ರೈಲು ಯೋಜನೆಗೆ ಹೋರಾಟ ಅಗತ್ಯ


Team Udayavani, Aug 2, 2020, 11:03 AM IST

ರೈಲು ಯೋಜನೆಗೆ ಹೋರಾಟ ಅಗತ್ಯ

ಗಜೇಂದ್ರಗಡ: ಈ ಭಾಗಕ್ಕೆ ರೈಲು ಯೋಜನೆ ತರುವ ನಿಟ್ಟಿನಲ್ಲಿ ಸಂಸದರು, ಸಚಿವರು, ಹಾಲಿ ಮತ್ತು ಮಾಜಿ ಶಾಸಕರ ಒಳಗೊಂಡ ಪಕ್ಷಾತೀತ ಹೋರಾಟ ಸಮಿತಿ ರಚನೆ ಮಾಡುವ ಮೂಲಕ ಮೂಲ ಗದಗ-ವಾಡಿ ರೈಲು ಯೋಜನೆ ತರುವಲ್ಲಿ ಹೋರಾಟ ಹಮ್ಮಿಕೊಳ್ಳಲು ಸನ್ನದ್ಧರಾಗಬೇಕಿದೆ ಎಂದು ಪಟ್ಟಣದ ಮೈಸೂರ ಮಠದಲ್ಲಿ ಶನಿವಾರ ನಡೆದ ಸಭೆಯಲ್ಲಿ ನಿರ್ಧರಿಸಲಾಯಿತು.

ಗದಗ ಜಿಲ್ಲೆಯ ಕಣಗಿನಹಾಳ-ಕೋಟುಮಚಗಿ- ನರೇಗಲ್ಲ-ನಿಡಗುಂದಿ-ಗಜೇಂದ್ರಗಡ-ಹನುಮಸಾ ಗರ-ಇಲಕಲ್ಲ ಮಾರ್ಗವಾಗಿ ಹಾದು ಹೋಗಬೇಕಿದ್ದ ಗದಗ-ವಾಡಿ ರೈಲು ಮಾರ್ಗವನ್ನು ಬದಲಾಯಿಸಿ, ಕೊಪ್ಪಳ ಜಿಲ್ಲೆಯ ತಳಕಲ್‌ ಮೂಲಕ ವಾಡಿಗೆ ಸೇರ್ಪಡೆ ಮಾಡಿರುವುದು, ಈ ಭಾಗಕ್ಕೆ ಬಹುದೊಡ್ಡ ಅನ್ಯಾಯವಾಗಿದೆ. 1910ರ ಬ್ರಿಟಿಷರ ಕಾಲದಲ್ಲೇ ಜಿಲ್ಲೆಯ 5 ಪ್ರದೇಶಗಳಲ್ಲಿ ಹಾದು ಹೋಗುವ ಯೋಜನೆ ರೂಪಿಸಲಾಗಿತ್ತು. ಆದರೀಗ ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ದೂರಿದರು.

ಈ ಭಾಗದ ಜನತೆಯ ಬಹುದಿನದ ಬೇಡಿಕೆಯಾದ ಗದಗ-ವಾಡಿ ರೈಲು ಯೋಜನೆಗಾಗಿ ಪಕ್ಷಾತೀತ ಹೋರಾಟಕ್ಕೆ ಅಣಿಯಾಗುವ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ಹಾವೇರಿ ಸಂಸದ ಶಿವಕುಮಾರ ಉದಾಸಿ, ಬಾಗಲಕೋಟೆ ಸಂಸದ ಪಿ.ಸಿ. ಗದ್ದಿಗೌಡರ ಹಾಗೂ ಜಿಲ್ಲೆಯ ಸಚಿವರು, ಹಾಲಿ ಮತ್ತು ಮಾಜಿ ಶಾಸಕರ ಒಳಗೊಂಡು ಮಹತ್ವ ಸಭೆ ಕರೆಯುವ ಮೂಲಕ ಪಕ್ಷಾತೀತ ಹೋರಾಟ ಸಮಿತಿ ರಚನೆ ಮಾಡಲಾಗುವುದು ಜೊತೆಗೆ ಇನ್ನೇರೆಡು ದಿನಗಳಲ್ಲಿ ತಾಲೂಕು ಸಮಿತಿ ರಚನೆ ಮಾಡುವ ಕುರಿತು ಸಭೆಯಲ್ಲಿ ಪಾಲ್ಗೊಂಡ ಎಲ್ಲರೂ ಒಮ್ಮತದ ನಿರ್ಣಯ ಕೈಗೊಂಡರು.  ಗದಗ ಮತ್ತು ಬಾಗಲಕೋಟೆ ಜಿಲ್ಲೆಯ ಜನತೆಯ ಆಶಾಕಿರಣವಾಗಿರುವ ರೈಲು ಯೋಜನೆಯಲ್ಲಿ ಯಾವುದೇ ರಾಜಕೀಯ, ಕೆಸರೆರಚಾಟ, ಪರಸ್ಪರ ಟೀಕೆಗಳನ್ನು ಮಾಡುವುದು ಕೈಬಿಡಬೇಕಿದೆ. ಇದು ನಮ್ಮ ಅಸ್ಮಿತೆಯಾಗಿದ್ದು, ನಾವೆಲ್ಲರೂ ಒಗ್ಗೂಡಿ, ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಬೇಕಿದೆ ಎಂದರು.

ಬೆಟಗೇರಿ ರೇಲ್ವೆ ಹೋರಾಟ ಸಮಿತಿ ಅಧ್ಯಕ್ಷ ಗಣೇಶಸಿಂಗ್‌ ಬ್ಯಾಳಿ, ಕಾಂತಿಲಾಲ್‌ ಜೈನ್‌, ಮನೋಹರ ಬಡಿಗೇರ, ಅಶೋಕ ಬಾಗಮಾರ, ಡಾ| ಶಿವರಾಮ್‌ ದಾನಿ, ವೀರಣ್ಣ ಸೊನ್ನದ, ವೀರಣ್ಣ ಶೆಟ್ಟರ, ಶಶಿಧರ ಹೂಗಾರ, ಎಂ.ಎಸ್‌. ಹಡಪದ, ಬಿ.ಎಂ. ಸಜ್ಜನರ, ಎಚ್‌.ಎಸ್‌. ಸೋಂಪೂರ, ಅಶೋಕ ವನ್ನಾಲ, ರಾಜು ಸಾಂಗ್ಲಿಕಾರ, ರವೀಂದ್ರ ಹೊನವಾಡ, ಬಸವರಾಜ ಬಂಕದ, ಅಶೋಕ ಬೇವಿನಕಟ್ಟಿ, ಹನುಮಂತ ಅಬ್ಬಿಗೇರಿ, ವೆಂಕಟೇಶ ಮುದಗಲ್ಲ, ಮಾರುತಿ ಚಿಟಗಿ, ಬಿ.ಎಸ್‌. ಶೀಲವಂತರ, ಉಮೇಶ ರಾಠೊಡ, ಅಂಬರೀಶ ಬಳಿಗೇರ, ಪ್ರಭು ಚವಡಿ, ಬಾಲು ರಾಠೊಡ, ಮಾರುತಿ ಚಿಟಗಿ ಸೇರಿ ಇತರರಿದ್ದರು.

ಟಾಪ್ ನ್ಯೂಸ್

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

police

Gangolli: ಕ್ರಿಮಿನಲ್‌ ಹಿನ್ನೆಲೆ: ಮೂವರ ಮೇಲೆ ಪ್ರಕರಣ ದಾಖಲು

theft-temple

Koteshwara: ಶೋ ರೂಮ್‌ನಲ್ಲಿ ಕಳವಿಗೆ ಯತ್ನ

Accident-logo

Sulya: ನಿಲ್ಲಿಸಿದ್ದ ಕಾರಿಗೆ ಬಸ್‌ ಢಿಕ್ಕಿ; ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.