ಕೋವಿಡ್ ಕರ್ತವ್ಯ ನಿರ್ವಹಣೆಗೆ ಅಗತ್ಯ ಮಾನವ ಸಂಪನ್ಮೂಲ ಒದಗಿಸಲು ಸಿದ್ಧ
Team Udayavani, Jul 28, 2020, 8:59 AM IST
ಧಾರವಾಡ: ಕೋವಿಡ್ ಸೋಂಕಿತರ ಚಿಕಿತ್ಸೆ, ಹೋಂ ಐಸೋಲೇಷನ್‌ನಲ್ಲಿ ಇರುವವರಿಗೆ ಕೌನ್ಸೆಲಿಂಗ್, ಸೀಲ್‌ಡೌನ್ ಪ್ರದೇಶಗಳ ನಿರ್ವಹಣೆ, ಜನದಟ್ಟಣೆ ಕಡಿಮೆ ಮಾಡಲು ಮಾರುಕಟ್ಟೆಗಳ ಸ್ಥಳಾಂತರಿಸಲು ಅಗತ್ಯವಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ, ಮಾನವ ಸಂಪನ್ಮೂಲ ಒದಗಿಸಲಾಗುವುದು. ಹೀಗಾಗಿ ಹು-ಧಾ ಮಹಾ ನಗರ ಪಾಲಿಕೆಯು ಪೊಲೀಸ್ ಇಲಾಖೆಯೊಂದಿಗೆ ಸಮನ್ವಯ ಮಾಡಿಕೊಂಡು ಕಾರ್ಯ ನಿರ್ವಹಿಸಬೇಕು ಎಂದು ಡಿಸಿ ನಿತೇಶ್ ಪಾಟೀಲ ಹೇಳಿದರು.
ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಕೋವಿಡ್ 19 ನಿಯಂತ್ರಣಕ್ಕಾಗಿ ರಚಿಸಿರುವ ಕಣ್ಗಾವಲು ತಂಡಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೋವಿಡ್ ನಿರ್ವಹಣೆ ಎಲ್ಲಾ ಇಲಾಖೆಗಳ ಅಧಿ ಕಾರಿಗಳು, ಇಂಜನಿಯರ್‌ಗಳು ಹಾಗೂ ಸಿಬ್ಬಂದಿಗಳನ್ನು ನಿಯೋಜಿಸಲಾಗುವುದು. ಪಾರ್ಥಿವ ಶರೀರಗಳ ಅಂತ್ಯಕ್ರಿಯೆ ನಿರ್ವಹಣೆಗೆ ನಗರ ಸ್ಥಳೀಯ ಸಂಸ್ಥೆಗಳು ಪ್ರತ್ಯೇಕ ಏಜೆನ್ಸಿ ಗುರುತಿಸಿ ಕಟ್ಟಿಗೆ, ಮಾನವ ಸಂಪನ್ಮೂಲ, ವಾಹನ ಮತ್ತಿತರ ಅಗತ್ಯ ಸೇವೆಗಳು 24¥7 ಲಭ್ಯವಿರುವಂತೆ ನೋಡಿಕೊಳ್ಳಬೇಕು. ಪಾರ್ಥಿವ ಶರೀರಗಳ ಅಂತ್ಯಕ್ರಿಯೆ ಸಂದರ್ಭದಲ್ಲಿ ನಿಯಮಗಳ ಪಾಲನೆ ಪರಿಶೀಲಿಸಲು ಪೊಲೀಸ್ ಇಲಾಖೆ ಸಹಕಾರ ಪಡೆಯಬೇಕೆಂದು ಸೂಚಿಸಿದರು.
ಮಹಾನಗರ ಪಾಲಿಕೆಯು ಜನಜಾಗೃತಿಗೆ ಮಾಸ್ಕ್ ಬಳಕೆ, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು, ಮನೆಗಳಲ್ಲಿ ಪ್ರತ್ಯೇಕವಾಗಿ ಇರುವಿಕೆ ಕುರಿತು ವ್ಯಂಗ್ಯಚಿತ್ರ, ಕಲೆ, ಫೋಟೋಗಳನ್ನು ಬಳಸಿ ಹೆದ್ದಾರಿ ಫಲಕಗಳನ್ನು ಅವಳಿನಗರದ ಪ್ರಮುಖ ಸ್ಥಳಗಳಲ್ಲಿ ಅಳವಡಿಸಬೇಕೆಂದು ಸೂಚನೆ ನೀಡಿದರು. ಸಾರ್ವಜನಿಕ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಮೇಜರ್ ಸಿದ್ಧಲಿಂಗಯ್ಯ ಹಿರೇಮಠ ಮಾತನಾಡಿ, ಜಾಗೃತಿ ಮೂಡಿಸಲು ಚಿಕ್ಕಮಕ್ಕಳಿಂದ ಆನ್ ಲೈನ್ ಮೂಲಕ ಚಿತ್ರಕಲಾ ಸ್ಪರ್ಧೆ ಏರ್ಪಡಿಸಿ, ಉತ್ತಮ ಕಲಾಕೃತಿ ನೀಡಿದ ಮಕ್ಕಳನ್ನು ಜಿಲ್ಲಾ ಧಿಕಾರಿಗಳೊಂದಿಗೆ ಉಪಹಾರಕ್ಕೆ ಆಹ್ವಾನಿಸಿ, ಪ್ರೋತ್ಸಾಹಿಸಬೇಕೆಂಬ ಸಲಹೆ ನೀಡಿದಾಗ ಜಿಲ್ಲಾಧಿಕಾರಿಗಳು ಒಪ್ಪಿಗೆ ಸೂಚಿಸಿ, ಚಿತ್ರಕಲೆ,ಲೇಖನ, ಘೋಷವಾಕ್ಯ ರಚನೆ ಹೀಗೆ ವೈವಿಧ್ಯಮಯ ಸ್ಪರ್ಧೆ ಏರ್ಪಡಿಸಲು ಸೂಚಿಸಿದರು.
ಜಿಪಂ ಸಿಇಒ ಡಾ| ಬಿ.ಸಿ.ಸತೀಶ ಮಾತನಾಡಿ, ಜಿಲ್ಲೆಯ ಪ್ರತಿಯೊಂದು ಪ್ರಕರಣಗಳ ದಾಖಲೀಕರಣ ಮತ್ತು ಡಿಸ್ ಚಾರ್ಜ್ ವರದಿಗಳ ಕ್ರೋಢೀಕರಣ ಸರಳಗೊಳಿಸಲು ಗೂಗಲ್ ಸ್ಪ್ರೆಡ್ ಶೀಟ್ ರಚಿಸಿ ಆ ಮೂಲಕ ಅಪ್‌ಡೇಟ್ ಮಾಡುವ ಸೌಕರ್ಯ ಎಲ್ಲಾ ಸರ್ಕಾರಿ, ಖಾಸಗಿ ಆಸ್ಪತ್ರೆಗಳು ಹಾಗೂ ಕೋವಿಡ್ ಕೇರ್ ಸೆಂಟರ್‌ಗಳಲ್ಲಿ ಕಲ್ಪಿಸಬೇಕು ಎಂದರು.
ಹು-ಧಾ ಉಪ ಪೊಲೀಸ್ ಆಯುಕ್ತ ಕೃಷ್ಣಕಾಂತ್, ಮಹಾನಗರ ಪಾಲಿಕೆ ಆಯುಕ್ತ ಡಾ|ಸುರೇಶ ಇಟ್ನಾಳ, ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಹೆಸ್ಕಾಂ ಪ್ರಧಾನ ವ್ಯವಸ್ಥಾಪಕ ಇಬ್ರಾಹಿಂ ಮೈಗೂರ, ಡಿಮ್ಹಾನ್ಸ್ ಮುಖ್ಯ ಆಡಳಿತಾಧಿಕಾರಿ ಡಾ| ಷಣ್ಮುಖ, ಆಹಾರ ಇಲಾಖೆಯ ಜಂಟಿ ನಿರ್ದೇಶಕ ಸದಾಶಿವ ಮರ್ಜಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|ಯಶವಂತ ಮದೀನಕರ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.