ನಿಗಮ ಮಂಡಳಿ ನೇಮಕ ಎಚ್ಚರಿಕೆ ಹೆಜ್ಜೆ


Team Udayavani, Jul 28, 2020, 9:03 AM IST

ನಿಗಮ ಮಂಡಳಿ ನೇಮಕ ಎಚ್ಚರಿಕೆ ಹೆಜ್ಜೆ

ರಾಜ್ಯ ಸರಕಾರ ಒಂದು ವರ್ಷ ಪೂರೈಸಿದ ಮರುದಿನವೇ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಪಕ್ಷದ ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡುವ ಮೂಲಕ ಪಕ್ಷ ಮತ್ತು ಸಾರ್ವಜನಿಕರಿಗೆ ಎರಡು ರೀತಿಯ ಸಂದೇಶ ರವಾ ನಿಸುವ ಪ್ರಯತ್ನ ಮಾಡಿದ್ದಾರೆ. ಅಧಿಕಾರಕ್ಕೆ ಬಂದಾಗಿನಿಂದಲೂ ಪ್ರವಾಹ, ಉಪ ಚುನಾವಣೆ, ಹಾಗೂ ಕೊರೊನಾದಂತಹ ಸಾಂಕ್ರಾಮಿಕ ರೋಗದ ಎದುರು ಹೋರಾಟ ಮಾಡುವುದರಲ್ಲಿಯೇ ಅಧಿಕಾರದ ಬಹುತೇಕ ಸಮಯ ವ್ಯರ್ಥ ವಾಗಿರುವುದರಿಂದ ಸರಕಾರ ನಿರೀಕ್ಷಿಸಿದ ಮಟ್ಟದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿಲ್ಲ ಎನ್ನುವ ಭಾವನೆ ಸಾರ್ವಜನಿಕರ ಜತೆಗೆ ಪಕ್ಷದ ಶಾಸಕರು ಹಾಗೂ ಕಾರ್ಯಕರ್ತರಲ್ಲಿಯೂ ಮೂಡಿದೆ ಎನ್ನುವ ಭಾವನೆ ಅವರಲ್ಲಿ ವ್ಯಕ್ತವಾದಂತಿದೆ.

ಈ ಹಿನ್ನೆಲೆಯಲ್ಲಿ ಸರಕಾರ ವರ್ಷ ಕಳೆಯುತ್ತಿದ್ದಂತೆ ಆಡಳಿತ ಯಂತ್ರಕ್ಕೆ ಚುರುಕು ನೀಡುವುದು ಹಾಗೂ ಶಾಸಕರಿಗೆ ನಿಗಮ ಮಂಡಳಿ ಅಧಿಕಾರ ನೀಡಿ ಅವರ ಮನಸ್ಸಿನ ಬೇಸರವನ್ನೂ ಕಳೆಯುವ ಪ್ರಯತ್ನ ಮಾಡಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರ ಈ ದಿಢೀರ್‌ ನಿರ್ಧಾರ ಪಕ್ಷದಲ್ಲಿ ಸಾಕಷ್ಟು ರಾಜಕೀಯ ಚಟುವಟಿಕೆಗಳು ಗರಿಗೆದರಲು ಕಾರಣವಾಗುವ ಸಾಧ್ಯತೆ ಇದೆ. ವರ್ಷಾಚರಣೆ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರಲ್ಲಿ ಉತ್ಸಾಹ ತುಂಬಿಸಲು ಮಾಡಿದ ಪ್ರಯತ್ನದಂತೆ ಕಾಣಿಸುತ್ತಿದೆ. ಅಲ್ಲದೇ ಈ ನೇಮಕ ಸಚಿವ ಸಂಪುಟ ವಿಸ್ತರಣೆಯ ಪೂರ್ವ ಸಿದ್ಧತೆಯ ಸೂಚನೆ ಯಂತೆಯೂ ಕಾಣಿಸುತ್ತದೆ. ಅದೇ ಕಾರಣಕ್ಕೆ ಸಚಿವಾಕಾಂಕ್ಷಿಗಳಾಗಿರುವ ಹಿರಿಯ ಶಾಸಕರಿಗೂ ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನ ನೀಡಿ ಸಮಾಧಾನಪಡಿಸಿ ಮುಂದೆ ಎದುರಾಗಬಹು ದಾದ ಅಸಮಾಧಾನ, ಆಕ್ರೋಶ, ಬಂಡಾಯ ಎಲ್ಲವನ್ನೂ ಆರಂಭದಲ್ಲಿಯೇ ತಡೆಯುವ ಪ್ರಯತ್ನದಂತೆ ಕಾಣಿಸುತ್ತದೆ. ಆದರೆ, ಈಗ ಮಾಡಿರುವ ನೇಮಕದಿಂದಲೂ ಕೆಲವು ಶಾಸಕರು ಅಸಮಾಧಾನಗೊಂಡಿದ್ದು, ತಮಗೆ ಯಾವುದೇ ನಿಗಮ- ಮಂಡಳಿ ಅಧ್ಯಕ್ಷ ಹುದ್ದೆ ಬೇಡ ಎಂದು ಬಹಿರಂಗ ವಾಗಿಯೇ ತಿರಸ್ಕರಿಸುತ್ತಿದ್ದಾರೆ. ನಾಲ್ಕು ಶಾಸಕರ ಹೆಸರು ಅಧಿಕೃತ ಆದೇಶಕ್ಕೂ ಮೊದಲೇ ತಡೆ ಹಿಡಿಯಲಾಯಿತು. ಚಿತ್ರದುರ್ಗದ ತಿಪ್ಪಾರೆಡ್ಡಿ, ಗಂಗಾವತಿಯ ಶಾಸಕ ಪರಣ್ಣ ಮುನವಳ್ಳಿ, ಮುದ್ದೇಬಿಹಾಳ್‌ ಶಾಸಕ ಎ.ಎಸ್‌. ಪಾಟೀಲ್‌ ನಡಹಳ್ಳಿ, ಸುರಪುರ ಶಾಸಕ ನರಸಿಂಹ ನಾಯಕ್‌ (ರಾಜು ಗೌಡ) ಹಾಗೂ ದತ್ತಾತ್ರೆಯ ಪಾಟೀಲ್‌ ರೇವೂರ್‌ ಎಲ್ಲರೂ ಒಂದಿಲ್ಲೊಂದು ರೀತಿಯಲ್ಲಿ ಪ್ರಾದೇಶಿಕತೆ, ಜಾತಿ, ಜಿಲ್ಲಾ ಪ್ರಾತಿನಿಧ್ಯದ ಆಧಾರದಲ್ಲಿ ಸಚಿವ ಸ್ಥಾನ ನೀಡಬೇಕೆಂಬ ಬೇಡಿಕೆ ಇಟ್ಟಿದ್ದಾರೆ.

ಈಗ ಮುಖ್ಯಮಂತ್ರಿ ಯಡಿಯೂರಪ್ಪ ಸಂಪುಟ ವಿಸ್ತರಣೆ ಅಥವಾ ಪುನಾ ರಚನೆಗೂ ಮೊದಲೇ ಅವರಿಗೆ ನಿಗಮ ಮಂಡಳಿ ಸ್ಥಾನ ನೀಡಿ ಸಂಪುಟದಿಂದ ದೂರ ಇಡುವ ಮುನ್ಸೂಚನೆ ನೀಡಿದ್ದಾರೆ. ಈಗಾಗಲೇ ಮುಖ್ಯಮಂತ್ರಿ ಯಡಿ ಯೂರಪ್ಪ ಅವರ ಈ ನಿರ್ಧಾರವನ್ನು ಕೆಲವು ಶಾಸಕರು ಬಹಿರಂಗವಾಗಿ ನಿರಾ ಕರಿಸುವ ಮೂಲಕ ತಾವು ಸಚಿವ ಸ್ಥಾನದ ಆಕಾಂಕ್ಷಿಗಳು ಎನ್ನುವ ಸಂದೇಶ ರವಾ ನಿಸಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ವರ್ಷ ತುಂಬಿದ ಸಂಭ್ರಮದ ಸಮಯದಲ್ಲಿಯೇ ಜೇನು ಗೂಡಿಗೆ ಕಲ್ಲು ಹೊಡೆ ಯುವ ಧೈರ್ಯ ಮಾಡಿದ್ದು, ಅದನ್ನು ಮುಂದಿನ ದಿನಗಳಲ್ಲಿ ಹೇಗೆ ಎದುರಿಸಿ ನಿಭಾಯಿಸುತ್ತಾರೆ ಎನ್ನುವುದು ಅತ್ಯಂತ ಮುಖ್ಯವಾಗಿದೆ. ಅಲ್ಲದೇ ಇದೇ ಗೊಂದಲ ಕೊರೊನಾ ಸಾಂಕ್ರಾ ಮಿ ಕದ ಸಂಕಷ್ಟದ ಸಂದರ್ಭದಲ್ಲಿ ಸರಕಾರದ ಆಡಳಿತ ಯಂತ್ರದ ಮೇಲೆ ಪರಿಣಾಮ ಬೀರದಂತೆ ನೋಡಿಕೊಳ್ಳುವ ಜವಾಬ್ದಾರಿಯೂ ಯಡಿಯೂರಪ್ಪ  ಮೇಲಿದೆ.

ಟಾಪ್ ನ್ಯೂಸ್

Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿಯೂ ವಿದ್ಯುತ್ ಆಘಾತದಿಂದ ಮೃ*ತ್ಯು

Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

Shimoga; Deport Zameer Ahmed: ​​MLA Channabasappa

Shimoga; ಜಮೀರ್‌ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-editorial

Editorial: ಪಾಕ್‌ ಪ್ರೇರಿತ ಉಗ್ರರ ತಂತ್ರಕ್ಕೆ ಸೂಕ್ತ ಪ್ರತಿತಂತ್ರ ಈಗಿನ ತುರ್ತು

ಭಾರತ್‌ ಬ್ರ್ಯಾಂಡ್‌ ಆಹಾರಧಾನ್ಯ ಕಾಳಸಂತೆಕೋರರ ಮೇಲಿರಲಿ ನಿಗಾ

ಭಾರತ್‌ ಬ್ರ್ಯಾಂಡ್‌ ಆಹಾರಧಾನ್ಯ ಕಾಳಸಂತೆಕೋರರ ಮೇಲಿರಲಿ ನಿಗಾ

ಪದವಿ ವಿದ್ಯಾರ್ಥಿಗಳಿಗೆ ಉದ್ಯೋಗ ಅವಕಾಶಕ್ಕೆ ನೆರವಾಗುವ ಕೋರ್ಸ್‌

ಪದವಿ ವಿದ್ಯಾರ್ಥಿಗಳಿಗೆ ಉದ್ಯೋಗ ಅವಕಾಶಕ್ಕೆ ನೆರವಾಗುವ ಕೋರ್ಸ್‌

school

Karnataka; ಶಾಲಾ ಆಸ್ತಿ ಸಂರಕ್ಷಣೆ ಅಭಿಯಾನ ಎಲ್ಲ ಇಲಾಖೆಗಳಿಗೂ ಮಾದರಿ

Forest

Forest: ಅರಣ್ಯದಲ್ಲಿ ನಿರಂತರ ಗಣಿಗಾರಿಕೆ: ಸರಕಾರ ಚರ್ಚಿಸಿ ನಿರ್ಧರಿಸಲಿ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

6

Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ

5

Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ

Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿಯೂ ವಿದ್ಯುತ್ ಆಘಾತದಿಂದ ಮೃ*ತ್ಯು

Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು

4(1

Mangaluru: ಪಂಪ್‌ವೆಲ್‌-ಪಡೀಲ್‌ ನಡುವಿನ ಚತುಷ್ಪಥ ಕಾಮಗಾರಿ 3 ವರ್ಷ ಕಳೆದರೂ ಅಪೂರ್ಣ

10-thirthahalli

Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.