ಅಕ್ರಮ ಕಲ್ಲು ಗಣಿಗಾರಿಕೆಗಳ ಮೇಲೆ ದಾಳಿ
Team Udayavani, Jul 26, 2020, 8:16 AM IST
ಪಾಂಡವಪುರ: ಬೇಬಿ ಬೆಟ್ಟದಲ್ಲಿ ನಡೆಯುತ್ತಿರುವ ಅಕ್ರಮ ಕಲ್ಲು ಗಣಿಗಾರಿಕೆಗಳ ಮೇಲೆ ದಾಳಿ ನಡೆಸಿರುವ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ಪೊಲೀಸ್ ಅಧಿಕಾರಿಗಳು ಗಣಿಗಾರಿಕೆ ಬಳಸುತ್ತಿದ್ದ ಯಂತ್ರಗಳನ್ನು ವಶಕ್ಕೆ ಪಡೆದುಕೊಂಡು ದೂರು ದಾಖಲಿಸಿದ್ದಾರೆ.
ಇತ್ತೀಚಿಗೆ ಮಂಡ್ಯ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕೈಗೊಂಡ ನಿರ್ದೇಶನದಂತೆ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ವಿರುದ್ಧ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪ ನಿರ್ದೇಶಕಿ ಟಿ.ವಿ.ಪುಷ್ಪಾಲತಾ ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಅಧಿಕಾರಿಗಳ ತಂಡ ಅಕ್ರಮ ಗಣಿಗಾರಿಕೆಗೆ ಬಳಸುತ್ತಿದ್ದ ಯಂತ್ರಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಬೇಬಿ ಬೆಟ್ಟದ ಕಾವಲ್ ಪ್ರದೇಶಕ್ಕೆ ದಾಳಿ ನಡೆಸಿರುವ ಅಧಿಕಾರಿಗಳು ಅಕ್ರಮ ಕಲ್ಲು ಗಣಿಗಾರಿಕೆಗೆ ಕಡಿವಾಣಕ್ಕೆ ಗಣಿ ಮತ್ತು ಭೂ ವಿಜ್ಞಾನ, ಪೊಲೀಸ್ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಚರಣೆ ನಡೆಸಿ, ಅಕ್ರಮ ಗಣಿಗಾರಿಕೆ ನಡೆಸದಂತೆ ಎಚ್ಚರಿಕೆ ನೀಡಿದ್ದರು. ಆದರೂ ಗಣಿ ಮಾಲೀಕರು ಅಕ್ರಮ ಗಣಿಗಾರಿಕೆ ನಡೆಯುತ್ತಿದೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಸರ್ಕಲ್ ಇನ್ಸ್‌ಪೆಕ್ಟರ್‌ಕೆ.ಎಸ್. ಪ್ರಭಾಕರ್ ನೇತೃತ್ವದಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದರು.
ಗಣಿಕಾರಿಕೆಯಿಂದ ಕೆಆರ್‌ಎಸ್‌ಗೆ ಅಪಾಯವಿದೆ ಎಂದು ಕೇಂದ್ರ ನೈಸರ್ಗಿಕ ವಿಕೋಪ ತಂಡದ ವರದಿ ಹಿನ್ನೆಲೆಯಲ್ಲಿ ಕೆಆರ್‌ಎಸ್‌ನಿಂದ 20 ಕಿ.ಮೀ ವ್ಯಾಪ್ತಿಯಲ್ಲಿ ಕಲ್ಲು ಗಣಿಗಾರಿಕೆ ಯನ್ನು ಜಿಲ್ಲಾಡಳಿತ ನಿಷೇಧಿಸಿದೆ. ಆದರೂ ಗಣಿಗಾರಿಕೆ ನಡೆಸುತ್ತಿರುವ ಪರಿಣಾಮ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು
Kannada Sahitya Sammelana: ಮೊದಲ ಬಾರಿಗೆ ದೃಷ್ಟಿಚೇತನರ ವಿಶೇಷ ಕವಿಗೋಷ್ಠಿ
Maddur; ಕೆಲಸದ ಒತ್ತಡ: ಎಂಜಿನಿಯರ್ ಆತ್ಮಹ*ತ್ಯೆ
Karnataka Congress: ಯಾವುದೇ ಒಪ್ಪಂದ ಆಗಿಲ್ಲ: ಸಿಎಂ ಸಿದ್ದರಾಮಯ್ಯ
Mandya: ಬಹುಮಾನ ಗೆದ್ದ ಹಳ್ಳಿಕಾರ್ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!
MUST WATCH
ಹೊಸ ಸೇರ್ಪಡೆ
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್ ನೇತೃತ್ವ
Operation: ಕಾಸರಗೋಡಿನಲ್ಲಿ ಎನ್.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.