ಸರ್ಕಾರ ಸೌಲಭ್ಯ ಸದ್ಬಳಕೆಗೆ ಸಲಹೆ
Team Udayavani, Jul 27, 2020, 9:13 AM IST
ಚಿಕ್ಕಬಳ್ಳಾಪುರ: ಸರ್ಕಾರವು ಶಾಲಾ ವಿದ್ಯಾರ್ಥಿಗಳಿಗೆ ನೀಡುತ್ತಿರುವ ಸೌಲಭ್ಯಗಳನ್ನ ಪಡೆದು ವಿದ್ಯಾವಂತರಾಗಿ ಶಾಲೆಗೆ, ಪೋಷಕರಿಗೆ, ಶಿಕ್ಷಕರಿಗೆ ಕೀರ್ತಿ ತರಬೇಕೆಂದು ಸಮಾಜ ಸೇವಕ ಹಾಗೂ ಶಾಲಾಭಿವೃದ್ಧಿ ಸಮಿತಿ ಸದಸ್ಯ ಬ್ಯಾಂಕ್ ಮಂಜುನಾಥ್ ವಿದ್ಯಾರ್ಥಿಗಳಿಗೆ ತಿಳಿಸಿದರು.
ಗೌರಿಬಿದನೂರು ಪಟ್ಟಣದಲ್ಲಿ ಸರ್ಕಾರದಿಂದ ನೀಡಿರುವ ಪಠ್ಯ ಪುಸ್ತಕಗಳನ್ನು ನಗರದ ಎಸ್‌ಎಸ್‌ಇಎ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ವಿತರಿಸಿ ಮಾತನಾಡಿದ ಅವರು, ಸರ್ಕಾರವು ಸರ್ಕಾರಿ, ಅನುದಾನಿತ ಪ್ರೌಢ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಶೈಕ್ಷಣಿಕ ಶ್ರೇಯಸ್ಸಿಗಾಗಿ ಪ್ರತಿ ವರ್ಷ ಕೋಟ್ಯಂತರ ರೂ. ವೆಚ್ಚದಲ್ಲಿ ಹಲವಾರು ಸೌಲಭ್ಯಗಳನ್ನು ಜಾರಿಗೊಳಿಸುತ್ತಿದೆ ಎಂದರು.
ವಿದ್ಯಾರ್ಥಿಗಳಿಗೆ ಸರ್ಕಾರವು ನೀಡುವ ಸೌಲಭ್ಯಗಳಲ್ಲಿ ಪಠ್ಯ ಪುಸ್ತಕ ವಿತರಣೆಯು ಬಹಳ ಮುಖ್ಯವಾಗಿದೆ. ಸರ್ಕಾರವು ನೀಡುವ ಸೌಲಭ್ಯ ಪಡೆದು ಜ್ಞಾನವಂತರಾಗಿ ಸಮಾಜದಲ್ಲಿ ಉನ್ನತ ಹುದ್ದೆ ಅಲಂಕರಿಸಿ ದೇಶದ ಅಭಿವೃದ್ಧಿಗೆ ಮುಂದಾಗಬೇಕು ಎಂದು ಹೇಳಿದರು. ಉಪ ಪ್ರಾಂಶುಪಾಲ ಆಂಜನೇಯ ಮಾತನಾಡಿ, ಸರ್ಕಾರಿ ಶಾಲೆಗಳಿಗೆ ಬೋಧನೆ ಮಾಡಲು ಪ್ರಜ್ಞಾವಂತ ಶಿಕ್ಷಕರನ್ನು ಆಯ್ಕೆ ಮಾಡುತ್ತಿದೆ. ಕೆಳ ಹಂತದಲ್ಲಿರುವ ವಿದ್ಯಾರ್ಥಿಗಳು ಉತ್ತೀರ್ಣರಾಗಲು ಶಿಕ್ಷಕರು ಶ್ರಮಿಸುತ್ತಿದ್ದಾರೆ. ಪೋಷಕರು ಮಕ್ಕಳ ಹಾಜರಾತಿ ಬಗ್ಗೆ ಗಮನ ಹರಿಸಬೇಕು. ವಿದ್ಯಾರ್ಥಿಗಳು ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಉಜ್ವಲ ಭವಿಷ್ಯ ರೂಪಿಸಿಕೊಂಡಾಗ ಮಾತ್ರ ಸರ್ಕಾರದ ಯೋಜನೆಗಳು ಫಲಪ್ರದವಾಗುತ್ತದೆ ಎಂದರು.
ಶಿಕ್ಷಕರಾದ ಎನ್.ಕೆ.ಕೆಂಚವೀರ್, ಲಕ್ಷ್ಮೀನರಸಪ್ಪ, ಸಂಜೀವರಾಯಪ್ಪ, ಜಿ.ಎನ್. ಸನತ್‌ಕುಮಾರ್, ಶಾಲಾ ಸಿಬ್ಬಂದಿಗಳಾದ ಅನಿತಮ್ಮ, ಪದ್ಮಾವತಮ್ಮ, ಲಕ್ಷ್ಮಯ್ಯ ಹಾಜರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chintamani: ಭೀಕರ ಅಪಘಾತ; ಬಸ್ ಚಕ್ರದ ಕೆಳಗೆ ಬೈಕ್ ಸಿಲುಕಿ ದಂಪತಿ ಸಾವು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.