LIC: ವಾರ್ಷಿಕ ಆದಾಯದಲ್ಲಿ ಶೇ.9.83 ಹೆಚ್ಚಳ


Team Udayavani, Aug 1, 2020, 6:49 AM IST

LIC: ವಾರ್ಷಿಕ ಆದಾಯದಲ್ಲಿ ಶೇ.9.83 ಹೆಚ್ಚಳ

ಮುಂಬಯಿ: ಸರಕಾರಿ ಸ್ವಾಮ್ಯದ ಭಾರತೀಯ ಜೀವ ವಿಮಾ ನಿಗಮವು (ಎಲ್‌ಐಸಿ) 2019-20ನೇ ಸಾಲಿನಲ್ಲಿ ಒಟ್ಟಾರೆ 6,15,882.94 ಕೋ. ರೂ. ಆದಾಯವನ್ನು ಗಳಿಸಿದೆ.

ಕಳೆದ ಆರ್ಥಿಕ ವರ್ಷದಲ್ಲಿ 5,60,784.39 ಕೋ. ರೂ. ಆದಾಯ ಗಳಿಸಿದ್ದ ನಿಗಮ ಈ ಬಾರಿ ಶೇ. 9.83ರಷ್ಟು ಹೆಚ್ಚಿನ ಆದಾಯವನ್ನು ಗಳಿಸಿದೆ.

ಈ ವರ್ಷದ ಮಾರ್ಚ್‌ ಅಂತ್ಯಕ್ಕೆ ಮುಕ್ತಾಯಗೊಂಡ 2019-20ನೇ ಸಾಲಿನ ವಾರ್ಷಿಕ ಲೆಕ್ಕಪತ್ರವನ್ನು ನಿಗಮವು ಬಿಡುಗಡೆ ಮಾಡಿದೆ.

2018-19ನೇ ಸಾಲಿನಲ್ಲಿ ಎಲ್‌ಐಸಿಯ ಒಟ್ಟಾರೆ ಆಸ್ತಿಯು 31,11,847.28 ಕೋ. ರೂ. ಗಳಾಗಿದ್ದರೆ ಈ ಬಾರಿ ಅದು 31,96,214.81 ಕೋ. ರೂ.ಗಳಿಗೆ ಏರಿಕೆಯಾಗಿದ್ದು, ಶೇ. 2.71ರಷ್ಟು ಬೆಳವಣಿಗೆಯನ್ನು ಕಂಡಿದೆ.

ಮೊದಲ ವರ್ಷದ ಪ್ರೀಮಿಯಂ ಸಂಗ್ರಹದಲ್ಲಿ ಏರಿಕೆ
2019-20ನೇ ಸಾಲಿನಲ್ಲಿ ಎಲ್‌ಐಸಿಯು 1,77,977.07 ಕೋ. ರೂ.ಗಳನ್ನು ಮೊದಲ ವರ್ಷದ ಪ್ರೀಮಿಯಂ ಆಗಿ ಸಂಗ್ರಹಿಸಿ, ಶೇ. 25.17ರಷ್ಟು ಹೆಚ್ಚಳ ದಾಖಲಿಸಿದೆ. ಇದೇ ಮೊದಲ ಬಾರಿಗೆ ಒಟ್ಟಾರೆ 1,26,696.21 ಕೋ. ರೂ.ಗಳ ಹೊಸ ವ್ಯವಹಾರ ಪ್ರೀಮಿಯಂ ಆದಾಯವನ್ನು ಸಂಗ್ರಹಿಸಿದೆ. ಇದು 2018-19ನೇ ಸಾಲಿಗೆ ಹೋಲಿಸಿದಲ್ಲಿ ಶೇ. 39.46ರಷ್ಟು ಹೆಚ್ಚಳವಾಗಿದೆ.

2020ರ ಮಾರ್ಚ್‌ ಅಂತ್ಯಕ್ಕೆ 3,79,062.56 ಕೋ. ರೂ. ಗಳಷ್ಟು ಒಟ್ಟು ಪ್ರೀಮಿಯಂ ಆದಾಯವನ್ನು ಕಲೆಹಾಕುವ ಮೂಲಕ ಶೇ. 12.42ರಷ್ಟು ವೃದ್ಧಿಯನ್ನು ಕಂಡಿದೆ. ಒಟ್ಟು 2,54,222.27 ಕೋ.ರೂ. ಮೊತ್ತವನ್ನು ವಿಮಾ ಪಾಲಿಸಿದಾರರಿಗೆ ವಾಪಸ್‌ ನೀಡಲಾಗಿದ್ದು, ಹಿಂದಿನ ಸಾಲಿಗೆ ಹೋಲಿಸಿದಲ್ಲಿ ಶೇ. 1.31ರಷ್ಟು ಹೆಚ್ಚಳ ದಾಖಲಾಗಿದೆ.

ಸರಳ ವ್ಯವಸ್ಥೆಗಳ ಪರಿಚಯ
ಎಲ್‌ಐಸಿಯು ತನ್ನ ಗ್ರಾಹಕರಿಗೆ ಹಲವಾರು ಉತ್ತಮ ವಿಮಾ ಸೇವೆಗಳನ್ನು ಒದಗಿಸುತ್ತಿದ್ದು, ವಿಮಾ ಪಾಲಿಸಿಗಳ ಪ್ರೀಮಿಯಂ ಪಾವತಿಯಲ್ಲಿಯೂ ಅತಿ ಸರಳ ವ್ಯವಸ್ಥೆಗಳನ್ನು ಪರಿಚಯಿಸಿದೆ. ಅಷ್ಟೇ ಅಲ್ಲದೆ ಕೋವಿಡ್ 19 ಸೋಂಕಿನ ಹಿನ್ನೆಲೆಯಲ್ಲಿ ಡಿಜಿಟಲ್‌ ವ್ಯವಸ್ಥೆ ಮೂಲಕ ಪ್ರೀಮಿಯಂ ಸಂಗ್ರಹಕ್ಕೆ ಹೆಚ್ಚಿನ ಆದ್ಯತೆ ನೀಡಿದೆ. ಕಳೆದ ವರ್ಷ ಎಲ್‌ಐಸಿ ಪಾಲಿಸಿಗಳ ಪ್ರೀಮಿಯಂ ಪಾವತಿಗೆ ಡಿಜಿಟಲ್‌ ವ್ಯವಸ್ಥೆಯನ್ನು ಬಳಸಿದ ಗ್ರಾಹಕರ ಸಂಖ್ಯೆಯಲ್ಲಿ ಶೇ.36ರಷ್ಟು ಏರಿಕೆಯಾಗಿದೆ.

ಯಾವುದೇ ಪಾಲಿಸಿದಾರರು ಕೋವಿಡ್‌ಗೆ ತುತ್ತಾದ ಸಂದರ್ಭದಲ್ಲಿ ಆ ಗ್ರಾಹಕನಿಗೆ ನಿಗಮದಿಂದ ಪಾವತಿಯಾಗಬೇಕಿರುವ ವಿಮಾ ಮೊತ್ತವನ್ನು ಕ್ಲಪ್ತ ಸಮಯದಲ್ಲಿ ಮರುಪಾವತಿಸಲು ಕ್ರಮ ಕೈಗೊಳ್ಳಲಾಗಿದೆ. ಅದರಂತೆ ಈವರೆಗೆ 561 ಪಾಲಿಸಿದಾರರಿಗೆ 26.74 ಕೋ. ರೂ. ವಿಮಾ ಮೊತ್ತವನ್ನು ಪಾವತಿಸಲಾಗಿದೆ.

ಇಷ್ಟು ಮಾತ್ರವಲ್ಲದೆ ಕೆಲವೊಂದು ತುರ್ತು ಸಂದರ್ಭಗಳಲ್ಲಿ ವಿಮಾ ಮೊತ್ತದ ಮರುಪಾವತಿ ವ್ಯವಸ್ಥೆಯ ನಿಯಮಾವಳಿಗಳಲ್ಲಿ ಸಡಿಲಿಕೆಗಳನ್ನೂ ಮಾಡಲಾಗಿದೆ. ದೇಶದ ವಿಮಾ ಕಂಪೆನಿಗಳಲ್ಲಿ ಅಗ್ರ ಸ್ಥಾನದಲ್ಲಿರುವ ಎಲ್‌ಐಸಿಯು ದೇಶದ ವಿಮಾ ಪಾಲಿಸಿಗಳ ಮಾರುಕಟ್ಟೆಯಲ್ಲಿ ಶೇ. 75.90ರಷ್ಟು ಪಾಲನ್ನು ಹೊಂದಿದ್ದರೆ ಮೊದಲ ವರ್ಷದ ಪ್ರೀಮಿಯಂನಲ್ಲಿ ಶೇ. 68.74ರಷ್ಟು ಪಾಲನ್ನು ಹೊಂದಿದೆ.

ಟಾಪ್ ನ್ಯೂಸ್

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sensex-down

Share Market: ಸೆನ್ಸೆಕ್ಸ್‌ ಸತತ ಪತನ: 2 ತಿಂಗಳ ಕನಿಷ್ಠ ಕುಸಿತ ದಾಖಲಿಸಿದ ಷೇರುಪೇಟೆ

ಪ್ರಯಾಣಿಕರ ಗಮನಕ್ಕೆ- ರೈಲು ಪ್ರಯಾಣದ Advance Ticket ಬುಕ್ಕಿಂಗ್‌ ನಿಯಮದಲ್ಲಿ ಬದಲಾವಣೆ…

ಪ್ರಯಾಣಿಕರ ಗಮನಕ್ಕೆ- ರೈಲು ಪ್ರಯಾಣದ Advance Ticket ಬುಕ್ಕಿಂಗ್‌ ನಿಯಮದಲ್ಲಿ ಬದಲಾವಣೆ…

1-muskkk

Tesla; ಈ ರೋಬೋ ಮಾತಾಡುತ್ತೆ, ಮಕ್ಕಳನ್ನೂ ಆರೈಕೆ ಮಾಡುತ್ತೆ!

adani (2)

Dollar Earnings: ಭಾರತದಲ್ಲಿ ಗೌತಮ್‌ ಅದಾನಿ ನಂ.1, ಮೌಲ್ಯ 9.62 ಲಕ್ಷ ಕೋಟಿ

UPI: ವಹಿವಾಟು ಮಿತಿ ಏರಿಕೆಗೆ ಆರ್‌ಬಿಐ ನಿರ್ಧಾರ.. ಮಿತಿ 2,000ರೂ.ನಿಂದ 5,000ರೂ.ಗೆ ಏರಿಕೆ

UPI: ವಹಿವಾಟು ಮಿತಿ ಏರಿಕೆಗೆ ಆರ್‌ಬಿಐ ನಿರ್ಧಾರ.. ಮಿತಿ 2,000ರೂ.ನಿಂದ 5,000ರೂ.ಗೆ ಏರಿಕೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

Bagheera movie song out

Bagheera ರುಧಿರ ಗಾನ…; ಶ್ರೀಮುರಳಿ ಸಿನಿಮಾದ ಹಾಡು ಬಂತು

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

5-ptr

Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು

simha roopini kannada movie

Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್‌ ರಾಜ್‌ ನಿರ್ದೇಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.