ಜಿಲ್ಲೆಗೊಂದು ಇಎಸ್‌ಐ ಆಸ್ಪತ್ರೆ: ಹೆಬ್ಬಾರ


Team Udayavani, Aug 1, 2020, 12:00 PM IST

ಜಿಲ್ಲೆಗೊಂದು ಇಎಸ್‌ಐ ಆಸ್ಪತ್ರೆ: ಹೆಬ್ಬಾರ

ಬಾಗಲಕೋಟೆ: ಪ್ರತಿ ಜಿಲ್ಲೆಗೊಂದು ಇಎಸ್‌ಐ ಆಸ್ಪತ್ರೆ ತೆರೆಯಲಾಗುತ್ತಿದ್ದು, ಅದಕ್ಕೆ ಬೇಕಾದ ಜಾಗವನ್ನು ನೀಡಿದಲ್ಲಿ ಜಮೀನು ಖರೀದಿ ಹಾಗೂ ಕಟ್ಟಡ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಸಕ್ಕರೆ ಹಾಗೂ ಕಾರ್ಮಿಕ ಸಚಿವ ಶಿವರಾಮ ಹೆಬ್ಟಾರ ಹೇಳಿದರು.

ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿಂದು ಜರುಗಿದ ಕಾರ್ಮಿಕ ಮತ್ತು ಸಕ್ಕರೆ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಬಾಗಲಕೋಟೆಯ ವಿದ್ಯಾಗಿರಿಯ ಬೃಂದಾವನ ಸೆಕ್ಟರ್‌ನಲ್ಲಿ ಬಾಡಿಗೆ ಕಟ್ಟಡದಲ್ಲಿ ಕರ್ನಾಟಕ ರಾಜ್ಯ ವಿಮಾ ಆಸ್ಪತ್ರೆ ನಡೆಯುತ್ತಿದ್ದು, ಸ್ವಂತ ಕಟ್ಟಡಕ್ಕೆ ಜಾಗ ಗುರುತಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು. ಅದಕ್ಕೆ ಬೇಕಾಗುವ ಅನುದಾನ ಬಿಡುಗಡೆ ಮಾಡಲಾಗುವುದು ಎಂದರು.

ಕೋವಿಡ್‌ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ಕಾರ್ಮಿಕರಿಗೆ ಸರಕಾರದ ಯೋಜನೆಗಳು ತಲುಪಿಸುವ ಕಾರ್ಯದಲ್ಲಿ ಅಧಿಕಾರಿಗಳು ಇಚ್ಛಾಶಕ್ತಿಯಿಂದ ಕಾರ್ಯನಿರ್ವಹಿಸಬೇಕು. ಲಾಕ್‌ ಡೌನ್‌ದಿಂದಾಗಿ ಕಾರ್ಮಿಕರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದು, ಅವರ ಕುಟುಂಬ ಪೋಷಣೆಗೆ ಸರಕಾರ ಕಟ್ಟಡ ಕಾರ್ಮಿಕರು, ಅಗಸರು, ಕ್ಷೌರಿಕರಿಗೆ ಒಂದು ಬಾರಿ 5 ಸಾವಿರ ರೂ.ಗಳ ಪರಿಹಾರ ನೀಡಲು ನಿರ್ಧರಿಸಿದ್ದು, ಈ ಸೌಲಭ್ಯ ತಲುಪಿಸಬೇಕು ಎಂದು ಸೂಚಿಸಿದರು.

ಬಾಗಲಕೋಟೆಯಲ್ಲಿ ಶೇ. 92ರಷ್ಟು ಈ ಸೌಲಭ್ಯ ಪಡೆದುಕೊಂಡಿದ್ದಾರೆ. ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕ್ಷೌರಿಕ ಕೆಲಸ ಮಾಡುತ್ತಿರುವರನ್ನು ಗುರುತಿಸಿ ಆಯಾ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ದೃಢೀಕರಣ ಪತ್ರ ನೀಡಬೇಕು. ಆನ್‌ನಲ್ಲಿ ಅರ್ಜಿಗಳು ಅಪ್ಲೋಡ್‌ ಆಗದ ಕಾರಣ ಅರ್ಜಿ ಸಲ್ಲಿಸುವ ಅವಧಿಯನ್ನು ಆ. 15ರವರೆಗೆ ವಿಸ್ತರಿಸಲಾಗಿದೆ. ಅಗಸರು ಮತ್ತು ಕ್ಷೌರಿಕರಿಗೆ 5 ಸಾವಿರ ಪರಿಹಾರ ನೀಡಲು ಸರಕಾರ 165 ಕೋಟಿ ರೂ.ಗಳ ಅನುದಾನವನ್ನು ಬಿಡುಗಡೆ ಮಾಡಿದೆ. ಈಗಾಗಲೇ ರಾಜ್ಯದಲ್ಲಿ 48,500 ಜನ ಫಲಾನುಭವಿಗಳಿಗೆ ಕೋಟ್ಯಂತರ ರೂ.ಗಳ ಪ್ರೋತ್ಸಾಹಧನ ನೀಡಲಾಗಿದೆ ಎಂದರು.

ಜಿಪಂ ಅಧ್ಯಕ್ಷೆ ಬಾಯಕ್ಕ ಮೇಟಿ, ಸಂಸದ ಪಿ.ಸಿ.ಗದ್ದಿಗೌಡರ, ಶಾಸಕ ವೀರಣ್ಣ ಚರಂತಿಮಠ, ವಿಧಾನ ಪರಿಷತ್‌ ಸದಸ್ಯ ಹನಮಂತ ನಿರಾಣಿ, ಜಿಲ್ಲಾಧಿಕಾರಿ ಕ್ಯಾಪ್ಟನ್‌ ಡಾ|ಕೆ.ರಾಜೇಂದ್ರ, ಜಿಪಂ ಸಿಇಒ ಟಿ.ಭೂಬಾಲನ, ಎಸ್ಪಿ ಲೋಕೇಶ ಜಗಲಾಸರ, ವೆಂಕಟೇಶ ಎಸ್‌.ಉಪಸ್ಥಿತರಿದ್ದರು.

ಟಾಪ್ ನ್ಯೂಸ್

peethabailu-1

Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ

Egg-Students

Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!

Naxal-encounter-Vikram-1

Naxal Activity: ಮಲೆನಾಡಿನವರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದ ವಿಕ್ರಂ ಗೌಡ

Arrest

Ullala: ತ್ರಿವಳಿ ತಲಾಖ್‌ ಪ್ರಕರಣ: ಆರೋಪಿಯ ಸೆರೆ

women-suside

CID Investigate: ಬೋವಿ ಹಗರಣದ ಆರೋಪಿ ಮಹಿಳಾ ಉದ್ಯಮಿ ಆತ್ಮಹ*ತ್ಯೆ

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Kota-Shrinivas

Udupi: ಟವರ್‌ ನಿರ್ಮಾಣ ಕಾಮಗಾರಿ ವಿಳಂಬವಾದರೆ ಕ್ರಿಮಿನಲ್‌ ದಾವೆ: ಸಂಸದ ಕೋಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

4-mudhol

Mudhol: ಟ್ರ್ಯಾಕ್ಟರ್ ಹಾಗೂ ಬೊಲೆರೋ ಮುಖಾಮುಖಿ ಡಿಕ್ಕಿ

1-bagalkote

Bagalkote: ಹೇರ್ ಡ್ರೈಯರ್ ಸ್ಪೋಟಗೊಂಡು ಮಹಿಳೆಯ ಎರಡು ಕೈ ತುಂಡು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

peethabailu-1

Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ

Egg-Students

Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!

Naxal-encounter-Vikram-1

Naxal Activity: ಮಲೆನಾಡಿನವರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದ ವಿಕ್ರಂ ಗೌಡ

Arrest

Ullala: ತ್ರಿವಳಿ ತಲಾಖ್‌ ಪ್ರಕರಣ: ಆರೋಪಿಯ ಸೆರೆ

women-suside

CID Investigate: ಬೋವಿ ಹಗರಣದ ಆರೋಪಿ ಮಹಿಳಾ ಉದ್ಯಮಿ ಆತ್ಮಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.