ರಾಜಸ್ಥಾನ ಸ್ಪೀಕರ್ ಸುಪ್ರೀಂ ಕಟಕಟೆ ಏರಿದರೂ ಅನುಕೂಲವಾಗಿದ್ದು ಸಚಿನ್ ಪೈಲಟ್ & ಟೀಂಗೆ!
ಕೊನೆಗೂ ರಾಜಸ್ಥಾನ ಮುಖ್ಯಮಂತ್ರಿ ಗೆಹ್ಲೋಟ್ ಮತ್ತು ರಾಜ್ಯಪಾಲ ಕಲ್ ರಾಜ್ ನಡುವಿನ ಜಟಾಪಟಿಗೆ ತೆರೆ ಬಿದ್ದಿದೆ.
Team Udayavani, Jul 29, 2020, 11:40 PM IST
ನವದೆಹಲಿ: ಸಚಿನ್ ಪೈಲಟ್ ಹಾಗೂ ಕಾಂಗ್ರೆಸ್ ಬಂಡಾಯ ಶಾಸಕರ ವಿರುದ್ಧದ ಅನರ್ಹತೆ ಪ್ರಕ್ರಿಯೆಗೆ ತಡೆ ನೀಡಿದ್ದ ರಾಜಸ್ಥಾನ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಮತ್ತೆ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದ ಸ್ಪೀಕರ್ ಗೆ ಹಿನ್ನಡೆಯಾಗಿದ್ದು, ಇದರಿಂದ ಪೈಲಟ್ ಹಾಗೂ ಟೀಂಗೆ ಅನುಕೂಲವಾಗಿದೆ ಎಂದು ವರದಿ ತಿಳಿಸಿದೆ.
ಸಚಿನ್ ಪೈಲಟ್ ಹಾಗೂ ಇತರ ಬಂಡಾಯ ಶಾಸಕರ ವಿರುದ್ಧ ಕ್ರಮಕ್ಕೆ ಮುಂದಾಗಬಾರದು ಎಂದು ಸುಪ್ರೀಂಕೋರ್ಟ್ ಆದೇಶ ನೀಡುವ ಮೂಲಕ ಹೈಕೋರ್ಟ್ ಆದೇಶವನ್ನು ಎತ್ತಿಹಿಡಿದಿದೆ. ಅಲ್ಲದೇ ಇದರಿಂದ ಪೈಲಟ್ ಮತ್ತು ಬಂಡಾಯ ಶಾಸಕರು ತಾತ್ಕಾಲಿಕ ನಿಟ್ಟುಸಿರು ಬಿಡುವಂತಾಗಿದೆ.
ಏತನ್ಮಧ್ಯೆ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಿಧಾನಸಭೆ ಅಧಿವೇಶನವನ್ನು ಆಗಸ್ಟ್ 14ರಿಂದ ಆರಂಭಿಸುವ ಹೊಸ ಪ್ರಸ್ತಾಪವನ್ನು ರಾಜ್ಯಪಾಲರಿಗೆ ಕಳುಹಿಸಿರುವುದಾಗಿ ಪಿಟಿಐ ವರದಿ ಮಾಡಿದೆ. ಈ ಹಿನ್ನೆಲೆಯಲ್ಲಿ ಕೊನೆಗೂ ರಾಜಸ್ಥಾನ ಮುಖ್ಯಮಂತ್ರಿ ಗೆಹ್ಲೋಟ್ ಮತ್ತು ರಾಜ್ಯಪಾಲ ಕಲ್ ರಾಜ್ ನಡುವಿನ ಜಟಾಪಟಿಗೆ ತೆರೆ ಬಿದ್ದಿದೆ.
ಗೆಹ್ಲೋಟ್ ಅವರ ಹೊಸ ಪ್ರಸ್ತಾವನೆ ಪ್ರಕಾರ ಆಗಸ್ಟ್ 14ರಿಂದ ರಾಜಸ್ಥಾನ ವಿಧಾನಸಭೆ ಅಧಿವೇಶನ ನಡೆಸಲು ರಾಜ್ಯಪಾಲರು ಹಸಿರು ನಿಶಾನೆ ತೋರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.