ಪಟ್ಟಣ ಪಂಚಾಯಿತಿ ಸದಸ್ಯರಿಂದಲೇ ಅಕ್ರಮ ಮದ್ಯ ಸಾಗಾಣಿಕೆ: ಮೂವರ ವಿರುದ್ಧ ಪ್ರಕರಣ ದಾಖಲು
Team Udayavani, Jul 28, 2020, 2:42 PM IST
ಹನೂರು(ಚಾಮರಾಜನಗರ): ಅಕ್ರಮ ಮದ್ಯ ಸಾಗಾಣಿಕೆ ಪ್ರಕರಣದಲ್ಲಿ ಪಟ್ಟಣ ಪಂಚಾಯಿತಿ ಸದಸ್ಯ ಸೇರಿದಂತೆ 3 ಜನರ ಮೇಲೆ ಹನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಏನಿದು ಪ್ರಕರಣ?: ಹನೂರು ಪಟ್ಟಣ ಪಂಚಾಯಿತಿಯ 10ನೇ ವಾರ್ಡಿನ ಸದಸ್ಯ ಸೋಮಣ್ಣ ಎಂಬುವವರಿಗೆ ಸೇರಿದ ಪಟ್ಟಣದ ಅಮೃತ್ ಬಾರ್ ಅಂಡ್ ರೆಸ್ಟೋರೆಂಟ್‌ನಿಂದ ಸೋಮವಾರ ತಡರಾತ್ರಿ ಅಕ್ರಮವಾಗಿ ಮದ್ಯ ಸಾಗಾಣಿಕೆ ಮಾಡಲಾಗುತಿತ್ತು ಎನ್ನಲಾಗಿದೆ. ಚಾಮರಾಜನರ ಜಿಲ್ಲಾ ಡಿಸಿಐಬಿ ವಿಭಾಗದ ಪೊಲೀಸರು ಗಸ್ತಿನಲ್ಲಿದ್ದ ವೇಳೆ ಉದ್ದನೂರು – ಬೆಳತ್ತೂರು ರಸ್ತೆಯಲ್ಲಿ ಗಿರೀಶ್‌ರವರ ಜಮೀನಿನ ಸಮೀಪ ನೋಂದಣಿಯಿಲ್ಲದ ಟಿವಿಎಸ್ ಮೊಪೆಡ್ ಒಂದರಲ್ಲಿ ವ್ಯಕ್ತಿಯೋರ್ವ ಬಣ್ಣದ ಚೀಲಗಳಲ್ಲಿ ಏನನ್ನೋ ತುಂಬಿಕೊಂಡು ತೆರಳುತ್ತಿದ್ದನು ಎನ್ನಲಾಗಿದೆ.
ಈ ವೇಳೆ ಅನುಮಾನಗೊಂಡ ಡಿಸಿಐಬಿ ಪೊಲೀಸರು ವಾಹನ ಮತ್ತು ಚಾಲಕನನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಿದಾಗ 90ಮಿ.ಲೀನ 864 ಪೌಚುಗಳನ್ನು 9 ಬಾಕ್ಸ್ ಗ ಳಲ್ಲಿ ಯಾವುದೇ ರಹದಾರಿ ಪರವಾನಗಿ ಇಲ್ಲದೆ ಸಾಗಿಸುತ್ತಿದ್ದುದು ಕಂಡು ಬಂದಿದೆ. ಈ ವೇಳೆ ಟಿವಿಎಸ್ ಮೊಪೆಡ್ ಚಾಲನೆ ಮಾಡುತ್ತಿದ್ದ ವ್ಯಕ್ತಿಯನ್ನು ವಿಚಾರಿಸಿದಾಗ ಅಮೃತ್ ಬಾರ್ ಅಂಡ್ ರೆಸ್ಟೋರೆಂಟ್‌ನ ಮಾಲೀಕ ಸೋಮಣ್ಣ ಮತ್ತು ಕ್ಯಾಷಿಯರ್ ಪುಟ್ಟಸ್ವಾಮಿಯ ಸೂಚನೆಯ ಮೇರೆಗೆ ಚೆನ್ನಾಲಿಂಗನಹಳ್ಳಿ, ಚಿಕ್ಕಮಾಲಾಪುರ ಸೇರಿದಂತೆ ಇತರೆ ಗ್ರಾಮಗಳಿಗೆ ಹೆಚ್ಚನ ಬೆಲೆಗೆ ಮಾರಾಟ ಮಾಡಲು ಕೊಂಡೊಯ್ಯುತ್ತಿರುವುದಾಗಿ ಮಾಹಿತಿ ನೀಡಿದ್ದಾನೆ.
ಕೂಡಲೇ ಡಿಸಿಐಬಿ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಸುಮಾರು 30,352 ರೂ. ಮೌಲ್ಯದ ಮದ್ಯವನ್ನು ಜಪ್ತಿ ಮಾಡಿ ಹನೂರು ಪೊಲೀಸ್ ಠಾಣೆಗೆ ಕರೆತಂದು ಯಾವುದೇ ಪರವಾನಗಿ ಇಲ್ಲದೆ ಸಾಗಾಣಿಕೆ ಮಾಡುತ್ತಿದ್ದ ಆರೋಪಿ ಮಾದಪ್ಪ, ಬಾರ್‌ನ ಮಾಲೀಕ ಸೋಮಣ್ಣ ಮತ್ತು ಕ್ಯಾಷಿಯರ್ ಪುಟ್ಟಸ್ವಾಮಿ ವಿರುದ್ಧ ಕ್ರಮ ಕೈಗೊಳ್ಳುವಂತೆ ವರದಿ ನೀಡಿ ಆರೋಪಿ ಮಾದಪ್ಪ ಮತ್ತು ಮದ್ಯವನ್ನು ಹನೂರು ಪೊಲೀಸರ ವಶಕ್ಕೆ ನೀಡಿದ್ದಾರೆ.
ಈ ದಾಳಿಯಲ್ಲಿ ಡಿಸಿಐಬಿ ವಿಭಾಗದ ಇನ್ಸ್ಪೆಕ್ಟರ್ ಮಹದೇವಶೆಟ್ಟಿ, ಎಎಸ್‌ಐ ಜಯಶೇಖರ್, ಪೇದೆ ಕುಮಾರ ಮತ್ತು ಜೀಪ್ ಚಾಲಕ ಮಹೇಶ್ ಭಾಗವಹಿಸಿದ್ದರು.
ಸಾರ್ವಜನಿಕರಿಂದ ವ್ಯಾಪಕ ಟೀಕೆ: ಜನಪರ ಕೆಲಸ ಕಾರ‍್ಯಗಳನ್ನು ಕೈಗೊಂಡು ಪಟ್ಟಣದ ಅಭಿವೃದ್ಧಿಗಾಗಿ ಶ್ರಮಿಸುವುದಾಗಿ ಭರವಸೆ ನೀಡಿ ಅಧಿಕಾರಕ್ಕೆ ಬಂದ ಜನಪ್ರತಿನಿಧಿಗಳು ಹನೂರು ಪಟ್ಟಣ ಸುತ್ತಮುತ್ತಲ ಗ್ರಾಮಗಳಿಗೆ ಅಕ್ರಮವಾಗಿ ಮದ್ಯಸಾಗಾಟ ಮಾಡುತ್ತಿದ್ದು ಸಾರ್ವಜನಿಕರನ್ನು ಮದ್ಯದ ದಾಸರನ್ನಾಗಿಸುತ್ತಿದ್ದಾರೆ. ಹನೂರು ಪಟ್ಟಣದ ಕೆಲ ಬಾರ್ ಮಾಲೀಕರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದವರೆಗೂ ಯಾವುದೇ ಕಾನೂನಿನ ಅಳುಕಿಲ್ಲದೆ ನಿರ್ಭಯವಾಗಿ ಅಕ್ರಮ ಮದ್ಯ ಸಾಗಾಟದಲ್ಲಿ ತೊಡಗಿದ್ದಾರೆ. ಈ ಪ್ರಕರಣದಲ್ಲಿ ಡಿಸಿಐಬಿ ಪೊಲೀಸರ ಕಾರ್ಯವೈಖರಿಯನ್ನು ಮುಕ್ತ ಕಂಠದಿಂದ ಶ್ಲಾಘಿಸಿರುವ ಸಾರ್ವಜನಿಕರು ಮುಂದಿನ ದಿನಗಳಲ್ಲಿ ಈ ದಂಧೆಗೆ ಕಡಿವಾಣ ಹಾಕುವಲ್ಲಿ ಮತ್ತಷ್ಟು ಕಾರ್ಯಪ್ರವೃತ್ತರಾಗಬೇಕು ಎಂಬ ಹಂಬಲ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gundlupete: ವಿದ್ಯುತ್ ಕಂಬಕ್ಕೆ ಗುದ್ದಿದ್ದ ಕಾರು: ಸ್ಥಳದಲ್ಲೇ ಇಬ್ಬರು ಸಾವು
Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ
Cabinet Meeting: ಮೊದಲ ಬಾರಿ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ
Kollegala: ದ್ವಿಚಕ್ರ ವಾಹನದಲ್ಲಿ ಗಾಂಜಾ ಸಾಗಾಟ… ಸೊತ್ತು ಸಮೇತ ಆರೋಪಿ ಬಂಧನ
New Year: ಡಿ.31, ಜ. 1ರಂದು ಬಂಡೀಪುರದಲ್ಲಿ ಪ್ರವಾಸಿಗರ ವಾಸ್ತವ್ಯ ನಿರ್ಬಂಧ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.