ಕೋವಿಡ್-19 ಸೋಂಕಿಗೆ ಕೊಪ್ಪಳದಲ್ಲಿ ಮತ್ತಿಬ್ಬರು ಬಲಿ: 28ಕ್ಕೆ ಏರಿದ ಸಾವಿನ ಸಂಖ್ಯೆ
Team Udayavani, Aug 2, 2020, 1:39 PM IST
ಕೊಪ್ಪಳ: ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿನ ಆರ್ಭಟ ಮುಂದುವರೆದಿದ್ದು, ಭಾನುವಾರ ಸೋಂಕಿಗೆ ಮತ್ತಿಬ್ಬರು ಬಲಿಯಾಗಿದ್ದಾರೆ. ಈ ಮೂಲಕ ಜಿಲ್ಲೆಯ ಸೋಂಕಿತರ ಸಾವಿನ ಸಂಖ್ಯೆ 28ಕ್ಕೆ ಏರಿಕೆಯಾಗಿದೆ.
ಗಂಗಾವತಿ ತಾಲೂಕಿನ 54 ವರ್ಷದ ವ್ಯಕ್ತಿಗೆ ಸೋಂಕು ತಗುಲಿ ಮೃತಪಟ್ಟಿದ್ದರೆ, ಕೊಪ್ಪಳ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಮೃತಪಟ್ಟ 58 ವರ್ಷದ ವ್ಯಕ್ತಿ ಆಂಟಿಜನ್ ಪರೀಕ್ಷೆ ವೇಳೆ ಕೋವಿಡ್-19 ಸೋಂಕು ಇರುವುದು ದೃಢಪಟ್ಟಿದೆ.
ಜಿಲ್ಲೆಯಲ್ಲಿ ದಿನೇ ದಿನೆ ಕೋವಿಡ್-19 ಸೋಂಕಿತರ ಸಾವಿನ ಸಂಖ್ಯೆ ಏರಿಕೆಯಾಗುತ್ತಿದೆ. ಜಿಲ್ಲೆಯ ಸೋಂಕಿತರ ಸಾವಿನ ಸಂಖ್ಯೆ 28ಕ್ಕೆ ಏರಿಕೆಯಾಗಿದೆ. ಸಾವಿನ ಸಂಖ್ಯೆ ಏರಿಕೆ ಕಾಣುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯ ಜನರು ಆತಂಕ ವ್ಯಕ್ತಪಡಿಸಿದ್ದಾರೆ.
ಕೊಪ್ಪಳದಲ್ಲಿ ಶನಿವಾರ 107 ಜನರಿಗೆ ಕೋವಿಡ್ 19 ಸೋಂಕು ದೃಢವಾಗಿದೆ. ಇದರಿಂದ ಜಿಲ್ಲೆಯ ಒಟ್ಟು ಕೋವಿಡ್-19 ಸೋಂಕಿತರ ಸಂಖ್ಯೆ 1185ಕ್ಕೆ ಏರಿಕೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೊಪ್ಪಳ:ಈ ರಸ್ತೆಗಳಲ್ಲಿ ನಿತ್ಯವೂ ನರಕ ದರ್ಶನ-ಜೀವಭಯದಲ್ಲೇ ಸಂಚಾರ
ಕುಷ್ಟಗಿ: ಬಿಳಿ ಜೋಳಕ್ಕೂ ಲಗ್ಗೆಯಿಟ್ಟ ಲದ್ದಿ ಹುಳು
Gangavathi: ಆನೆಗೊಂದಿ ರಾಜವಂಶಸ್ಥ ಎಸ್.ಆರ್.ಕೆ. ರಾಜಬಹಾದ್ದೂರ್ ನಿಧನ
Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ
ಗಂಗಾವತಿ: ಹಳ್ಳದ ಬದಿ ಹೊಸ್ಕೇರಾ-ಡಗ್ಗಿ ದಲಿತರ ಶವ ಸಂಸ್ಕಾರ- ಅಸ್ಪ್ರಶ್ಯತೆ ಇನ್ನೂ ಜೀವಂತ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.