ದ.ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಡಾ. ಕೆ.ವಿ. ರಾಜೇಂದ್ರ ಅಧಿಕಾರ ಸ್ವೀಕಾರ
Team Udayavani, Jul 30, 2020, 1:15 PM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಡಾ. ಕೆ.ವಿ. ರಾಜೇಂದ್ರ ಅವರು ಇಂದು ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಅವರು ಪ್ರಭಾರ ಹಸ್ತಾಂತರಿಸಿದರು.
ಜಿಲ್ಲಾಧಿಕಾರಿಗಳಾಗಿ ಡಾ. ಕೆ.ವಿ. ರಾಜೇಂದ್ರ ಅವರು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವರು. 2013ರ ಬ್ಯಾಚ್ ನ ಐಎಎಸ್ ಅಧಿಕಾರಿಯಾಗಿರುವ ಇವರು ಬೆಳಗಾವಿ ಜಿಲ್ಲಾ ಪಂಚಾಯತಿ ಸಿಇಓ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಸದ್ಯ ದಕ್ಷಿಣ ಕನ್ನಡ ಜಿಲ್ಲೆಗೆ ವರ್ಗಾವಣೆಯಾಗಿದ್ದು, ಜಿಲ್ಲೆಯ 130ನೇ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಅಪರ ಜಿಲ್ಲಾಧಿಕಾರಿ ಎಂ.ಜೆ. ರೂಪಾ ಹಾಗೂ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.
ದ.ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಸಿಂಧೂ ರೂಪೇಶ್ ಅವರನ್ನು ಸರ್ಕಾರ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಇ -ಆಡಳಿತ ವಿಭಾಗದ ನಿರ್ದೆಶಕಿಯನ್ನಾಗಿ ನಿಯೋಜಿಸಿ ಬೆಂಗಳೂರಿಗೆ ವರ್ಗಾವಣೆ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
Belthangady: ಕಡೆಗೂ ಬಂತು ಇಂದಿರಾ ಕ್ಯಾಂಟೀನ್
World Test Championship: ಪರ್ತ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ
Beirut ಮೇಲೆ ದಾಳಿ…ಇಸ್ರೇಲ್ ಮೇಲೆ 250 ರಾಕೆಟ್ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.