ಒಂದು ಜಿಲ್ಲೆ ಒಂದು ಬೆಳೆಯಡಿ ಮಾವು ಆಯ್ಕೆ: ನಿತೇಶ
Team Udayavani, Aug 1, 2020, 11:41 AM IST
ಧಾರವಾಡ: ಆತ್ಮ ನಿರ್ಭರ ಅಭಿಯಾನದ ಭಾಗವಾಗಿ ಸೂಕ್ಷ್ಮ ಮತ್ತು ಸಣ್ಣ ಆಹಾರ ಸಂಸ್ಕರಣ ಉದ್ದಿಮೆಗಳನ್ನು ಪೊÅàತ್ಸಾಹಿಸಲು ರಾಜ್ಯ ಸರಕಾರದ ಸಹಯೋಗದಲ್ಲಿ ಕೇಂದ್ರ ಸರಕಾರ ಆರಂಭಿಸಿರುವ ಪಿಎಂಎಫ್‌ಎಂಎಫ್ ಯೋಜನೆಗೆ ಜಿಲ್ಲೆಯಿಂದ ಒಂದು ಜಿಲ್ಲೆ ಒಂದು ಬೆಳೆ ಕಾರ್ಯಕ್ರಮದಡಿ ಮಾವು ಬೆಳೆ ಆಯ್ಕೆ ಮಾಡಲಾಗಿದೆ ಎಂದು ಆಯ್ಕೆ ಸಮಿತಿಯ ಅಧ್ಯಕ್ಷರಾದ ಡಿಸಿ ನಿತೇಶ ಪಾಟೀಲ ಹೇಳಿದರು.
ನಗರದ ಡಿಸಿ ಕಚೇರಿಯ ನೂತನ ಸಭಾಂಗಣದಲ್ಲಿ ಜರುಗಿದ ಆತ್ಮ ನಿರ್ಭರ ಅಭಿಯಾನದ ಪಿಎಂಎಫ್ ಎಂಎಫ್ (Scheme for formalization of micro food Processing Enterprises) ಕಾರ್ಯಕ್ರಮದ ಒಂದು ಜಿಲ್ಲೆ ಒಂದು ಉತ್ಪನ್ನ ಆಯ್ಕೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಎರಡನೇಯ ಬೆಳೆ ಶಿಫಾರಸಿಗಾಗಿ ಮೆಣಸಿನಕಾಯಿ ಸೇರಿಸಲು ಸಮಿತಿ ಉತ್ಸಾಹ ತೋರಿದೆ ಎಂದರು.
ಅಸಂಘಟಿತ ವಲಯದಲ್ಲಿರುವ ಸೂಕ್ಷ್ಮ ಮತ್ತು ಸಣ್ಣ ಆಹಾರ ಸಂಸ್ಕರಣ ಉದ್ದಿಮೆಗಳನ್ನು ಪ್ರೋತ್ಸಾಹಿಸಿ, ಅವುಗಳ ಸ್ಪರ್ಧಾತ್ಮಕತೆ ಹೆಚ್ಚಿಸುವುದು, ಅವುಗಳನ್ನು ಸಂಘಟಿತ ವಲಯಕ್ಕೆ ಒಳಪಡಿಸುವುದು ಕಾರ್ಯಕ್ರಮದ ಉದ್ದೇಶವಾಗಿದೆ. ರೈತ ಉತ್ಪಾದಕ ಸಂಸ್ಥೆಗಳು, ಸ್ವಸಹಾಯ ಸಂಘಗಳು ಮತ್ತು ಉತ್ಪಾದಕ ಸಹಕಾರಿ ಸಂಘಗಳನ್ನು ಆಹಾರ ಸಂಸ್ಕರಣ ಉದ್ದಿಮೆಗಳೊಂದಿಗೆ ಬೆಸೆಯುವುದು ಪಿಎಂಎಫ್‌ಎಂಎಫ್ ಯೋಜನೆಯ ಪ್ರಮುಖ ಉದ್ದೇಶ ಎಂದರು.
ಸಮಿತಿ ಉಪಾಧ್ಯಕ್ಷ ಜಿಪಂ ಸಿಇಒ ಡಾ| ಬಿ.ಸಿ.ಸತೀಶ ಮಾತನಾಡಿ, ಜಿಲ್ಲೆಯ ಮಾವು ಬೆಳೆಯೊಂದಿಗೆ ಈರುಳ್ಳಿ, ಹೆಸರು, ಮೆಣಸಿನಕಾಯಿ, ಜೋಳ, ಮೆಕ್ಕೆಜೋಳ ಬೆಳೆಯುತ್ತಾರೆ. ಆದರೆ ಮಾವು ಉತ್ಪನ್ನವೂ ಕಾಲ ಮಿತಿಯಲ್ಲಿ ಬಳಕೆಯಾಗಬೇಕು ಎಂದರು.
ಕೃಷಿ ಇಲಾಖೆ ಜಂಟಿ ನಿರ್ದೇಶಕ ರಾಜಶೇಖರ.ಐ.ಬಿ. ಪ್ರಾಸ್ತಾವಿಕ ಮಾತನಾಡಿದರು. ಸಮಿತಿ ಸದಸ್ಯರಾದ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಮೋಹನ ಭರಮಕ್ಕನವರ, ತೋಟಗಾರಿಕೆ ಇಲಾಖೆ ಪ್ರಭಾರಿ ಉಪನಿರ್ದೇಶಕ ಶಶಿಕಾಂತ ಕೋಟಿಮನಿ ಸೇರಿದಂತೆ ರೈತ ಉತ್ಪಾದಕ ಸಂಸ್ಥೆಗಳ ಪ್ರತಿನಿಧಿ ಗಳು ಮಾತನಾಡಿದರು. ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಕೆ. ಈಶ್ವರನಾಥ, ನರ್ಬಾಡ್ ಜಿಲ್ಲಾ ವ್ಯವಸ್ಥಾಪಕ ಮಯೂರ ಕಾಂಬಳೆ, ಕೃಷಿ ಇಲಾಖೆ ಜಂಟಿ ನಿರ್ದೇಶಕರ ಕಚೇರಿಯ ಕೃಷಿ ಅಧಿಕಾರಿ ಮಂಜುನಾಥ ಹೂಗಾರ, ರೈತ ಉತ್ಪಾದಕ ಸಂಸ್ಥೆಗಳ ಮುಖ್ಯಸ್ಥ ಅಶೋಕ ದೊಡವಾಡ, ಪರಮೇಶ್ವರ, ಚನ್ನಬಸಯ್ಯ ಹುಬ್ಬಳ್ಳಿ, ಬಸವರಾಜ ತಾಮ್ರಗುಂಡ, ನಾರಾಯಣ ಯಲಿಗಾರ ಸೇರಿದಂತೆ ನೀರಾವರಿ, ಲೋಕೋಪಯೋಗಿ, ಪಶುಸಂಗೋಪನೆ, ಹೆಸ್ಕಾಂ, ಸಾರಿಗೆ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.
ಜಿಲ್ಲೆಯಲ್ಲಿ ಸುಮಾರು 8734 ಹೆಕ್ಟೆರ್ ಪ್ರದೇಶದಲ್ಲಿ ಮಾವು ಬೆಳೆ ಇದ್ದು, ಮುಖ್ಯವಾಗಿ ಆಪೂಸ್, ಕೇಸರ, ಪೈರಿ, ಮಲ್ಲಿಕಾ ತಳಿಗಳನ್ನು ಬೆಳೆಯಲಾಗುತ್ತದೆ. ಪ್ರತಿ ವರ್ಷ ಸುಮಾರು 77,458 ಮೆಟ್ರಿಕ್ ಟನ್ ಮಾವು ಉತ್ಪಾದನೆ ಇದೆ. ಮಾವು ಬೆಳೆಗಾರರು, ಮಾರಾಟಗಾರರು, ಸಂಸ್ಕರಿಸಿ ಮಾವಿನ ಉಪ ಉತ್ಪನ್ನಗಳನ್ನು ತಯಾರಿಸುವರನ್ನು ಒಂದು ಗುಂಪು ಮಾಡಿ ಅವರ ಕಾರ್ಯಗಳಿಗೆ ಪ್ರೋತ್ಸಾಹ ನೀಡುವುದು. ಈ ಮೂಲಕ ಸ್ಥಳಿಯವಾಗಿ ಹೆಚ್ಚು ಉದ್ಯೋಗ ಸೃಷ್ಟಿಸಿ, ವೈಜ್ಞಾನಿಕವಾಗಿ ಸಂಸ್ಕರಣೆ, ಪ್ಯಾಕ್ ಮಾಡುವುದು, ರಫ್ತು, ಮಾರಾಟಕ್ಕೆ ಉತ್ತೇಜಿಸುವುದು ನಮ್ಮ ಆದ್ಯತೆ. –ನಿತೇಶ ಪಾಟೀಲ, ಡಿಸಿ, ಧಾರವಾಡ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್‌ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.