ಆನ್‌ಲೈನ್‌ ಪರೀಕ್ಷೆಗೆ ಮುಂದಾದ ಕೃಷಿ ವಿವಿ

Team Udayavani, Aug 2, 2020, 2:07 PM IST

ಆನ್‌ಲೈನ್‌ ಪರೀಕ್ಷೆಗೆ ಮುಂದಾದ ಕೃಷಿ ವಿವಿ

ರಾಯಚೂರು : ಕೋವಿಡ್  ವೈರಸ್‌ ಭೀತಿ ಮಧ್ಯೆಯೂ ಸರ್ಕಾರ ಪಿಯುಸಿ, ಎಸ್ಸೆಸ್ಸೆಲ್ಸಿ,ಸಿಇಟಿ ಪರೀಕ್ಷೆಗಳನ್ನು ನಡೆಸಿದರೆ, ರಾಜ್ಯದ ಕೃಷಿ ವಿಶ್ವವಿದ್ಯಾಲಯಗಳು ಮಾತ್ರ ಆನ್‌ ಲೈನ್‌ ಪರೀಕ್ಷೆ ನಡೆಸುವ ವಿನೂತನ ಪ್ರಯತ್ನಕ್ಕೆ ಮುಂದಾಗಿವೆ.

ಕೃಷಿ ವಿವಿಗಳ ಹೊಸ ಶೈಕ್ಷಣಿಕ ವರ್ಷಾರಂಭಕ್ಕೆ ದಿನಗಣನೆ ಶುರುವಾಗುತ್ತಿದೆ. ಆದರೆ, ಹಿಂದಿನ ತರಗತಿಗಳ ಒಂದು ಸೆಮಿಸ್ಟರ್‌ ಪರೀಕ್ಷೆ ಇನ್ನೂ ಬಾಕಿ ಇದೆ. ಅದನ್ನು ಹೇಗೆ ಮಾಡಬೇಕು ಎಂಬ ಕುರಿತು ಇಂಡಿಯನ್‌ ಕೌನ್ಸಿಲ್‌ ಆಫ್‌ ಅಗ್ರಿಕಲ್ಚರ್‌ ರಿಸರ್ಚ್‌ ಎಲ್ಲ ಕೃಷಿ ವಿವಿಗಳ ಜತೆ ಸಮಾಲೋಚನೆ ನಡೆಸಿದ್ದು, ಆನ್‌ ಲೈನ್‌ ಪರೀಕ್ಷೆ ನಡೆಸುವ ನಿಲುವಿಗೆ ಬಂದಿದೆ. ರಾಯಚೂರು ಕೃಷಿ ವಿಶ್ವವಿದ್ಯಾಲಯವು ಈಗಾಗಲೇ ಇದಕ್ಕೆ ಸಂಬಂಧಿ ಸಿ ಸಾಫ್ಟ್‌ವೇರ್‌ ಖರೀದಿಸಿದೆ. ಆ.14ರಿಂದ ಪರೀಕ್ಷೆ ಆರಂಭಿಸುತ್ತಿದ್ದು, ಆ.31ರೊಳಗಾಗಿ ಪರೀಕ್ಷೆ ಮುಗಿಸುವ ಉದ್ದೇಶ ಹೊಂದಲಾಗಿದೆ.

ಹೇಗಿರಲಿದೆ ಪರೀಕ್ಷೆ?: ಈ ಹಿಂದೆ ಕೂಡ ಸಾಕಷ್ಟು ಕಡೆ ಇಂಥ ಪರೀಕ್ಷೆಗಳು ನಡೆದಿದ್ದರೂ ಕೃಷಿ ವಿಶ್ವವಿದ್ಯಾಲಯದ ಮಟ್ಟದಲ್ಲಿ ಇದೇ ಮೊದಲ ಬಾರಿಗೆ ಕೈಗೊಳ್ಳಲಾಗುತ್ತಿದೆ. ಗುಣಮಟ್ಟದ ಸಾಫ್ಟ್‌ವೇರ್‌ನ ಐದು ಲೈಸೆನ್ಸ್‌ ಖರೀದಿಸಿ ವಿವಿ ಅಧಿಧೀನಕ್ಕೆ ಬರುವ ಕಾಲೇಜುಗಳಿಗೆ ಹಂಚಿಕೆ ಮಾಡಲಾಗಿದೆ. ಪ್ರಥಮ, ದ್ವಿತೀಯ, ತೃತೀಯ ವರ್ಷ ಹಾಗೂ ಇಂಜಿನಿಯಂರಿಂಗ್‌, ತಾಂತ್ರಿಕ ವಿಭಾಗ ಸೇರಿದಂತೆ 1200 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಒಂದೂವರೆ ಗಂಟೆಯ ಪ್ರಶ್ನೆಪತ್ರಿಕೆ ಇದಾಗಿರಲಿದ್ದು, 50 ಅಂಕಗಳಿಗೆ ಪರೀಕ್ಷೆ ನಡೆಯಲಿದೆ. ಅದರಲ್ಲಿ 35 ಅಂಕಗಳು ಪಠ್ಯಕ್ಕೆ ಸಂಬಂಧಿಸಿದ್ದರೆ, ಐದು ಅಂಕಗಳನ್ನು ಹಾಜರಾತಿ ಆಧಾರದಡಿ ನೀಡಲಾಗುವುದು. 10 ಅಂಕಗಳಿಗೆ ಒಂದು ವಿಷಯ ಮಂಡನೆ ಮಾಡಬೇಕಿದೆ. ಇನ್ನು ಬಾಕಿ 50 ಅಂಕಗಳನ್ನು ಹಿಂದಿನ ಸೆಮಿಸ್ಟರ್‌ಗಳಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ನೀಡಲಾಗುತ್ತಿದೆ.

ಆನ್‌ಲೈನ್‌ ಪರೀಕ್ಷಾ ತರಬೇತಿ: ಪರೀಕ್ಷೆ ನಡೆಯುವಾಗ ಯಾವುದೇ ತಾಂತ್ರಿಕ ಸಮಸ್ಯೆ ಎದುರಾಗದಿರಲಿ ಎಂಬ ಕಾರಣಕ್ಕೆ ಈಗಾಗಲೇ ಎಲ್ಲ ವಿದ್ಯಾರ್ಥಿಗಳಿಗೂ ಮಾಹಿತಿ ನೀಡಿದ್ದು, ತರಬೇತಿ ನೀಡಲಾಗುತ್ತಿದೆ. ಪ್ರಾತ್ಯಕ್ಷಿಕೆ ಮೂಲಕ ತಿಳಿ ಹೇಳಲಾಗುತ್ತಿದೆ. ಎಲ್ಲ ವಿಭಾಗದ ಉಪನ್ಯಾಸಕರಿಗೂ ಪರೀಕ್ಷೆಯನ್ನು ಹೇಗೆ ನಿರ್ವಹಿಸಬೇಕು ಎಂಬ ತರಬೇತಿ ನೀಡಲಾಗಿದೆ. ವಿದ್ಯಾರ್ಥಿಗಳು ತಾವು ಇದ್ದಲ್ಲಿಂದಲೇ ಪರೀಕ್ಷೆ ಬರೆಯಬೇಕು. ಪರೀಕ್ಷೆ ಮುಗಿದ ಬಳಿಕ ಉತ್ತರ ಪತ್ರಿಕೆಗಳನ್ನು ಸ್ಕ್ಯಾನ್‌ ಮಾಡಿ ಮೇಲ್‌ ಮಾಡಬೇಕು. ಅದಕ್ಕಾಗಿ 10 ನಿಮಿಷ ಕಾಲಾವಕಾಶ ನೀಡಲಾಗಿದೆ. ಬಳಿಕ ಉತ್ತರ ಪತ್ರಿಕೆಗಳನ್ನು ತಮ್ಮ ವಿಭಾಗಗಳಿಗೆ ಸಲ್ಲಿಸಬೇಕಿದೆ.

ಮೊದಲ ಹಂತದಲ್ಲಿ ರಾಯಚೂರು ವಿವಿ :  ದೇಶದಲ್ಲಿ 71 ಕೃಷಿ ವಿಶ್ವವಿದ್ಯಾಲಯಗಳಿದ್ದು, ಐಸಿಎಆರ್‌ ಮೊದಲ ಹಂತದಲ್ಲಿ 20 ವಿವಿಗಳನ್ನು ಆಯ್ಕೆ ಮಾಡಿದೆ. ಅದರಲ್ಲಿ ರಾಯಚೂರು ವಿವಿ ಕೂಡ ಸೇರಿದೆ. ಮಕ್ಕಳ ಭವಿಷ್ಯದ ದೃಷ್ಟಿಯಿಂದ ಪರೀಕ್ಷೆ ನಡೆಸುವುದು ಸೂಕ್ತ ಎನ್ನುವ ಅಭಿಪ್ರಾಯ ವ್ಯಕ್ತಪಡಿಸಿವೆ. ಇನ್ನು ಸೆಪ್ಟೆಂಬರ್‌ನಲ್ಲಿ ಹೊಸ ಶೈಕ್ಷಣಿಕ ವರ್ಷಾರಂಭವಾಗಲಿದ್ದು, ಕೊರೊನಾ ಸಮಸ್ಯೆ ಇನ್ನೂ ಇದ್ದಲ್ಲಿ ಆನ್‌ಲೈನ್‌ ತರಗತಿ ನಡೆಸಲು ವಿವಿ ಸಿದ್ಧವಾಗಿದೆ ಎನ್ನುತ್ತಾರೆ ವಿವಿ ಸಿಬ್ಬಂದಿ.

ಸುಖಾಸುಮ್ಮನೆ ಒಂದಷ್ಟು ಅಂಕ ನೀಡಿ ತೇರ್ಗಡೆ ಮಾಡುವುದಕ್ಕಿಂತ ಪರೀಕ್ಷೆ ನಡೆಸುವುದು ಸೂಕ್ತ ಎಂಬ ಕಾರಣಕ್ಕೆ ಆನ್‌ಲೈನ್‌ ಪರೀಕ್ಷೆ ಕೈಗೊಳ್ಳಲಾಗಿದೆ. ಅದರ ಸಾಧಕ-ಬಾಧಕಗಳ ಬಗ್ಗೆ ಅಧ್ಯಯನ ಮಾಡಲಾಗಿದೆ. ವಿದ್ಯಾರ್ಥಿಗಳಿಗೂ ನೆಟ್‌ವರ್ಕ್‌ ಸಮಸ್ಯೆ ಇರದ ಕಡೆ ಪರೀಕ್ಷೆ ಬರೆಯುವಂತೆ ತಿಳಿಸಲಾಗಿದೆ. – ಎಂ.ಜಿ.ಪಾಟೀಲ್‌, ಕುಲಸಚಿವ, ಕೃಷಿ ವಿವಿ ರಾಯಚೂರು.

-ಸಿದ್ದಯ್ಯಸ್ವಾಮಿ ಕುಕುನೂರು

ಟಾಪ್ ನ್ಯೂಸ್

Boxing legend Mike Tyson hints at retirement

Mike Tyson: ವಿದಾಯದ ಸುಳಿವು ನೀಡಿದ ಬಾಕ್ಸಿಂಗ್‌ ದಿಗ್ಗಜ ಮೈಕ್‌ ಟೈಸನ್

Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು

Tilak Varma broke Virat Kohli’s T20I record

Team India: ವಿರಾಟ್‌ ಕೊಹ್ಲಿ ದಾಖಲೆ ಮುರಿದ ತಿಲಕ್‌ ವರ್ಮಾ

Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ

Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

Darshan’s Krantiveera Sangolli Rayanna movie to re release

Re Release: ದರ್ಶನ್‌ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ

shami

BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್:‌ ಆಸೀಸ್‌ ಸರಣಿಗೆ ತಂಡ ಸೇರಲಿದ್ದಾರೆ ಶಮಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

5-raichur

Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು

Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ

Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ

Raichruru-RTPS

Raichuru: ಆರ್‌ಟಿಪಿಎಸ್ ಬೂದಿ ಹೊಂಡದ ನೀರು ಕೃಷ್ಣಾ ನದಿಗೆ; ಜನರಲ್ಲಿ ಆತಂಕ

11-dolly

Dhananjay: ಸಿಕ್ಕ ಸಿಕ್ಕಲೆಲ್ಲ ಕೇಳ್ತಿದ್ರಲ್ಲ; ಅದಕ್ಕೆ ಅನೌನ್ಸ್ ಮಾಡಿದೆ: ಡಾಲಿ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Boxing legend Mike Tyson hints at retirement

Mike Tyson: ವಿದಾಯದ ಸುಳಿವು ನೀಡಿದ ಬಾಕ್ಸಿಂಗ್‌ ದಿಗ್ಗಜ ಮೈಕ್‌ ಟೈಸನ್

Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು

Tilak Varma broke Virat Kohli’s T20I record

Team India: ವಿರಾಟ್‌ ಕೊಹ್ಲಿ ದಾಖಲೆ ಮುರಿದ ತಿಲಕ್‌ ವರ್ಮಾ

Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ

Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.