ಬಿಮ್ಸ್ ಆಸ್ಪತ್ರೆಯ ಐಸಿಯುದಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಪೋಟ: ತಪ್ಪಿದ ಭಾರಿ ದುರಂತ
Team Udayavani, Jul 26, 2020, 5:56 PM IST
ಬೆಳಗಾವಿ: ಇಲ್ಲಿನ ಬಿಮ್ಸ್ ಆಸ್ಪತ್ರೆಯ ತುರ್ತು ನಿಗಾ ಘಟಕ (ಐಸಿಯು) ದಲ್ಲಿ ರವಿವಾರ ಮಧ್ಯಾಹ್ನ ಆಕ್ಸಿಜನ್ ಸಿಲಿಂಡರ್ ಸ್ಪೋಟಗೊಂಡು ಮೂವರು ಗಾಯಗೊಂಡಿದ್ದು, ಭಾರೀ ಅನಾಹುತ ತಪ್ಪಿದಂತಾಗಿದೆ.
ಐಸಿಯುದಲ್ಲಿ ಆಕ್ಸಿಜನ್ ಅಳವಡಿಸುವಾಗ ಸಿಲಿಂಡರ್ ಬದಲಿಸುವ ವೇಳೆ ತಾಂತ್ರಿಕ ದೋಷದಿಂದ ಏಕಾಏಕಿ ಸ್ಪೋಟಗೊಂಡಿದೆ. ಸಿಲಿಂಡರ್ ಅಳವಡಿಸುತ್ತಿದ್ದ ಒಬ್ಬರು ವೈದ್ಯ, ನರ್ಸ್ ಹಾಗೂ ವಾರ್ಡ್ ಬಾಯ್ ಗಾಯಗೊಂಡಿದ್ದಾರೆ. ಕೈ ಹಾಗೂ ಕಾಲು ಸುಟ್ಟಿದ್ದು, ಈ ಮೂವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಸಿಲಿಂಡರ್ ಸ್ಪೋಟಗೊಳ್ಳುತ್ತಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಅಲ್ಲಿಯೇ ಸಮೀಪದಲಿದ್ದ ಮೂವರಿಗೂ ಬೆಂಕಿ ತಗುಲಿದೆ. ಐಸಿಯುನಲ್ಲಿದ್ದ ಈ ಮೂವರೂ ಪಿಪಿಇ ಕಿಟ್ ಧರಿಸಿದ್ದರಿಂದ ಬೆಂಕಿ ಹತ್ತಿಕೊಂಡಿದೆ. ಕೂಡಲೇ ಸಹೋದ್ಯೋಗಿಗಳು ಬೆಂಕಿ ನಂದಿಸಿ ಈ ಮೂವರನ್ನು ಪ್ರಾಣಾಪಾಯದಿಂದ ರಕ್ಷಿಸಿದ್ದಾರೆ.
ಆಸ್ಪತ್ರೆಯಲ್ಲಿದ್ದ ಇನ್ನುಳಿದ ರೋಗಿಗಳಿಗಾಗಲೀ ಇತರೆ ಸಿಬ್ಬಂದಿಗಳಿಗೆ ಯಾವುದೇ ತೊಂದರೆ ಆಗಿಲ್ಲ. ಸಿಲಿಂಟರ್ ಓಪನ್ ಮಾಡಿ ಬದಲಿಸುವಾಗ ಕೂಡಲೇ ಬೆಂಕಿ ಹತ್ತಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
President ಮುರ್ಮು ಅವರಿಂದ ಇಂದು ಬೆಳಗಾವಿಯಲ್ಲಿ ಕೆಎಲ್‌ಇ ಕ್ಯಾನ್ಸರ್ ಆಸ್ಪತ್ರೆ ಉದ್ಘಾಟನೆ
ಮಗಳ ಮೇಲೆ ಎರಗಲು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ
Butterfly Park: ಬೆಳಗಾವಿಯ ಹಿಡಕಲ್ ಡ್ಯಾಂ ಬಳಿ ಅತಿ ದೊಡ್ಡ ತೆರೆದ ಚಿಟ್ಟೆ ಪಾರ್ಕ್
Belagavi: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಯ್ಕೆ ವಿಚಾರದ ಬಗ್ಗೆ ಸತೀಶ ಜಾರಕಿಹೊಳಿ ಹೇಳಿದ್ದೇನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.