Covid ಕಳವಳ ಜು.27: 5324 ಪ್ರಕರಣಗಳೊಂದಿಗೆ ರಾಜ್ಯದಲ್ಲಿ ಒಂದು ಲಕ್ಷ ದಾಟಿದ ಸೋಂಕಿತರ ಸಂಖ್ಯೆ
ಇದುವರೆಗೆ ನಮ್ಮಲ್ಲಿ ಕೋವಿಡ್ 19 ಸೋಂಕಿಗೆ ಒಟ್ಟು 1953 ಬಲಿ ; 37685 ಜನರು ಗುಣಮುಖ ; 61819 ಸಕ್ರಿಯ ಪ್ರಕರಣಗಳು
Team Udayavani, Jul 27, 2020, 6:56 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೆಂಗಳೂರು: ಭಾನುವಾರ ಸಾಯಂಕಾಲದಿಂದ ಸೋಮವಾರ ಸಾಯಂಕಾಲದವರೆಗಿನ ಕೋವಿಡ್ 19 ಸೋಂಕು ಪ್ರಕರಣಗಳ ವರದಿಯ ಪ್ರಕಾರ, ಈ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 5324 ಕೋವಿಡ್ 19 ಸೋಂಕು ಪ್ರಕರಣಗಳು ವರದಿಯಾಗಿವೆ.
ಈ ಮೂಲಕ ರಾಜ್ಯದಲ್ಲಿ ಒಟ್ಟು ಕೋವಿಡ್ 19 ಸೋಂಕಿತರ ಸಂಖ್ಯೆ ಒಂದು ಲಕ್ಷದ ಗಡಿ ದಾಟಿದೆ. ಇದೀಗ ರಾಜ್ಯದಲ್ಲಿ ಒಟ್ಟಾರೆಯಾಗಿ 101465 ಸೋಂಕು ಪ್ರಕರಣಗಳು ದಾಖಲುಗೊಂಡಂತಾಗಿದೆ.
ಈ ಮೂಲಕ ರಾಜ್ಯದಲ್ಲಿ ಒಟ್ಟು 37685 ಸೋಂಕಿತರು ಗುಣಮುಖರಾಗಿದ್ದಾರೆ. ಮತ್ತು 1953 ಸೋಂಕಿತರು ಮೃತಪಟ್ಟಿದ್ದಾರೆ ಹಾಗೂ 61819 ಸಕ್ರಿಯ ಪಾಸಿಟಿವ್ ಪ್ರಕರಣಗಳು ಇನ್ನೂ ರಾಜ್ಯದಲ್ಲಿವೆ.
ಲಭ್ಯ ವರದಿಗಳ ಪ್ರಕಾರ ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 1847 ಕೋವಿಡ್ 19 ಸೋಂಕಿತರು ಚೇತರಿಸಿಕೊಂಡಿದ್ದಾರೆ. ಇಂದು ರಾಜ್ಯದಲ್ಲಿ ಕೋವಿಡ್ 19 ಸಂಬಂಧಿತ ಒಟ್ಟು 75 ಸಾವು ಸಂಭವಿಸಿದೆ.
ಬೆಂಗಳೂರು ನಗರ ಜಿಲ್ಲೆಯಲ್ಲಿ 1470 ಕೋವಿಡ್ 19 ಸೊಂಕು ಪ್ರಕರಣಗಳು ಪತ್ತೆಯಾಗಿವೆ. ಆ ಬಳಿಕದ ಸ್ಥಾನದಲ್ಲಿ ಬಳ್ಳಾರಿ (840), ಕಲಬುರಗಿ (631), ಮೈಸೂರು (296), ಉಡುಪಿ (225), ಧಾರವಾಡ (193), ಬೆಳಗಾವಿ (155), ಕೋಲಾರ (142), ಬೆಂಗಳೂರು ಗ್ರಾಮಾಂತರ (138), ರಾಯಚೂರು (120), ದಕ್ಷಿಣ ಕನ್ನಡ (119), ವಿಜಯಪುರ (110) ಮತ್ತು ದಾವಣಗೆರೆ (110) ಜಿಲ್ಲೆಗಳಿವೆ.
ಇನ್ನುಳಿದಂತೆ, ತುಮಕೂರು – 89, ಶಿವಮೊಗ್ಗ – 76, ಹಾಸನ – 66, ಯಾದಗಿರಿ – 64, ಗದಗ – 63, ರಾಮನಗರ – 62, ಮಂಡ್ಯ – 56, ಚಿತ್ರದುರ್ಗ – 51, ಬೀದರ್ – 42, ಚಿಕ್ಕಬಳ್ಳಾಪುರ – 40, ಉತ್ತರ ಕನ್ನಡ – 32, ಕೊಪ್ಪಳ – 28, ಬಾಗಲಕೋಟೆ – 27, ಹಾವೇರಿ – 27, ಚಿಕ್ಕಮಗಳೂರು – 26, ಚಾಮರಾಜನಗರ – 16 ಮತ್ತು ಕೊಡಗು – 10 ಸೇರಿದಂತೆ ರಾಜ್ಯದ ಒಟ್ಟು 30 ಜಿಲ್ಲೆಗಳಲ್ಲಿ ಇಂದು ಮೂರಂಕಿ ಹಾಗೂ ಎರಡಂಕಿಯ ಕೋವಿಡ್ 19 ಸೋಂಕಿನ ಪ್ರಕರಣಗಳು ವರದಿಯಾಗಿವೆ.
ಕೋವಿಡ್ 19 ಸೋಂಕಿಗೆ ಇದುವರೆಗೂ ರಾಜ್ಯದಲ್ಲಿ 1953 ಸಾವು ಸಂಭವಿಸಿದೆ. ಹಾಗೂ 08 ಜನ ಕೋವಿಡ್ 19 ಸೋಂಕಿತರು ಅನ್ಯ ಕಾರಣದಿಂದ ಮೃತಪಟ್ಟಿದ್ದಾರೆ. 598 ಸೋಂಕಿತರು ತುರ್ತು ನಿಗಾ ಘಟಕದಲ್ಲಿ ದಾಖಲುಗೊಂಡು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ
Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ
ಚಂದ್ರಶೇಖರ ಶ್ರೀ ವಿರುದ್ಧ ಕೇಸ್; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ
Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ
Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್ ಜಾರಕಿಹೊಳಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ
Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ
Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ
ಚಂದ್ರಶೇಖರ ಶ್ರೀ ವಿರುದ್ಧ ಕೇಸ್; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ
Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.