ವಿಶಾಖಪಟ್ಟಣದ ಶಿಪ್ ಯಾರ್ಡ್ ನಲ್ಲಿ ಕುಸಿದ ಕ್ರೇನ್: ಕನಿಷ್ಠ 11 ಮಂದಿ ಸಾವು
Team Udayavani, Aug 1, 2020, 4:04 PM IST
ವಿಶಾಖಪಟ್ಟಣ: ಆಂಧ್ರಪ್ರದೇಶದ ವಿಶಾಖಪಟ್ಟಣದ ಹಿಂದೂಸ್ಥಾನ್ ಶಿಪ್ ಯಾರ್ಡ್ ನಲ್ಲಿ ಕ್ರೇನ್ ಕುಸಿದು ಭಾರಿ ದುರ್ಘಟನೆ ನಡೆದಿದ್ದು, 11 ಮಂದಿ ಸಾವನ್ನಪ್ಪಿದ್ದಾರೆ.
ಘಟನೆಯಲ್ಲಿ ಇನ್ನೂ ಹಲವರು ಗಾಯಗೊಂಡಿದ್ದು, ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳದಲ್ಲಿ ಇನ್ನೂ ಹಲವರು ಸಿಲುಕಿರುವ ಸಾಧ್ಯತೆಯಿದ್ದು, ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ.
ವಿಶಾಖಪಟ್ಟಣದ ಬಂದರಿನ ಹಿಂದೂಸ್ಥಾನ್ ಶಿಪ್ ಯಾರ್ಡ್ ನಲ್ಲಿ ನೂತನ ಕ್ರೇನ್ ಅನ್ನು ನಿಲ್ಲಿಸುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಈ ಕ್ರೇನ್ 70 ಟನ್ ತೂಕವಿದೆ. ಕ್ರೇನ್ ಕುಸಿದು ಬಿದ್ದ ಕಾರಣ ಹತ್ತಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ.
ಘಟನೆಯಲ್ಲಿ ಸಾವನ್ನಪ್ಪಿದವರಲ್ಲಿ ನಾಲ್ಕು ಮಂದಿ ಹಿಂದೂಸ್ಥಾನ್ ಶಿಪ್ ಯಾರ್ಡ್ ಲಿಮಿಟೆಡ್ ಕಂಪನಿಗೆ ಸೇರಿದವರಾಗಿದ್ದು, ಉಳಿದವರು ಗುತ್ತಿಗೆ ಸಂಸ್ಥೆಯ ನೌಕರರಾಗಿದ್ದಾರೆ ಎಂದು ಸ್ಥಳೀಯ ಜಿಲ್ಲಾಧಿಕಾರಿ ವಿನಯ್ ಚಂದ್ ಹೇಳಿಕೆ ನೀಡಿದ್ದಾರೆ.
#WATCH A crane collapses at Hindustan Shipyard Limited in Visakhapatnam, Andhra Pradesh. 10 dead and 1 injured in the incident, says DCP Suresh Babu. pic.twitter.com/BOuz1PdJu3
— ANI (@ANI) August 1, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.