ಮೂರಾಜೆ ಕೊಪ್ಪ ಶಾಲಾ ಕಟ್ಟಡ ನಿರ್ಮಾಣಕ್ಕೆ ತೊಡಕು; ಬಿಇಒ ಭೇಟಿ; ಸಮಸ್ಯೆ ಬಗೆಹರಿಸುವ ಭರವಸೆ

Team Udayavani, Jul 29, 2020, 12:57 PM IST

ಮೂರಾಜೆ ಕೊಪ್ಪ ಶಾಲಾ ಕಟ್ಟಡ ನಿರ್ಮಾಣಕ್ಕೆ ತೊಡಕು; ಬಿಇಒ ಭೇಟಿ; ಸಮಸ್ಯೆ ಬಗೆಹರಿಸುವ ಭರವಸೆ

ಕೊಪ್ಪ ಸರಕಾರಿ ಕಿ.ಪ್ರಾ. ಶಾಲೆಗೆ ಬಿಇಒ ಲೋಕೇಶ್‌ ಭೇಟಿ ನೀಡಿದರು.

ಕಡಬ: ಕೋಡಿಂಬಾಳ ಗ್ರಾಮದ ಮೂರಾಜೆ ಕೊಪ್ಪ ಸರಕಾರಿ ಕಿ.ಪ್ರಾ. ಶಾಲೆಯ ಕಟ್ಟಡ ಶಿಥಿಲ ಗೊಂಡಿದ್ದು, ಜಾಗದ ತೊಡಕಿ ನಿಂದಾಗಿ ನೂತನ ಕಟ್ಟಡ ನಿರ್ಮಾಣಕ್ಕೆ ಸರಕಾರದ ಅನುದಾನ ಲಭಿಸದ ಕುರಿತು ಉದಯವಾಣಿ ಸುದಿನ ಜು. 16ರ ಸಂಚಿಕೆಯಲ್ಲಿ “ನೆಲೆ ಕಳೆದುಕೊಂಡ ಮೂರಾಜೆ ಕೊಪ್ಪ ಶಾಲೆ; ಮಕ್ಕಳು ಅತಂತ್ರ’ ಎನ್ನುವ ಸಚಿತ್ರ ವರದಿಗೆ ಅಧಿಕಾರಿಗಳಿಂದ ಪೂರಕ ಸ್ಪಂದನೆ ಲಭಿಸಿದೆ.

ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ, ಕಡಬ ಕಂದಾಯ ಅಧಿಕಾರಿಗಳು ಹಾಗೂ ಅರಣ್ಯ ಇಲಾಖಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಮುಂದಡಿ ಇಟ್ಟಿದ್ದಾರೆ. ಸುಮಾರು 40 ಮಕ್ಕಳು ಕಲಿಯುತ್ತಿರುವ ಮೂರಾಜೆ ಕೊಪ್ಪ ಶಾಲಾ ಕಟ್ಟಡದ ಗೋಡೆ ಹಾಗೂ ಛಾವಣಿಯಲ್ಲಿ ಬಿರುಕು ಕಂಡುಬಂದಿರುವ ಕಾರಣದಿಂದಾಗಿ ಅದನ್ನು ತೆರವುಗೊಳಿಸಲು ಸರಕಾರ ಆದೇಶಿಸಿದೆ. ಆದರೆ ಶಾಲಾ ಕಟ್ಟಡ ಇರುವ ಜಾಗ ಭಾಗಶಃ ಅರಣ್ಯ ಪ್ರದೇಶದಲ್ಲಿದೆ ಎನ್ನುವ ಕಾರಣದಿಂದಾಗಿ ಇದುವರೆಗೆ ಶಾಲೆಯ ಹೆಸರಿನಲ್ಲಿ ಪಹಣಿ ಪತ್ರ ಲಭಿಸಿರಲಿಲ್ಲ. ಅದರಿಂದಾಗಿ ನೂತನ ಕಟ್ಟಡ ನಿರ್ಮಾಣಕ್ಕೆ ಅನುದಾನ ಇರಿಸಲು ತಾಂತ್ರಿಕ ತೊಡಕು ಎದುರಾಗಿದೆ. ಈಗಿನ ಕಟ್ಟಡ ಶಿಥಿಲಗೊಂಡ ಕಾರಣದಿಂದಾಗಿ ಕಳೆದೆರಡು ವರ್ಷಗಳಿಂದ ಪಕ್ಕದ ಭಜನ ಮಂದಿರದ ಜಗಲಿ ಹಾಗೂ ತಾತ್ಕಾಲಿಕ ಶೆಡ್‌ನ‌ಲ್ಲಿ ತರಗತಿ ನಡೆಸಲಾಗುತ್ತಿತ್ತು.

ಕಡಬ ಸಮೂಹ ಸಂಪನ್ಮೂಲ ಕೇಂದ್ರದ ಸಂಪನ್ಮೂಲ ವ್ಯಕ್ತಿ ಕುಮಾರ್‌ ಕೆ.ಜೆ., ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಗುಣವತಿ ದೊಡ್ಡಕೊಪ್ಪ, ಉಪಾ ಧ್ಯಕ್ಷೆ ಬೇಬಿ ಉಪಸ್ಥಿತರಿದ್ದರು.

ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಭೇಟಿ
ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್‌ ಸಿ. ಮಂಗಳವಾರ ಶಾಲೆಗೆ ಭೇಟಿ ನೀಡಿ ಪರಿಶೀಲಿಸಿ ಬಳಿಕ ಕಡಬ ಕಂದಾಯ ಕಚೇರಿಗೆ ಭೇಟಿ ನೀಡಿ ಶಾಲೆಯ ಜಮೀ ನಿನ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಚರ್ಚಿಸಿದರು. ಬಳಿಕ ಪತ್ರಿಕೆ ಯೊಂದಿಗೆ ಮಾತನಾಡಿ, ಈಗಾಗಲೇ ಶಾಲೆಯ ಜಮೀನಿನ ಸಮಸ್ಯೆ ಕುರಿತು ಕ್ಷೇತ್ರದ ಶಾಸಕರೊಂದಿಗೆ ಸಮಾ ಲೋಚನೆ ನಡೆಸಲಾಗಿದೆ. ಸಮಸ್ಯೆ ಬಗೆ ಹರಿಸುವ ನಿಟ್ಟಿನಲ್ಲಿ ಸ್ಪಂದಿಸಿದ್ದಾರೆ. ಕಡಬದ ಕಂದಾಯ ಅಧಿಕಾರಿ ಗಳು ಹಾಗೂ ಅರಣ್ಯ ಇಲಾಖೆಯ ಸಿಬಂದಿ ಭೇಟಿ ನೀಡಿ ಜಮೀನಿನ ಅಳತೆ ನಡೆಸಿ 34 ಸೆಂಟ್ಸ್‌ ಜಾಗವನ್ನು ಶಾಲೆಗಾಗಿ ಗುರುತಿಸಿದ್ದಾರೆ. ಈ ಬಗ್ಗೆ ಅವರು ಸಹಾ ಯಕ ಆಯುಕ್ತರಿಗೆ ವರದಿ ಸಲ್ಲಿಸು ವುದಾಗಿ ತಿಳಿಸಿದ್ದು, ಶಾಲೆ ಪುನರಾರಂಭಗೊಳ್ಳುವ ಮೊದಲು ಜಮೀನಿನ ಸಮಸ್ಯೆ ಬಗೆಹರಿಯುವ ಭರವಸೆ ಹೊಂದಲಾಗಿದೆ ಎಂದರು.

ಟಾಪ್ ನ್ಯೂಸ್

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Accident-logo

Putturu: ಬೈಕ್‌-ಪಿಕಪ್‌ ಢಿಕ್ಕಿ: ಇಬ್ಬರು ಸವಾರರಿಗೆ ಗಂಭೀರ ಗಾಯ

Arrest

Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

death

Puttur: ಎಲೆಕ್ಟ್ರಿಕ್‌ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.