ಕೋವಿಡ್ ಕಳವಳ-ಆಗಸ್ಟ್ 02: 5532 ಹೊಸ ಪ್ರಕರಣಗಳು ; 4077 ಡಿಸ್ಚಾರ್ಜ್ ; 84 ಸಾವು

ಬೆಂಗಳೂರು ನಗರ 2105, ಬಳ್ಳಾರಿ 377, ಕಲಬುರಗಿ 238, ಮೈಸೂರು 238, ರಾಯಚೂರು 212, ಉಡುಪಿ 182, ದಕ್ಷಿಣ ಕನ್ನಡ 163

Team Udayavani, Aug 2, 2020, 7:45 PM IST

ಕೋವಿಡ್ ಕಳವಳ-ಜು.31: 5532 ಹೊಸ ಪ್ರಕರಣಗಳು ; 4077 ಡಿಸ್ಚಾರ್ಜ್ ; 84 ಸಾವು

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೆಂಗಳೂರು: ಶನಿವಾರ ಸಾಯಂಕಾಲದಿಂದ ರವಿವಾರ ಸಾಯಂಕಾಲದವರೆಗಿನ ಕೋವಿಡ್ 19 ಸೋಂಕು ಪ್ರಕರಣಗಳ ವರದಿಯ ಪ್ರಕಾರ, ಈ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 5532 ಕೋವಿಡ್ 19 ಸೋಂಕು ಪ್ರಕರಣಗಳು ವರದಿಯಾಗಿವೆ.

ಈ ನಿರ್ಧಿಷ್ಟ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 4077 ಸೋಂಕಿತರು ಗುಣಮುಖರಾಗಿದ್ದಾರೆ. ಮತ್ತು ಈ ಅವಧಿಯಲ್ಲಿ 84 ಸೋಂಕಿತರು ಮೃತಪಟ್ಟಿದ್ದಾರೆ.

ಇದೀಗ ರಾಜ್ಯದಲ್ಲಿ ಒಟ್ಟು ಕೋವಿಡ್ 19 ಸೋಂಕಿತರ ಸಂಖ್ಯೆ 134819 ಆಗಿದೆ. 57725 ಸೊಂಕಿತರು ಚೇತರಿಸಿಕೊಂಡಿದ್ದಾರೆ ಹಾಗೂ ರಾಜ್ಯದಲ್ಲಿ ಕೋವಿಡ್ 19 ಸೊಂಕು ಸಂಬಂಧಿ 2496 ಸಾವಿನ ಪ್ರಕರಣಗಳು ದಾಖಲಾಗಿವೆ ಹಾಗೂ 08 ಜನ ಕೋವಿಡ್ 19 ಸೋಂಕಿತರು ಅನ್ಯ ಕಾರಣದಿಂದ ಮೃತಪಟ್ಟಿದ್ದಾರೆ. 638 ಸೋಂಕಿತರು ತುರ್ತು ನಿಗಾ ಘಟಕದಲ್ಲಿ ದಾಖಲುಗೊಂಡು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ರಾಜ್ಯದಲ್ಲಿ ಇದೀಗ ಒಟ್ಟು 74590 ಸಕ್ರಿಯ ಕೋವಿಡ್ 19 ಸೋಂಕು ಪ್ರಕರಣಗಳಿವೆ.

ಈ ಅವಧಿಯಲ್ಲಿ ಬೆಂಗಳೂರು ನಗರ ಜಿಲ್ಲೆಯಲ್ಲಿ 2105 ಕೋವಿಡ್ 19 ಸೊಂಕು ಪ್ರಕರಣಗಳು ವರದಿಯಾಗುವ ಮೂಲಕ ಸೋಂಕು ಪ್ರಕರಣಗಳಲ್ಲಿ ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದೆ. ಆ ಬಳಿಕದ ಸ್ಥಾನಗಳಲ್ಲಿ ಬಳ್ಳಾರಿ (377), ಕಲಬುರಗಿ (238), ಮೈಸೂರು (238), ರಾಯಚೂರು (212), ಉಡುಪಿ (182), ಧಾರವಾಡ (181), ದಾವಣಗೆರೆ (178), ಬೆಳಗಾವಿ (172), ದಕ್ಷಿಣ ಕನ್ನಡ (163), ಹಾವೇರಿ (146), ಹಾಸನ (142), ಬೀದರ್ (135), ಬಾಗಲಕೋಟೆ (131) ಮತ್ತು ವಿಜಯಪುರ (113) ಜಿಲ್ಲೆಗಳಿವೆ.

ಇನ್ನುಳಿದಂತೆ, ಶಿವಮೊಗ್ಗ (99), ಮಂಡ್ಯ (65), ಗದಗ (92), ಕೊಪ್ಪಳ (87), ರಾಮನಗರ (71), ಚಿಕ್ಕಬಳ್ಳಾಪುರ (55), ಕೋಲಾರ (51), ಚಿತ್ರದುರ್ಗ (46), ಚಿಕ್ಕಮಗಳೂರು (40), ಯಾದಗಿರಿ (39), ಬೆಂಗಳೂರು ಗ್ರಾಮಾಂತರ (38), ತುಮಕೂರು (35), ಚಾಮರಾಜನಗರ (31), ಉತ್ತರಕನ್ನಡ (26) ಮತ್ತು ಕೊಡಗು (16) ಸೇರಿದಂತೆ ರಾಜ್ಯದ ಒಟ್ಟು 30 ಜಿಲ್ಲೆಗಳಲ್ಲಿ ಇಂದು ಮೂರಂಕಿ ಹಾಗೂ ಎರಡಂಕಿಯ ಕೋವಿಡ್ 19 ಸೋಂಕಿನ ಪ್ರಕರಣಗಳು ವರದಿಯಾಗಿವೆ.

ಇಂದು ರಾಜ್ಯದಲ್ಲಿ ಒಟ್ಟು 18571 Rapid ಆ್ಯಂಟಿಜೆನ್ ಸೋಂಕು ಪತ್ತೆ ಪರೀಕ್ಷೆಗಳನ್ನು ನಡೆಸಲಾಗಿದೆ ಹಾಗೂ RT PCR ಮತ್ತು ಇನ್ನಿತರೇ ವಿಧಾನಗಳ ಮೂಲಕ 14500 ಸೋಂಕು ಪತ್ತೆ ಪರೀಕ್ಷೆಗಳನ್ನು ಈ ಅವಧಿಯಲ್ಲಿ ನಡೆಸಲಾಗಿದೆ. ಈ ಮೂಲಕ ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ ಒಟ್ಟು 33017 ಸೋಂಕು ಪತ್ತೆ ಪರಿಕ್ಷೆಗಳನ್ನು ನಡೆಸಲಾಗಿದೆ.

ರಾಜ್ಯದಲ್ಲಿ ಇದುವರೆಗೆ ಒಟ್ಟು 186847 Rapid ಆ್ಯಂಟಿಜೆನ್ ಸೋಂಕು ಪತ್ತೆ ಪರೀಕ್ಷೆಗಳನ್ನು ನಡೆಸಲಾಗಿದೆ. ಇದನ್ನು ಹೊರತಾಗಿಸಿ ರಾಜ್ಯಾದ್ಯಂತ 14,18,569 ಜನರಿಗೆ RT PCR ಮತ್ತು ಇನ್ನಿತರೇ ವಿಧಾನಗಳ ಮೂಲಕ ಕೋವಿಡ್ 19 ಸೋಂಕು ಪತ್ತೆ ಪರೀಕ್ಷೆಯನ್ನು ನಡೆಸಲಾಗಿದೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ ಒಟ್ಟು ಕೋವಿಡ್ 19 ಸೋಂಕಿತ ಪ್ರಕರಣಗಳ ಸಂಖ್ಯೆ 59501ಕ್ಕೆ ಏರಿಕೆಯಾಗಿದ್ದು, 20910 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ ಹಾಗೂ ಸಕ್ರಿಯ ಪ್ರಕರಣಗಳ ಸಂಖ್ಯೆ 37513ಕ್ಕೆ ಏರಿಕೆಯಾಗಿದೆ. ಇಲ್ಲಿ ಕೋವಿಡ್ ಸಂಬಂಧಿತ 1077 ಸಾವು ಸಂಭವಿಸಿದೆ.

ಬಳ್ಳಾರಿ ಜಿಲ್ಲೆಯಲ್ಲಿ ಒಟ್ಟು 7049 ಕೋವಿಡ್ 19 ಸೋಂಕಿನ ಪ್ರಕರಣಗಳು ದಾಖಲಾಗಿದ್ದು 3223 ಜನ ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು 3749 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಇಲ್ಲಿ ಕೋವಿಡ್ 19 ಸಂಬಂಧಿತ 77 ಸಾವು ಸಂಭವಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಾಸಿಟಿವ್ ಪ್ರಕರಣಗಳ ಸಂಖ್ಯೆ 6010ಕ್ಕೆ ಏರಿಕೆಯಾಗಿದ್ದು ಇವರಲ್ಲಿ 2725 ಸೋಂಕಿತರು ಗುಣಮುಖರಾಗಿದ್ದಾರೆ. 3125 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ ಹಾಗೂ ಇಲ್ಲಿ ಕೋವಿಡ್ ಸಂಬಂಧಿತ 158 ಸಾವು ಸಂಭವಿಸಿದೆ. ಬೆಂಗಳೂರು ನಗರ (1077) ಹಾಗೂ ಮೈಸೂರು (161) ಜಿಲ್ಲೆಗಳ ಬಳಿಕ ಕೋವಿಡ್ 19 ಸಂಬಂಧಿ ಅತೀ ಹೆಚ್ಚಿನ ಸಾವು ಸಂಭವಿಸಿರುವ ಜಿಲ್ಲೆ ಇದಾಗಿದೆ.

ಕಲಬುರಗಿಯಲ್ಲಿ ಒಟ್ಟು 5767 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ 2949 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. 2712 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ ಹಾಗೂ ಇಲ್ಲಿ 106 ಜನರು ಈ ಸೋಂಕಿಗೆ ಮೃತಪಟ್ಟಿದ್ದಾರೆ.

ಮೈಸೂರು ಜಿಲ್ಲೆಯಲ್ಲಿ 4820 ಕೋವಿಡ್ ಸೋಂಕಿನ ಪ್ರಕರಣಗಳು ದಾಖಲಾಗಿದ್ದು 1692 ಜನ ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು 2967 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಇಲ್ಲಿ ಕೋವಿಡ್ 19 ಸಂಬಂಧಿತ 161 ಸಾವು ಸಂಭವಿಸಿದೆ.

ಇನ್ನು ಉಡುಪಿ ಜಿಲ್ಲೆಯಲ್ಲಿ 4673 ಕೋವಿಡ್ 19 ಸೋಂಕಿನ ಪ್ರಕರಣಗಳು ದಾಖಲಾಗಿದ್ದು 2606 ಜನರು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ ಹಾಗೂ ಜಿಲ್ಲೆಯಲ್ಲಿ 2032 ಸಕ್ರಿಯ ಪ್ರಕರಣಗಳಿವೆ. ಇಲ್ಲಿ ಕೋವಿಡ್ 19 ಸೋಂಕು ಸಂಬಂಧಿ 35 ಸಾವಿನ ಪ್ರಕರಣಗಳು ದಾಖಲಾಗಿದೆ.

ಧಾರವಾಡ ಜಿಲ್ಲೆಯಲ್ಲಿ 4456 ಕೋವಿಡ್ ಸೋಂಕಿನ ಪ್ರಕರಣಗಳು ದಾಖಲಾಗಿದ್ದು 1846 ಜನ ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು 2463 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಇಲ್ಲಿ ಕೋವಿಡ್ 19 ಸಂಬಂಧಿತ 147 ಸಾವು ಸಂಭವಿಸಿದೆ.

ಬೆಳಗಾವಿ ಜಿಲ್ಲೆಯಲ್ಲಿ 3621 ಕೋವಿಡ್ ಸೋಂಕಿನ ಪ್ರಕರಣಗಳು ದಾಖಲಾಗಿದ್ದು 1025 ಜನ ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು 2521 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಇಲ್ಲಿ ಕೋವಿಡ್ 19 ಸಂಬಂಧಿತ 75 ಸಾವು ಸಂಭವಿಸಿದೆ.

 

ಟಾಪ್ ನ್ಯೂಸ್

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು

Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Shiva-sene-Shinde

Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಶಿವಸೇನೆಗೆ

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.