಂಕ್ರಾಮಿಕ ಕಾಯಿಲೆಯಾಗಿದ್ದು, ಯಾರೊಬ್ಬರೂ ಭಯಪಡಬಾರದು ಎಂದು ಮನವಿ ಮಾಡಿದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಂಜುನಾಥ ಮೆಣಸಗಿ ಮಾತನಾಡಿ, ಕೋವಿಡ್ ಪೀಡಿತರನ್ನು ಕೀಳಾಗಿ ಕಾಣುವುದು ಬೇಡ. ಬದಲಾಗಿ ಅವರಲ್ಲಿ ಆತ್ಮಸ್ಥೈರ್ಯ ತುಂಬುವ ಕೆಲಸವಾಗಬೇಕಿದೆ. ಕೊರೊನಾ ಶೀಘ್ರ ಗುಣಮುಖವಾಗುವ ಸಾಮಾನ್ಯ ಕಾಯಿಲೆಯಾಗಿದೆ. ಪ್ರತಿಯೊಬ್ಬರೂ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕೆಂದು ಮನವಿ ಮಾಡಿದರು.
ವಾರ್ಡ್ ಮಟ್ಟದ ಟಾಸ್ಕ್ಫೋರ್ಸ್ ಸಮಿತಿ ಸದಸ್ಯರಾದ ಚಂದ್ರಗೌಡ ಪಾಟೀಲ, ಕಾರ್ಯದರ್ಶಿ ವಿಠuಲ ಹಡಗಲಿ, ಆರೋಗ್ಯ ಇಲಾಖೆಯ ಎಸ್.ಎಸ್. ಅಂಗಡಿ, ಅಂಗನವಾಡಿ ಕಾರ್ಯಕರ್ತೆ ಸವಿತಾ ಮರಿಗೌಡ್ರ, ಶಿಕ್ಷಕಿ ಟಿ.ಬಿ.ಹಿರೇಮನಿ, ಶಿವಾನಂದ ಜಾಲಿಹಾಳ, ಚನ್ನಪ್ಪ ಮೋಟೆ, ರಾಚನಗೌಡ ಪಾಟೀಲ, ಫಕೀರಪ್ಪ ಕೀಲಿಕೈ, ಹುಲ್ಲಪ್ಪ ಹುಲಜೋಗಿ, ರಾಜು ಬಂಡಿವಡ್ಡರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.