ಉಡುಪಿಯಲ್ಲಿ 109 ಮಂದಿಗೆ ಕೋವಿಡ್ ಸೋಂಕು ದೃಢ! ಇಬ್ಬರು ಸಾವು
Team Udayavani, Jul 28, 2020, 8:02 PM IST
ಉಡುಪಿ : ಜಿಲ್ಲೆಯಲ್ಲಿ ಇಂದು 109 ಹೊಸ ಕೋವಿಡ್ ಪ್ರಕರಣಗಳು ದೃಢ ಪಟ್ಟು ಸೋಂಕಿನಿಂದ ಇಬ್ಬರು ಸಾವನ್ನಪಿದ ವರದಿಯಾಗಿವೆ. ಇದರೊಂದಿಗೆ ಉಡುಪಿ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3721ಕ್ಕೆ ಏರಿಕೆಯಾಗಿದೆ.
ಸೋಂಕಿತರಲ್ಲಿ ಉಡುಪಿಯಲ್ಲಿ 36, ಕುಂದಾಪುರ 46, ಕಾರ್ಕಳದಲ್ಲಿ 27 ಪ್ರಕರಣ ಕಂಡುಬಂದಿದೆ. 56 ಮಂದಿ ಪುರುಷರು, 42 ಮಂದಿ ಮಹಿಳೆಯರು, 11 ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡಿದೆ.
ಕುಂದಾಪುರದಿಂದ 34, ಕಾರ್ಕಳದಿಂದ 6, ಟಿಎಂಎ ಪೈ ಆಸ್ಪತ್ರೆಯಿಂದ 15 ಸಹಿತ ಒಟ್ಟು 55 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಮಣಿಪಾಲ ಆಸ್ಪತ್ರೆಯಲ್ಲಿ 60 ವರ್ಷ ಮೇಲ್ಪಟ್ಟ ವಯೋವೃದ್ದರೋರ್ವರು ಕಿಡ್ನಿ, ಜ್ವರ ಲಕ್ಷಣದಿಂದ ಬಳಲುತ್ತಿದ್ದು, ಮಂಗಳವಾರ ಸಾವನ್ನಪ್ಪಿದ್ದಾರೆ. ಇವರ ವೈದ್ಯಕಿಯ ವರದಿ ಪಾಸಿಟಿವ್ ಕಂಡುಬಂದಿತ್ತು. ಸೋಮವಾರ ರಾತ್ರಿ ಅಂಬಲಪಾಡಿಯ 60 ವರ್ಷ ಮೇಲ್ಪಟ್ಟ ಮಹಿಳೆಯೋರ್ವರು ಡಾ| ಟಿಎಂಎ ಪೈ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಇವರು ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದು, ವೈದ್ಯಕೀಯ ವರದಿಯಲ್ಲಿ ಕೊರೊನಾ ಪಾಸಿಟಿವ್ ಕಂಡುಬಂದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Vitla: ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಸಾವು
NZvsENG: ಭರ್ಜರಿ ಕಮ್‌ಬ್ಯಾಕ್ ಮಾಡಿದ ಕೇನ್ ವಿಲಿಯಮ್ಸನ್
Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ
Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ
BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.