ಶುಲ್ಕ ಪಾವತಿಸದ್ಕಕ್ಕೆ ಆನ್ಲೈನ್ ತರಗತಿ ಕಟ್
Team Udayavani, Aug 2, 2020, 8:45 AM IST
ಬೆಂಗಳೂರು: ಬೋಧನಾ (ಟ್ಯೂಷನ್) ಶುಲ್ಕ ಪಾವತಿಸಲಿಲ್ಲ ಎಂಬ ಕಾರಣಕ್ಕೆ ನಗರದ ಖಾಸಗಿ ಶಾಲೆಯೊಂದು ಕೆಲವು ವಿದ್ಯಾರ್ಥಿ ಗಳಿಗೆ ಆನ್‌ಲೈನ್ ತರಗತಿ ನಿರಾಕರಿಸಿದೆ.
ರಾಜ್ಯ ಸರ್ಕಾರವು ಆನ್‌ಲೈನ್ ತರಗತಿಗಳಿಗೆ ಶುಲ್ಕ ವಿಧಿಸುವಂತಿಲ್ಲ ಎಂಬ ಸೂಚನೆ ನೀಡಿರುವುದರಿಂದ ಆನ್ ಲೈನ್ ಶುಲ್ಕದ ಬದಲಾಗಿ ಬೋಧನಾ (ಟ್ಯೂಷನ್) ಶುಲ್ಕ ಪಡೆಯಲಾಗುತ್ತಿದೆ. ಜೂನ್ ತಿಂಗಳಿನಿಂದಲೇ ಆನ್‌ಲೈನ್ ತರಗತಿಗಳನ್ನು ಆರಂಭಿಸಿದ್ದು, ವಾರ್ಷಿಕ ಬೋಧನಾ ಶುಲ್ಕವನ್ನು ನಾಲ್ಕು ಕಂತುಗಳಲ್ಲಿ ಪಾವತಿಸುವಂತೆ ಸೂಚನೆ ನೀಡಲಾಗಿದೆ. ಇಲ್ಲಿಯವರೆಗೂ ಯಾರು ಶುಲ್ಕ ಪಾವತಿಸಿಲ್ಲ ಅಂತಹ ವಿದ್ಯಾರ್ಥಿಗಳಿಗೆ ಆನ್‌ಲೈನ್ ತರಗತಿಗಳನ್ನು ಕಡಿತ ಮಾಡಲಾಗಿದೆ. ಇದರಿಂದ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗುತ್ತಿದೆ. ಒಂದು ವಾರದಿಂದ ಹಲವು ಮಕ್ಕಳಿಗೆ ಆನ್ ಲೈನ್ ತರಗತಿಗಳನ್ನು ಸ್ಥಗಿತಗೊಳಿಸಿದೆ ಎಂದು ಪಾಲಕ, ಪೋಷಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪ್ರತಿ ವರ್ಷದಂತೆ ಈ ವರ್ಷವೂ ಟ್ಯೂಷನ್ ಶುಲ್ಕ ಪಡೆಯಲಾಗುತ್ತಿದೆ. ಹಿಂದಿನ ವರ್ಷಗಳಲ್ಲಿ ಎರಡು ಕಂತುಗಳಲ್ಲಿ ಶುಲ್ಕ ಪಾವತಿಸಲು ಅವಕಾಶ ನೀಡಲಾಗಿತ್ತು. ಈ ಬಾರಿ ಕೋವಿಡ್ ಇರುವುದರಿಂದ ನಾಲ್ಕು ಕಂತುಗಳಲ್ಲಿ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ. ಇಲ್ಲಿಯವರೆಗೂ ಯಾರು ಶುಲ್ಕ ಪಾವತಿಸಿಲ್ಲ ಅಂತಹ ವಿದ್ಯಾರ್ಥಿಗಳ ಆನ್ ಲೈನ್ ತರಗತಿಗಳನ್ನು ಕಡಿತ ಮಾಡಲಾಗಿದೆ ಎಂದು ಆಡಳಿತ ಮಂಡಳಿಯ ಮೂಲಗಳು ತಿಳಿಸಿವೆ.
ಈ ಹಿಂದೆ ರಾಜ್ಯ ಸರ್ಕಾರ ಖಾಸಗಿ ಮತ್ತು ಸರ್ಕಾರಿ ಶಾಲೆ ಸೇರಿದಂತೆ ಆನ್‌ಲೈನ್ ಶಾಲೆಗಳನ್ನು ಪ್ರಾರಂಭಿಸಬಹುದು ಎಂದು ಅನುಮತಿ ನೀಡಿತ್ತು. ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಸರ್ಕಾರದಿಂದಲೇ ಪಾಠ ಮಾಡುವ ವ್ಯವಸ್ಥೆ ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
America:ಭಾರತೀಯ ಮೂಲದ ವೈದ್ಯರಿಗೆ 17 ಕೋಟಿ ರೂ. ದಂಡ
UGC; ಪದವಿ ಕಲಿಕೆ ಅವಧಿ ನಿರ್ಧಾರ ಆಯ್ಕೆ ಶೀಘ್ರ: ಚೇರ್ಮನ್ ಹೇಳಿದ್ದೇನು?
Bangladesh; ಚಿನ್ಮಯಿ ಕೃಷ್ಣದಾಸ್‌ಗೂ ನಮಗೂ ಸಂಬಂಧವಿಲ್ಲ: ಇಸ್ಕಾನ್ ಸ್ಪಷ್ಟನೆ
Bullet train ದೇಶದಲ್ಲಿಯೇ ನಿರ್ಮಾಣ: ಸಂಸತ್ತಿಗೆ ಕೇಂದ್ರ ಮಾಹಿತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.