ಈ ವರ್ಷವೂ ಪ್ರವಾಹ ಆತಂಕ?: 19 ಜಿಲ್ಲೆಗಳ 1981 ಹಳ್ಳಿಗಳ ಪಟ್ಟಿ ಸಿದ್ಧ
Team Udayavani, Jul 26, 2020, 6:47 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೆಂಗಳೂರು: ರಾಜ್ಯದಲ್ಲಿ ಈ ವರ್ಷವೂ ಪ್ರವಾಹದ ಅಪಾಯ ಇರುವ ಹತ್ತೊಂಬತ್ತು ಜಿಲ್ಲೆಗಳ ಸುಮಾರು 1,981 ಹಳ್ಳಿಗಳನ್ನು ಪಟ್ಟಿ ಮಾಡಲಾಗಿದ್ದು, ತೊಂದರೆಗೀಡಾಗಬಹುದಾದ 51.81 ಲಕ್ಷ ಜನರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲು ಸರಕಾರ ಮುಂದಾಗಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಸಂಭವನೀಯ ಪ್ರವಾಹ ಪರಿಸ್ಥಿತಿ ಎದುರಿಸಲು ಸರಕಾರ ಸಿದ್ಧವಾಗಿದ್ದು, ಜಿಲ್ಲಾಡಳಿತಗಳಿಗೆ ಸೂಚನೆ ನೀಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.
ಸಾಂತ್ವನ ಕೇಂದ್ರ
ವಿಧಾನಸೌಧದಲ್ಲಿ ಶನಿವಾರ ಕಳೆದ ವರ್ಷ ಪ್ರವಾಹದಿಂದ ಸಂಕಷ್ಟ ಎದುರಿಸಿದ್ದ 19 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ವೀಡಿಯೋ ಸಂವಾದ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ಥಳಾಂತರಿಸಲಿರುವ ಜನರಿಗೆ ತಾತ್ಕಾಲಿಕ ವಸತಿ, ಊಟೋಪಹಾರಕ್ಕಾಗಿ 1,747 ಸಾಂತ್ವನ ಕೇಂದ್ರಗಳನ್ನು ತೆರೆಯಲು ನಿರ್ಧರಿಸಲಾಗಿದೆ. ಶಾಲೆ, ಸಮುದಾಯ ಭವನ ಹಾಗೂ ಅಂಗನವಾಡಿ ಕೇಂದ್ರಗಳನ್ನು ಇದಕ್ಕಾಗಿ ಬಳಸಿಕೊಳ್ಳಲಾಗುವುದು ಎಂದರು.
ಇದಕ್ಕಾಗಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದು ತಿಳಿಸಿದರು.
ರೆಡ್ ಅಲರ್ಟ್
ಪೂರ್ವ ಸಮೀಕ್ಷೆ ಹಾಗೂ ಅಧ್ಯಯನ ವರದಿಯಂತೆ ಈ ಬಾರಿ ಭೂಕುಸಿತದ ಪ್ರದೇಶಗಳನ್ನು ಗುರುತಿಸಿ ರೆಡ್ ಅಲರ್ಟ್ ನೀಡಲಾಗಿದೆ. ಕೊಡಗು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಭಾಗಶಃ ಹಾಸನ ಜಿಲ್ಲೆಯಲ್ಲಿ ಭೂಕುಸಿತ ಪ್ರದೇಶಗಳನ್ನು ಗುರುತಿಸಲಾಗಿದೆ ಎಂದು ಸಚಿವರು ಹೇಳಿದರು.
ಕೆಲವೆಡೆ ಮಳೆ ಕೊರತೆ
ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಕೊಡಗು, ದಕ್ಷಿಣ ಕನ್ನಡ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆ ಕೊರತೆಯಾಗಲಿದ್ದು, ಉಳಿದ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯಾಗಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
MUST WATCH
ಹೊಸ ಸೇರ್ಪಡೆ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.