ಚಾಮರಾಜನಗರ ಜಿಲ್ಲೆಯಲ್ಲಿ 42 ಮಂದಿಗೆ ಸೋಂಕು ದೃಢ: 6 ಮಂದಿ ಮೈಸೂರು ಜಿಲ್ಲೆಯವರು
Team Udayavani, Jul 28, 2020, 7:11 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಚಾಮರಾಜನಗರ: ಜಿಲ್ಲೆಯಲ್ಲಿ ಇಂದು 42 ಕೋವಿಡ್ 19 ಪ್ರಕರಣಗಳು ದೃಢಪಟ್ಟಿವೆ.
ಇಂದು ಒಟ್ಟು 18 ಮಂದಿ ಕೋವಿಡ್ 19 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಇದೀಗ ಜಿಲ್ಲೆಯಲ್ಲಿ 225 ಸಕ್ರಿಯ ಪ್ರಕರಣಗಳಿವೆ ಮತ್ತು ಇಂದು ದಾಖಲಾಗಿರುವ ಪ್ರಕರಣಗಳಲ್ಲಿ 6 ಮಂದಿ ಹೊರ ಜಿಲ್ಲೆಯವರೂ ಇದ್ದಾರೆ.
ಜಿಲ್ಲೆಯಲ್ಲಿ ಇಂದು ಒಟ್ಟು 700 ಮಾದರಿಗಳನ್ನು ಪರೀಕ್ಷೆಗೊಳಪಡಿಸಲಾಗಿತ್ತು.
ಇಂದಿನ ಪ್ರಕರಣವೂ ಸೇರಿ ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 571 ಪ್ರಕರಣಗಳು ದೃಢಪಟ್ಟಿವೆ. 340 ಮಂದಿ ಗುಣಮುಖರಾಗಿದ್ದಾರೆ. 5 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿಗೆ 5 ಮಂದಿ ಮೃತಪಟ್ಟಿದ್ದಾರೆ.
ಇಂದು ಕೊಳ್ಳೇಗಾಲ ತಾಲೂಕಿನ 14, ಯಳಂದೂರು ತಾಲೂಕಿನ 10, ಗುಂಡ್ಲುಪೇಟೆ ತಾಲೂಕಿನ 8, ಚಾಮರಾಜನಗರ ತಾಲೂಕಿನ 4 ಮಂದಿಗೆ ಸೋಂಕು ದೃಢಪಟ್ಟಿದೆ. ಮೈಸೂರು ಜಿಲ್ಲೆಯ ಮೂಗೂರು, ಗಟ್ಟವಾಡಿ, ತಿ. ನರಸೀಪುರ, ಪಡುವಾರಹಳ್ಳಿಯ ತಲಾ ಓರ್ವರಿಗೆ ಹಾಗೂ ನಾಯ್ಡುನಗರದ ಇಬ್ಬರಿಗೆ ಸೋಂಕು ದೃಢಪಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Pro Kabaddi;ಬೆಂಗಳೂರು ಬುಲ್ಸ್ ಜಯಭೇರಿ: ತಮಿಳ್ ತಲೈವಾಸ್‌ಗೆ 32-36 ಅಂಕಗಳ ಸೋಲು
Udupi;ಅಪಾರ್ಟ್ ಮೆಂಟ್ ನಲ್ಲಿ ಪಾರ್ಟಿ ವೇಳೆ ಸಿಲಿಂಡರ್ ಸ್ಫೋ*ಟ: ಅಪಾರ ಹಾನಿ
Kasaragod: ಪಟಾಕಿ ದುರಂತ ಪ್ರಕರಣ; ಸಾವಿನ ಸಂಖ್ಯೆ 4ಕ್ಕೆ ಏರಿಕೆ
By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ
Manipal: ಸಾಲದಿಂದ ಬೇಸತ್ತು ಮಹಿಳೆ ಆತ್ಮಹ*ತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.