ಸಕ್ಕರೆ ಕಾರ್ಖಾನೆ ಪುನರಾರಂಭಕ್ಕೆ ಮನವಿ

Team Udayavani, Jul 27, 2020, 11:13 AM IST

ಸಕ್ಕರೆ ಕಾರ್ಖಾನೆ ಪುನರಾರಂಭಕ್ಕೆ ಮನವಿ

ಹಿರಿಯೂರು: ವಾಣಿವಿಲಾಸ ಸಕ್ಕರೆ ಕಾರ್ಖಾನೆಯನ್ನುಪುನರಾರಂಭಿಸಬೇಕು ಎಂದು ಕೃಷಿಕ ಸಮಾಜದ ಅಧ್ಯಕ್ಷ ಎಚ್‌.ಆರ್‌. ತಿಮ್ಮಯ್ಯ ಅವರು ಶಾಸಕಿ ಪೂರ್ಣಿಮಾ ಶ್ರೀನಿವಾಸ್‌ ಹಾಗೂ ಸಂಸದ ಎ. ನಾರಾಯಣಸ್ವಾಮಿ ಅವರಲ್ಲಿ ಮನವಿ ಮಾಡಿದ್ದಾರೆ. ವಾಣಿವಿಲಾಸ ಸಹಕಾರಿ ಸಕ್ಕರೆ ಕಾರ್ಖಾನೆ ಸುಮಾರು
1971-72ರಲ್ಲಿ ಪ್ರಾರಂಭಗೊಂಡಿದೆ. ಪ್ರತಿನಿತ್ಯ 1250 ಮೆಟ್ರಿಕ್‌ ಟನ್‌ ಕಬ್ಬು ಅರೆಯುವ ಸಾಮರ್ಥ್ಯ ಹೊಂದಿದ್ದು, ಸುಮಾರು 250 ಎಕರೆ ವಿಸ್ತೀರ್ಣ ಪ್ರದೇಶದ ವ್ಯಾಪ್ತಿಯಲ್ಲಿ ಸ್ಥಾಪಿಸಲಾಗಿದೆ. ಬೆಂಗಳೂರು-ಪೂನಾ ರಾಷ್ಟ್ರೀಯ ಹೆದ್ದಾರಿ ಹಾಗೂ ಶ್ರೀರಂಗಪಟ್ಟಣ-ಬೀದರ್‌ ರಾಷ್ಟ್ರೀಯ ಹೆದ್ದಾರಿಗಳ ನಡುವೆ ಈ ಕಾರ್ಖಾನೆ ಸ್ಥಾಪನೆಗೊಂಡಿದೆ. ಸಕ್ಕರೆ ಕಾರ್ಖಾನೆ ಜಿಲ್ಲೆಯ ಹಿರಿಯೂರು, ಚಳ್ಳಕೆರೆ, ಚಿತ್ರದುರ್ಗ, ಹೊಸದುರ್ಗ, ಹೊಳಲ್ಕೆರೆ ತಾಲೂಕುಗಳು ಅಲ್ಲದೆ ತುಮಕೂರು
ಜಿಲ್ಲೆಯ ಶಿರಾ, ಚಿಕ್ಕನಾಯಕನಹಳ್ಳಿ ತಾಲೂಕುಗಳ ಕಬ್ಬು ಬೆಳೆಯುವ ಪ್ರದೇಶದ ವ್ಯಾಪ್ತಿ ಹೊಂದಿದೆ. ಈ ಸಕ್ಕರೆ ಕಾರ್ಖಾನೆಗೆ ಹೊಂದಿಕೊಂಡಂತೆ ಇದರ ತ್ಯಾಜ್ಯ ಮಲಾಸಿನ್‌ನಿಂದ ಸ್ಪಿರಿಟ್‌ ತಯಾರು ಮಾಡಲು ಡಿಸ್ಟಲರಿಯನ್ನೂ ಪ್ರಾರಂಭಿಸಲಾಗಿತ್ತು. ಆದರೆ ಕ್ರಮೇಣ ಜಿಲ್ಲೆ ಸತತ ಬರಗಾಲಕ್ಕೆ ತುತ್ತಾಯಿತು.

ಅಲ್ಲದೆ ವಾಣಿವಿಲಾಸ ಸಾಗರದಲ್ಲಿ ನೀರಿನ ಕೊರತೆಯುಂಟಾಗಿ ರೈತರು ಕಬ್ಬು ಬೆಳೆಯುವುದನ್ನು ನಿಲ್ಲಿಸಿದ ಪರಿಣಾಮ ಈ ಕಾರ್ಖಾನೆ ಕಬ್ಬು ಅರೆಯುವುದನ್ನು ನಿಲ್ಲಿಸಿ ಲಾಕ್‌ಡೌನ್‌ ಘೋಷಿಸಲಾಯಿತು. ಇದರಿಂದ ಈ ಸಕ್ಕರೆ ಕಾರ್ಖಾನೆಯನ್ನೇ ನಂಬಿದ ನೂರಾರು ಕುಟುಂಬಗಳು ಹಾಗೂ ಕಾರ್ಖಾನೆ ಕಾರ್ಮಿಕರ ಬದುಕು ಬೀದಿಪಾಲಾಯಿತು ಎಂದಿದ್ದಾರೆ.

ಇದೀಗ ವಾಣಿವಿಲಾಸ ಸಾಗರಕ್ಕೆ ಪ್ರತಿ ವರ್ಷ ಭದ್ರಾ ಜಲಾಶಯದಿಂದ ಸುಮಾರು 10 ಟಿಎಂಸಿ ನೀರು ಬರುವ ಸಂಭವವಿದೆ. ರೈತರು ಕಬ್ಬು ಬೆಳೆಯಲು ಪ್ರೋತ್ಸಾಹ ನೀಡಿ ಸಾವಿರಾರು ಕುಟುಂಬಗಳಿಗೆ ಆಶ್ರಯವಾದ ಈ ಕಾರ್ಖಾನೆಯನ್ನು ಮತ್ತೆ ತೆರೆಯಬೇಕು ಎಂಬುದು ಈ ಜಿಲ್ಲೆಯ ಜನರ ಒತ್ತಾಸೆಯಾಗಿದೆ. ಕಾರ್ಮಿಕ ಮತ್ತು ಸಕ್ಕರೆ ಖಾತೆ ಸಚಿವ ಶಿವರಾಂ ಹೆಬ್ಟಾರ್‌ ರವರು ಸಕ್ಕರೆ ನಿರ್ದೇಶನಾಲಯದ ಅ ಧಿಕಾರಿಗಳೊಂದಿಗೆ ಸಭೆ ನಡೆಸಿ
ಸಕ್ಕರೆ ಕಾರ್ಖಾನೆಯನ್ನು ಮಾರಾಟ ಮಾಡುವ ಸಲುವಾಗಿ ಒಬ್ಬ ವಿಶೇಷಾಧಿಕಾರಿಯನ್ನು ನೇಮಿಸಿರುವುದಾಗಿ ತಿಳಿದುಬಂದಿದೆ. ಯಾವುದೇ ಕಾರಣಕ್ಕೂ ಜಿಲ್ಲೆಯ ರೈತರ ಸ್ವತ್ತಾಗಿರುವ ವಾಣಿವಿಲಾಸ ಸಕ್ಕರೆ ಕಾರ್ಖಾನೆಯನ್ನು ಮಾರಾಟ ಮಾಡದೆ ಪುನರಾರಂಭಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

accident

Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

1

Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.