ವೈದ್ಯಕೀಯ ವಿದ್ಯಾರ್ಥಿಗಳ ಪರೀಕ್ಷೆ ಬೇಡ: ದೇಶ್ಮುಖ್
Team Udayavani, Jul 25, 2020, 2:46 PM IST
ಮುಂಬಯಿ, ಜು. 24: ಪ್ರಸ್ತುತ ಪರಿಸ್ಥಿತಿಯನ್ನು ಗಮನಿಸಿಯೂ ಮಹಾರಾಷ್ಟ್ರ ಆರೋಗ್ಯ ವಿಜ್ಞಾನ ವಿ.ವಿ. ರಾಜ್ಯದ ವೈದ್ಯಕೀಯ ವಿದ್ಯಾರ್ಥಿಗಳ ಪರೀಕ್ಷೆಗಳ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ವೈದ್ಯಕೀಯ ವಿದ್ಯಾರ್ಥಿಗಳ ಜೀವಕ್ಕೆ ಅಪಾಯವನ್ನುಂಟು ಮಾಡುವ ಯಾವುದೇ ಪರೀಕ್ಷೆಗಳು ಸದ್ಯಕ್ಕೆ ಬೇಡ ಎಂದು ಶಿಕ್ಷಣ ಸಚಿವ ಅನಿಲ್ ದೇಶ್ಮುಖ್ ಹೇಳಿದ್ದಾರೆ.
ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ಕಾಳಜಿ ವಹಿಸುತ್ತಾ ಪರೀಕ್ಷೆಗಳನ್ನು ಮುಂದೂಡುವುದರ ಜತೆಗೆ ಅನು ಕೂಲಕರ ವಾತಾವರಣ ಸೃಷ್ಟಿಯಾದ ಕೂಡಲೇ ಪರೀಕ್ಷೆಗಳನ್ನು ನಿಯೋಜಿಸುವಂತೆ ಉಪಕುಲಪತಿ ಡಾ| ದಿಲೀಪ್ ಮೈಸೇಕರ್ ಅವರಿಗೆ ಸೂಚಿಸಿದ್ದಾರೆ. ವೈದ್ಯಕೀಯ ವಿಭಾಗದ ಪ್ರಥಮ, ದ್ವಿತೀಯ ಮತ್ತು ತೃತೀಯ ವರ್ಷಗಳ ವಿದ್ಯಾರ್ಥಿಗಳಿಗೆ ಮುಂದಿನ ಕೋರ್ಸ್ ಪ್ರಾರಂಭಿಸು ವುದರ ಜತೆಗೆ ಎಲ್ಲ ನಾನ್ ಸರ್ಟಿಫಾಯಿಂಗ್ ಪರೀಕ್ಷೆಗಳನ್ನು ಮುಂದಿನ ಸೂಚನೆ ವರೆಗೆ ಮುಂದೂಡಬೇಕು ಎಂದಿದ್ದಾರೆ.
ಅಂತಿಮ ವರ್ಷದ ವಿದ್ಯಾರ್ಥಿ ಗಳಿಗೆ ಇಂಟರ್ನ್ಶಿಪ್ ಪ್ರಾರಂಭಿಸುವುದರಿಂದ ಅವರ ಮುಂದಿನ ಶಿಕ್ಷಣಕ್ಕೆ ತೊಂದರೆಯಾ ಗುವುದಿಲ್ಲ. ಕೋವಿಡ್ -19ರ ಪ್ರಮಾಣ ಕಡಿಮೆಯಾದ ಕೂಡಲೇ ಈ ವಿದ್ಯಾರ್ಥಿಗಳ ಪರೀಕ್ಷೆಗಳನ್ನು ನಡೆಸಬೇಕು. ಅದಕ್ಕೆ ಅನುಗುಣವಾಗಿ ಕೇಂದ್ರ ಮಂಡಳಿಗೆ ಮಾಹಿತಿ ನೀಡಬೇಕು ಎಂದು ಅನಿಲ್ ದೇಶ್ಮುಖ್ ಹೇಳಿದ್ದಾರೆ. ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳು ಪ್ರಸ್ತುತ ಕ್ಯಾಂಪಸ್ನಲ್ಲಿರುವುದರಿಂದ, ಅವರಿಗೆ ಯಾವುದೇ ರೀತಿಯ ಸಮಸ್ಯೆಯಾಗುವುದಿಲ್ಲ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
ಇಂಗ್ಲೆಂಡ್ನ ರಾದರಮ್ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’
Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್
MUST WATCH
ಹೊಸ ಸೇರ್ಪಡೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.