ಗುಣಮುಖ ಕಮಕನೂರ ಆಸ್ಪತ್ರೆಯಿಂದ ಬಿಡುಗಡೆ
Team Udayavani, Aug 2, 2020, 11:51 AM IST
ಕಲಬುರಗಿ: ಕೋವಿಡ್ ಸೋಂಕಿತರಾಗಿ ಇಲ್ಲಿನ ಬಸವೇಶ್ವರ ಆಸ್ಪತ್ರೆಗೆ ದಾಖಲಾಗಿದ್ದ ವಿಧಾನ ಪರಿಷತ್ ಮಾಜಿ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಗುಣಮುಖರಾಗಿ ಶನಿವಾರ ಆಸ್ಪತ್ರೆಯಿಂದ ಬಿಡುಗಡೆಯಾದರು.
ಉತ್ತಮ ವೈದ್ಯಕೀಯ ಸೇವೆಯಿಂದ ವಾರದಲ್ಲೇ ದಿನದಲ್ಲಿ ಗುಣಮುಖರಾಗಿದ್ದರಿಂದ ಕಮಕನೂರ ಅವರನ್ನು ಆಸ್ಪತ್ರೆಯ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ಸನ್ಮಾನಿಸಿ, ಹೂಗುಚ್ಚ ನೀಡಿ ಚಪ್ಪಾಳೆಯೊಂದಿಗೆ ಬೀಳ್ಕೊಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ತಿಪ್ಪಣ್ಣಪ್ಪ ಕಮಕನೂರ, ಬಸವೇಶ್ವರ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿಗಳಿಂದ ಹಿಡಿದು ಎಲ್ಲ ಆರೋಗ್ಯ ಸಿಬ್ಬಂದಿ ವರ್ಗದವರು ಹೆಚ್ಚಿನ ಮುತುವರ್ಜಿ ವಹಿಸಿದ್ದರಿಂದ ವಾರದಲ್ಲೇ ಗುಣಮುಖನಾಗಿದ್ದೇನೆ. ಇದಕ್ಕೆ ಬಸವೇಶ್ವರ ಆಸ್ಪತ್ರೆಗೆ ತಾವು ಸದಾ ಚಿರಋಣಿ ಎಂದು ಹೇಳಿದರು.
ಕೋವಿಡ್ ಪಾಸಿಟಿವ್ ಬಂದ ನಂತರ ಭಯ ಆಗಿತ್ತು. ಆದರೆ ಎಚ್‌ಕೆಇ ಸಂಸ್ಥೆಯ ಅಧ್ಯಕ್ಷ ಡಾ| ಭೀಮಾಶಂಕರ ಬಿಲಗುಂದಿ, ಡೀನ್ ಡಾ| ಉಮೇಶ್ಚಂದ್ರ, ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರೆಲ್ಲರೂ ಹೆಚ್ಚಿನ ನಿಗಾ ವಹಿಸಿದರಲ್ಲದೇ ಸಕಾಲಕ್ಕೆ ಔಷಧಿ, ಊಟ ನೀಡಿ ಶುಶ್ರೂಷೆ ಮಾಡಿದ ಪರಿಣಾಮ ಬೇಗ ಗುಣಮುಖರಾಗಿ ಹೊರ ಬರುವಂತಾಯಿತು ಎಂದು ಕಮಕನೂರ ವಿವರಣೆ ನೀಡಿದರು.
ಈ ಸಂದರ್ಭದಲ್ಲಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ| ಮಲ್ಲಿಕಾರ್ಜುನ ತೆಗನೂರ, ಸಹಾಯಕ ವೈದ್ಯಕೀಯ ಅಧೀಕ್ಷಕ ಡಾ| ಎಂ.ಆರ್. ಪೂಜಾರಿ, ಬಸವೇಶ್ವರ ಆಸ್ಪತ್ರೆಯ ಕೋವಿಡ್ ನೋಡಲ್ ಅಧಿಕಾರಿ ಡಾ| ಭರತ ಕೋಣಿನ್, ಚಿಕಿತ್ಸಾ ತಜ್ಞರಾದ ಡಾ| ಕಿರಣ ದೇಶಮುಖ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ಹೊಸ ಸೇರ್ಪಡೆ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Earthquake…! ರೋಡ್ ರೋಲರ್ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.