ಪಾಕಿಸ್ತಾನ: ಗಸ್ತು ತಿರುಗುತ್ತಿದ್ದ ಸೈನಿಕರ ಮೇಲೆ ಭಯೋತ್ಪಾದಕರ ಗುಂಡಿನ ದಾಳಿ
Team Udayavani, Jul 26, 2020, 8:03 AM IST
ಪಾಕಿಸ್ತಾನ: ಬಲೂಚಿಸ್ತಾನದ ಟುರ್ಬಾತ್ ಪ್ರದೇಶದಲ್ಲಿ ಶನಿವಾರ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಗೆ ಓರ್ವ ಪಾಕಿಸ್ತಾನದ ಸೈನಿಕ ಸಾವನ್ನಪ್ಪಿದ್ದು ಇತರ ಮೂವರು ಗಾಯಗೊಂಡಿದ್ದಾರೆ ಎಂದು ವರದಿ ತಿಳಿಸಿದೆ.
ಟುರ್ಬತ್ನಿಂದ ಸುಮಾರು 35 ಕಿಲೋಮೀಟರ್ ದೂರದಲ್ಲಿರುವ ಕೆಚ್ ಜಿಲ್ಲೆಯ ಪಿಡರಾಕ್ ಬಳಿ ಪಾಕ್ ಸೈನಿಕರು ಗಸ್ತು ತಿರುಗುತ್ತಿದ್ದಾಗ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಐಎಸ್ಪಿಆರ್ ಪ್ರಕಟಣೆಯಲ್ಲಿ ತಿಳಿಸಿದೆ.
ಮೃತ ಸೈನಿಕನನ್ನು ಲ್ಯಾನ್ಸ್ ನಾಯಕ್ ಜಾವೇದ್ ಕರೀಮ್ ಎಂದು ಗುರುತಿಸಲಾಗಿದ್ದು ಇತರ ಮೂವರು ಸೈನಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಲೂಚಿಸ್ಥಾನದಲ್ಲಿ ಇತ್ತೀಚಿನ ದಿನಗಳಲ್ಲಿ ಉಗ್ರ ದಾಳಿ ಹೆಚ್ಚಾಗುತ್ತಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಸೈನಿಕರನನ್ನು ನಿಯೋಜಿಸಲಾಗುತ್ತಿದೆ.
ಜುಲೈ 14 ರಂದು ಕೂಡ ಬಲೂಚಿಸ್ತಾನದ ಪಂಜಗೂರ್ ಜಿಲ್ಲೆಯಲ್ಲಿ ಭಯೋತ್ಪಾದಕರು ಹೊಂಚು ಹಾಕಿ ಮೂವರು ಸೈನಿಕರನ್ನು ಹತ್ಯೆ ಮಾಡಿದ್ದರು. ಈ ದಾಳಿಯಲ್ಲಿ 8 ಮಂದಿ ಸೈನಿಕರು ಗಾಯಗೊಂಡಿದ್ದರು. ಮೇ ತಿಂಗಳಲ್ಲಿ ಬುಲೆಡಾ ಪ್ರದೇಶದಲ್ಲಿ ನಡೆದ ಸ್ಫೋಟದಲ್ಲಿ ಮೇಜರ್ ಸೇರಿದಂತೆ ಆರು ಮಂದಿ ಸೇನಾ ಸಿಬ್ಬಂದಿಗಳು ಮೃತಪಟ್ಟಿದ್ದರು ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kazakhstan: ಅಜೆರ್ಬೈಜಾನ್ ಏರ್ ಲೈನ್ಸ್ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ
American Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್’ಗೆ ಅಡ್ಡಿ
Bangladesh: 42,600 ಕೋಟಿ ರೂ. ಲಂಚ ಕೇಸ್: ಹಸೀನಾ ವಿರುದ್ಧ ತನಿಖೆ ಶುರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.