ಗ್ರಾಮೀಣಾಭಿವೃದಿಗೆ ಜನರ ಸಹಭಾಗಿತ್ವ ಅಗತ್ಯ

ಪ್ರಾಕೃತಿಕ-ಮಾನವ ಸಂಪನ್ಮೂಲ ಬಳಕೆ ಪರಿಣಾಮಕಾರಿಯಾಗಿರಲಿ: ಸಚಿವ ಈಶ್ವರಪ್ಪ

Team Udayavani, Jul 31, 2020, 6:36 AM IST

ಗ್ರಾಮೀಣಾಭಿವೃದಿಗೆ ಜನರ ಸಹಭಾಗಿತ್ವ ಅಗತ್ಯ

ಗದಗ: ಸಚಿವ ಕೆ.ಎಸ್‌. ಈಶ್ವರಪ್ಪ ಗ್ರಾವಿವಿ ಪ್ರಗತಿ ಪರಿಶೀಲನೆ ನಡೆಸಿದರು

ಗದಗ: ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಯಲ್ಲಿ ಸ್ಥಳೀಯ ಜನರ ಸಹಭಾಗಿತ್ವ ಅಗತ್ಯ. ಅಭಿವೃದ್ಧಿ ಪರ ಚಿಂತನೆಗಳಿಗೆ ತಳ ಹಂತದಿಂದಲೇ ವಿಕೇಂದ್ರೀಕೃತ ಯೋಜನಾ ವರದಿ ಸಿದ್ಧಪಡಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌. ಈಶ್ವರಪ್ಪ ಅಧಿಕಾರಿಗಳಿಗೆ ಸೂಚಿಸಿದರು. ನಗರದ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ವಿಶ್ವವಿದ್ಯಾಲಯದ
ಸಭಾಂಗಣದಲ್ಲಿ ನಡೆದ ಜಿಲ್ಲೆಯ ಸಮಗ್ರ ಅಭಿವೃದ್ಧಿ ಕರಡು ಯೋಜನೆ ಕುರಿತ ಸಭೆಯಲ್ಲಿ ಅವರು ಮಾತನಾಡಿದರು.

ಸುಸ್ಥಿರ ಗ್ರಾಮೀಣ ಅಭಿವೃದ್ಧಿ ಗುರಿ ಗಮನದಲ್ಲಿಟ್ಟುಕೊಂಡು ಗ್ರಾಮೀಣ ಪ್ರದೇಶಗಳ ಜನರ ಜೀವನೋಪಾಯ, ಕೌಶಾಲ್ಯಾಭಿವೃದ್ಧಿ ಹಾಗೂ ಬಡತನ ನಿರ್ಮೂಲನೆಗಾಗಿ ಕ್ರಿಯಾ ಯೋಜನೆ
ಸಿದ್ಧಪಡಿಸಬೇಕು. ಸ್ಥಳೀಯ ಪ್ರಾಕೃತಿಕ ಹಾಗೂ ಮಾನವ ಸಂಪನ್ಮೂಲ ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು. ಪ್ರತಿಯೊಂದು ಯೋಜನೆ ಅನುಷ್ಠಾನದಲ್ಲಿ ಸ್ಥಳೀಯ ಜನರನ್ನು
ತೊಡಗಿಸಿಕೊಳ್ಳಬೇಕು ಎಂದು ಸೂಚಿಸಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅತೀಕ್‌ ಮಾತನಾಡಿ, ರಾಜ್ಯದ ಕೆಲವೇ ಜಿಲ್ಲೆಯಲ್ಲಿ ವಿಕೇಂದ್ರೀಕರಣ ಯೋಜನಾ ವರದಿ ಸಿದ್ಧಪಡಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಇದನ್ನು ಪ್ರಾರಂಭಿಸಲಾಗುವುದು. ನಗರಸಭೆ-ಪುರಸಭೆ ವ್ಯಾಪ್ತಿಯ ನಗರ ಪ್ರದೇಶಗಳಲ್ಲೂ ವಾರ್ಡ್‌ಸಭೆ ನಡೆಸಲು ಕ್ರಮ ಕೈಗೊಳ್ಳಲಾಗುವುದು. ಕೋವಿಡ್‌ -19 ಸೋಂಕಿನಿಂದಾಗಿ ಅಭಿವೃದ್ಧಿ ಕಾರ್ಯದಲ್ಲಿ ತಡೆಯಾಗಿದ್ದರೂ, ಕೋವಿಡ್‌ ನಿಯಂತ್ರಣಕ್ಕಾಗಿ ಗ್ರಾಪಂ ವ್ಯಾಪ್ತಿಯ ಕಾರ್ಯಪಡೆ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದರು. ಸಂಸದ ಶಿವಕುಮಾರ್‌ ಉದಾಸಿ ಮಾತನಾಡಿ, ಸ್ಥಳೀಯ ಸಮಸ್ಯೆ ಸರಿದೂಗಿಸಲು ಹೆಚ್ಚು ಆದ್ಯತೆ ನೀಡಬೇಕು. ಜನತೆ ಅವಶ್ಯಕತೆಗಳಿಗೆ ಅನುಗುಣವಾಗಿ ಯೋಜನೆ ಸಿದ್ಧಪಡಿಬೇಕು ಎಂದರು.

ಕರ್ನಾಟಕ ಪಂಚಾಯತ್‌ ರಾಜ್‌ ಪರಿಷತ್‌ ಕಾರ್ಯಾಧ್ಯಕ್ಷ ಸಿ. ನಾರಾಯಣಸ್ವಾಮಿ, ಉಪಾಧ್ಯಕ್ಷ ಡಿ.ಆರ್‌. ಪಾಟೀಲ್‌ ಮಾತನಾಡಿ, ಸಭೆಗಳಲ್ಲಿ ಚರ್ಚಿತ ವಿಷಯಗಳು ಕಾರ್ಯರೂಪಕ್ಕೆ ಬರಬೇಕು. ಅಲ್ಲದೇ, ಇಂತಹ ಸಭೆಗಳಲ್ಲಿ ಸಾರ್ವಜನಿಕರಿಗೂ  ಅವಕಾಶ ಕಲ್ಪಿಸಿ ಕೊಡಬೇಕು. ವಾರ್ಡ್‌ ಮತ್ತು ಗ್ರಾಮಸಭೆಗಳನ್ನು ಪ್ರತಿ ಆರು ತಿಂಗಳಿಗೊಮ್ಮೆ ಕಡ್ಡಾಯವಾಗಿ ನಡೆಸಬೇಕು ಎಂದರು.

ಈ ವೇಳೆ ಜಿಪಂ ಅಧ್ಯಕ್ಷ ರಾಜುಗೌಡ ಕೆಂಚನಗೌಡ್ರ, ಶಾಸಕ ರಾಮಣ್ಣ ಲಮಾಣಿ, ಜಿಪಂ ಉಪಾಧ್ಯಕ್ಷೆ ಶೋಭಾ ಮೇಟಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಆಯುಕ್ತರಾದ
ಪ್ರಿಯಾಂಕಾ ಮೇರಿ ಪ್ರಾನ್ಸಿಸ್‌, ಎಸ್‌ಐಆರ್‌ಡಿ ಅಧಿಕಾರಿ ಗಣೇಶ ಪ್ರಸಾದ್‌, ಸಿಇಒ ಡಾ|ಆನಂದ್‌ ಕೆ., ಜಿಪಂ ಉಪ ಕಾರ್ಯದರ್ಶಿ ಕಲ್ಲೇಶ್‌, ವಿಪ ಮಾಜಿ ಸದಸ್ಯ ಎಸ್‌.ವಿ. ಸಂಕನೂರ, ಬಿಜೆಪಿ ಮುಖಂಡ ಅನಿಲ್‌ ಮೆಣಸಿನಕಾಯಿ ಇದ್ದರು.

ಟಾಪ್ ನ್ಯೂಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

Gadag-Sp–Money

Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

3-gadaga

Gadaga: ನರಗುಂದ ಬಳಿ ಭೀಕರ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸ್ಥಳದಲ್ಲೇ ಸಾವು

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.