ದೇಶದಲ್ಲಿ ಒಂದೇ ದಿನ ದಾಖಲೆಯ 52,123 ಜನರಿಗೆ ಸೋಂಕು ದೃಢ: 10 ಲಕ್ಷ ಮಂದಿ ಗುಣಮುಖ
Team Udayavani, Jul 30, 2020, 11:33 AM IST
ನವದೆಹಲಿ: ಭಾರತದಲ್ಲಿ ಮತ್ತೊಮ್ಮೆ ಕೋವಿಡ್ 19 ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಇದೇ ಮೊದಲ ಬಾರಿಗೆ ಕಳೆದ 24 ಗಂಟೆಯಲ್ಲಿ 52,123 ಹೊಸ ಪ್ರಕರಣಗಳು ದಾಖಲಾಗಿದ್ದು 775 ಜನರು ಮೃತಪಟ್ಟಿದ್ದಾರೆ.
ಜು.23ರಂದು 50,904 ಕೇಸ್ ಹಾಗೂ 1,1790 ಸಾವು ದಾಖಲಾಗಿದ್ದು ಈವರೆಗಿನ ಗರಿಷ್ಠ ಎನಿಸಿಕೊಂಡಿತ್ತು. ಆ ಬಳಿಕ ದೈನಂದಿನ ಸೋಂಕಿನ ಪ್ರಮಾಣ ಕೊಂಚ ಕಡಿಮೆಯಾಗಿತ್ತಾದರೂ ಬುಧವಾರ ಮತ್ತೊಮ್ಮೆ 50 ಸಾವಿರ ಗಡಿ ದಾಟಿ ಹೊಸ ದಾಖಲೆ ಸೃಷ್ಟಿಯಾಗಿದೆ.
ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 15,83,792 ಕ್ಕೆ ಜಿಗಿದಿದ್ದು, ಸಕ್ರೀಯ ಪ್ರಕರಣಗಳ ಸಂಖ್ಯೆ 5.28 ಲಕ್ಷದಷ್ಟಿದೆ. ಸುಮಾರು 10.20 ಲಕ್ಷ ಸೋಂಕಿತರು ಗುಣಮುಖರಾಗಿದ್ದಾರೆ. ಒಟ್ಟಾರೆ ಮೃತಪಟ್ಟವರ ಸಂಖ್ಯೆ 34 ಸಾವಿರದ ಗಡಿ ದಾಡಿದೆ.
ಮಹಾರಾಷ್ಟ್ರದಲ್ಲಿ 3.9 ಲಕ್ಷ ಮಂದಿಗೆ ಸೊಂಕು ತಗುಲಿದ್ದು 14,165 ಮಂದಿ ಮೃತಪಟ್ಟಿದ್ದಾರೆ. ತಮಿಳುನಾಡಿನಲ್ಲಿ 2.2 ಲಕ್ಷ ಮಂದಿಗೆ ಸೋಕು ದೃಢವಾಗಿದ್ದು, 3,659 ಜನರು ಬಲಿಯಾಗಿದ್ದಾರೆ. ದೆಹಲಿಯಲ್ಲಿ ಕೂಡ ಸೋಂಕಿನ ಆರ್ಭಟ ಮುಂದುವರೆದಿದ್ದು 1.3 ಲಕ್ಷ ಜನರಿಗೆ ವೈರಾಣು ದೃಢವಾಗಿ 3,881 ಮಂದಿ ಪ್ರಾಣತ್ಯೆಜಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
Supreme Court: ದಿಲ್ಲಿಯ 113 ಚೆಕ್ಪೋಸ್ಟ್ನಲ್ಲಿ ಪೊಲೀಸರನ್ನು ನೇಮಿಸಿ
Delhi Elections: ಆಪ್ನಿಂದ 7 ಉಚಿತ ಯೋಜನೆ ಘೋಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.