ನೇಕಾರರಿಗೆ 2000 ರೂ. ಪ್ರೋತ್ಸಾಹ ಧನ
Team Udayavani, Jul 29, 2020, 1:04 PM IST
ಧಾರವಾಡ: ರಾಜ್ಯದ ಕೈಮಗ್ಗ ಹಾಗೂ ವಿದ್ಯುತ್ ಚಾಲಿತ ಮಗ್ಗಗಳ ನೇಕಾರರ ಬದುಕಿಗೆ ಆರ್ಥಿಕ ನೆರವು ನೀಡಲು ನೇಕಾರ ಸಮ್ಮಾನ್ ಯೋಜನೆಯಡಿ ಪ್ರತಿಯೊಂದು ನೇಕಾರ ಕುಟುಂಬಕ್ಕೆ ವಾರ್ಷಿಕ ತಲಾ 2 ಸಾವಿರ ರೂ. ಪ್ರೋತ್ಸಾಹಧನ ನೀಡಲಾಗುವುದೆಂದು ಕೈಮಗ್ಗ, ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಶ್ರೀಮಂತ ಬಾಳಾಸಾಹೇಬ್ ಪಾಟೀಲ ಹೇಳಿದರು.
ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇನ್ನೂ ಅಲ್ಪಸಂಖ್ಯಾತರನ್ನು ಮುಖ್ಯವಾಹಿನಿಗೆ ತರಲು ವೃತ್ತಿ ಶಿಕ್ಷಣ ನೀಡಲು ಚಿಂತನೆ ನಡೆದಿದೆ. ರಾಜ್ಯದ ಪ್ರತಿಯೊಂದು ಕಂದಾಯ ವಿಭಾಗದಲ್ಲಿ ಒಂದರಂತೆ ನಾಲ್ಕು ಪಾಲಿಟೆಕ್ನಿಕ್ಗಳನ್ನು ಈ ಉದ್ದೇಶಕ್ಕಾಗಿ ಆರಂಭಿಸಲಾಗುವುದು ಎಂದರು.
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಕ್ತಾರ್ ಪಠಾಣ್ ಮಾತನಾಡಿ, ಅಲ್ಪಸಂಖ್ಯಾತರಿಗೆ ವೃತ್ತಿ ಶಿಕ್ಷಣ ನೀಡಬೇಕೆಂಬ ಸಚಿವರ ಕಾಳಜಿ ಅರ್ಥಪೂರ್ಣವಾಗಿದ್ದು, ಅಲ್ಪಸಂಖ್ಯಾತರ ಸಮುದಾಯದ ಸಂಸ್ಥೆಗಳು ಈ ನಿಟ್ಟಿನಲ್ಲಿ ಸಹಕಾರ ನೀಡಬೇಕು ಎಂದರು. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ನಿರ್ದೇಶಕ ಮೆಹಬೂಬ್ ಮಾತನಾಡಿ, ಧಾರವಾಡ ಜಿಲ್ಲೆಯು ಶೈಕ್ಷಣಿಕವಾಗಿ ಮುಂದುವರಿದ ಕೇಂದ್ರವಾಗಿದೆ. ಜಿಲ್ಲೆಯಲ್ಲಿ ಇಲಾಖೆಯ ಇನ್ನಷ್ಟು ಹಾಸ್ಟೇಲುಗಳ ಸ್ಥಾಪನೆ ಅಗತ್ಯವಿದೆ ಎಂಬುದು ಸರ್ಕಾರದ ಗಮನಕ್ಕೆ ಬಂದಿದೆ. ವಸತಿ ಶಾಲೆಗಳಲ್ಲಿ ವ್ಯಾಸಂಗ ಮಾಡಿದ ಹಳೆಯ ವಿದ್ಯಾರ್ಥಿಗಳ ಸಂಘ ರಚಿಸುವುದು ಅಗತ್ಯ ಎಂದರು.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಅಬ್ದುಲ್ ರಷೀದ್ ಮಿರ್ಜಣ್ಣವರ ಮಾತನಾಡಿ, ಜಿಲ್ಲೆಯಲ್ಲಿ ಸುಮಾರು 4.5 ಲಕ್ಷ ಅಲ್ಪಸಂಖ್ಯಾತರ ಸಮುದಾಯದ ಜನಸಂಖ್ಯೆ ಇದೆ, ಜಿಲ್ಲೆಯ ಒಟ್ಟು ಜನ ಸಂಖ್ಯೆಯಲ್ಲಿ ಒಟ್ಟು ಶೇ.24 ಪ್ರಮಾಣವಿದೆ. 4 ಅಲ್ಪಸಂಖ್ಯಾತರ ಮೊರಾರ್ಜಿ ವಸತಿ ಶಾಲೆಗಳು, 3 ಮೌಲಾನಾ ಆಜಾದ್ ಆಂಗ್ಲ ಮಾದರಿ ಶಾಲೆಗಳು, 9 ಮೆಟ್ರಿಕ್ ನಂತರ ಹಾಸ್ಟೆಲ್ಗಳಿವೆ. ಹಾಸ್ಟೆಲ್ ಗಳು ಪೀಠೊಪಕರಣ, ಬಿಸಿ ನೀರು, ಬಯೋ ಮೆಟ್ರಿಕ್, ಸಿಸಿ ಟಿವಿ, ಜಿಮ್ನಾಸ್ಟಿಕ್ಸ್, ಕ್ರೀಡಾ ಸಾಮಗ್ರಿಗಳನ್ನು ಹೊಂದಿವೆ. ನಿಗದಿತ ಪೌಷ್ಟಿಕ ಆಹಾರ ವಿತರಣೆಯಿಂದ ಇತರೆ ಜಿಲ್ಲೆಗಳಿಗೆ ಮಾದರಿಯಾಗಿವೆ. ಜಿಲ್ಲೆಯಲ್ಲಿ ಐದು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಿವೆ ಎಂದರು.
ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಕೆಆರ್ ಐಡಿಸಿಎಲ್ ಇಂಜನಿಯರ್ ಗಳು, ವಕ್ಫ್ ಅಧಿಕಾರಿಗಳು, ಅಲ್ಪಸಂಖ್ಯಾತರ ಸಮುದಾಯದ ಸಂಘಟನೆಗಳ ಪದಾಧಿಕಾರಿಗಳು ಸಭೆಯಲ್ಲಿ ಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ
ಸಿಎಂ ಆಗಿದ್ದವರು ಈ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ
dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್ ನಿಂದ ಹಲ್ಲೆ
Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ
By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್ ವೈ
MUST WATCH
ಹೊಸ ಸೇರ್ಪಡೆ
BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್
Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ
Mangaluru: ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.