ಯಾದಗಿರಿ: ಮತ್ತೆ 53 ಜನರಲ್ಲಿ ಕೋವಿಡ್ ಸೋಂಕು ದೃಢ
Team Udayavani, Jul 25, 2020, 9:40 AM IST
ಯದಗಿರಿ: ಜಿಲ್ಲೆಯಲ್ಲಿ ಮಹಾಮಾರಿ ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಶುಕ್ರವಾರ ಮತ್ತೆ 53 ಜನರಿಗೆ ಸೋಂಕು ದೃಢವಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 1864ಕ್ಕೇರಿಕೆಯಾಗಿದೆ.
ಜಿಲ್ಲೆಯಲ್ಲಿ ಸೋಂಕಿನ ಸಂಪರ್ಕವೇ ಪತ್ತೆಯಾಗದ ಜನರಲ್ಲಿ ವೈರಸ್ ಹರಡುತ್ತಿದ್ದು, ಯಾದಗಿರಿ, ಶಹಾಪುರ, ಸುರಪುರ ನಗರ ಸೇರಿದಂತೆ ಜಿಲ್ಲೆಯ ವಿವಿಧ ಗ್ರಾಮಗಳ ಜನರಿಗೆ ಸೋಂಕು ಹರಡಿದೆ. 34 ಪುರುಷರು, 19 ಮಹಿಳೆಯರು ಕೊರೊನಾಗೆ ತುತ್ತಾಗಿದ್ದಾರೆ. ಶುಕ್ರವಾರ 231 ಜನರ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಕಳಿಸಿದೆ. 175 ಜನರ ವರದಿ ನೆಗೆಟಿವ್ ಬಂದಿವೆ. ಸೋಂಕಿತರೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ 3,718 ಜನ ಮತ್ತು ದ್ವಿತೀಯ ಸಂಪರ್ಕದಲ್ಲಿದ್ದ 5431ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ. ಜಿಲ್ಲೆಯಲ್ಲಿ 149 ಕಂಟೈನ್ಮೆಂಟ್ ಝೋನ್‌ಗಳನ್ನು ರಚಿಸಲಾಗಿದೆ.
ಹೊಸ ಜಿಲ್ಲಾಸ್ಪತ್ರೆಯಲ್ಲಿ 153 ಜನರನ್ನು ಪತ್ಯೇಕವಾಗಿರಿಸಲಾಗಿದೆ. ಶಹಾಪುರ 45, ಸುರಪುರ 65 ಜನ ಹಾಗೂ ಬಂದಳ್ಳಿ ಏಕಲವ್ಯ ಕೋವಿಡ್ ಕೇರ್ ಸೆಂಟರ್‌ನಲ್ಲಿ 89 ಜನರನ್ನು ಅವಲೋಕನೆಗಾಗಿ ಇರಿಸಲಾಗಿದೆ ಎಂದು ಪ್ರಭಾರಿ ಅಪರ ಜಿಲ್ಲಾಧಿಕಾರಿ ಶಂಕರಗೌಡ ಎಸ್.ಸೋಮನಾಳ ತಿಳಿಸಿದ್ದಾರೆ.
26ರಂದು ಕೋವಿಡ್ ಪರೀಕ್ಷೆ ಸ್ಥಳದಲ್ಲಿಯೇ ವರದಿ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಕೋವಿಡ್ ಸೋಂಕಿಗೆ ಸಂಬಂಧಪಟ್ಟಂತೆ ಜು.26ರಂದು ರವಿವಾರ ಯಾದಗಿರಿ, ಶಹಾಪುರ, ಸುರಪುರ ಹಾಗೂ ಗುರುಮಠಕಲ್‌ನಲ್ಲಿ ಆ್ಯಂಟಿಜೆನ್ ಟೆಸ್ಟ್ (ಕೋವಿಡ್-19 ಟೆಸ್ಟ್) ಗಳನ್ನು ಮಾಡಲಾಗುತ್ತಿದ್ದು, ಸ್ಥಳದಲ್ಲಿಯೇ ವರದಿ ನೀಡಲಾಗುವುದು ಎಂದು ಪ್ರಭಾರಿ ಅಪರ ಜಿಲ್ಲಾಧಿಕಾರಿ ಶಂಕರಗೌಡ ಎಸ್. ಸೋಮನಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಯಾದಗಿರಿ ನಗರದ ಕೋಲಿವಾಡ, ಲಕ್ಷ್ಮೀನಗರ, ಅಜೀಜ್ ಕಾಲೊನಿ, ಶಹಾಪುರದ ಗುತ್ತಿಪೇಟ, ಇಂದಿರಾ ನಗರ, ಸೈಯ್ಯದ್ ಓಣಿ, ಸುರಪುರದ ದೇವಲಗುಡ್ಡ, ರಂಗಂಪೇಟ, ಕಬಡಗೇರಾ ಹಾಗೂ ಗುರುಮಠಕಲ್ ನ ಹರಿಜನವಾಡಾಗಳಲ್ಲಿರುವ ಬಾಣಂತಿಯರಿಗೆ, ಕೋವಿಡ್ ಪಾಸಿಟಿವ್ ಬಂದಿರುವ ವ್ಯಕ್ತಿಯ ಪ್ರಾಥಮಿಕ ಸಂಪರ್ಕದಲ್ಲಿರುವವರಿಗೆ, 65 ವಯಸ್ಸು ಮೇಲ್ಪಟ್ಟವರಿಗೆ, ಗರ್ಭಿಣಿಯರಿಗೆ, ರಕ್ತದೊತ್ತಡ, ಸಕ್ಕರೆ ಕಾಯಿಲೆ, ಕಿಡ್ನಿ ತೊಂದರೆ, ಅಸ್ತಮಾ, ಹೃದಯ ತೊಂದರೆ ಹಾಗೂ ಇನ್ನಿತರ ಮಾರಣಾಂತಿಕ ಕಾಯಿಲೆಗಳು ಇದ್ದವರಿಗೆ ಆರೋಗ್ಯ ಇಲಾಖೆ ಸಿಬ್ಬಂದಿ ಕೊರೊನಾ ಪರೀಕ್ಷೆ ಮಾಡುವರು ಹಾಗೂ ಸ್ಥಳದಲ್ಲಿಯೆ ವರದಿ ನೀಡುತ್ತಾರೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Belthangady: ಈ ಪುಟ್ಟ ಪೋರನಿಗಿದೆ 300 ವಿದೇಶಿ ಹಣ್ಣಿನ ಗಿಡ ಪರಿಚಯ!
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ
Dharmasthala: ಲಕ್ಷದೀಪಗಳ ಜಗಮಗ; ವಿದ್ಯುತ್ ದೀಪಗಳಿಂದ ಶೃಂಗಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.