ಕೋವಿಡ್‌ 19 ಪ್ರಕರಣ ಹೆಚ್ಚಳ ತಗ್ಗದ ಅಪಾಯ


Team Udayavani, Aug 3, 2020, 5:58 AM IST

ಕೋವಿಡ್‌ 19 ಪ್ರಕರಣ ಹೆಚ್ಚಳ ತಗ್ಗದ ಅಪಾಯ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಭಾರತದಲ್ಲಿ ಕೋವಿಡ್ 19 ರೋಗಿಗಳ ಸಂಖ್ಯೆ ಎಷ್ಟು ವೇಗವಾಗಿ ಬೆಳೆಯುತ್ತಿದೆಯೆಂದರೆ ಈ ಏರುತ್ತಿರುವ ಪ್ರಕರಣಗಳ ಸಂಖ್ಯೆ ನೋಡಿದಾಗ, ದೇಶದಲ್ಲಿ ಕೋವಿಡ್‌-19 ಸಮುದಾಯ ಪ್ರಸರಣದ ರೂಪ ಪಡೆದಿದೆಯೇನೋ ಎಂದು ಅನುಮಾನ-ಆತಂಕ ಕಾಡದೇ ಇರದು.

ಕಳೆದ ಕೆಲವು ದಿನಗಳಿಂದಂತೂ ದೇಶದಲ್ಲಿ ನಿತ್ಯ 50 ಸಾವಿರಕ್ಕೂ ಅಧಿಕ ಸೋಂಕಿತರು ಪತ್ತೆಯಾಗುತ್ತಿದ್ದಾರೆ. ಈಗ ದೇಶದ ಗೃಹ ಸಚಿವರೂ ಸೋಂಕಿತರಾಗಿದ್ದಾರೆ.

ಈ ಕೋವಿಡ್ 19 ವೈರಸ್‌ ವೈದ್ಯರು, ಪೊಲೀಸರು, ಗ್ರಾಮೀಣ ಜನರು, ಸಿನೆಮಾ ತಾರೆಯರು ಸೇರಿದಂತೆ ಯಾವ ಜನವರ್ಗವನ್ನೂ ಬಿಟ್ಟಿಲ್ಲ. ಪ್ರಧಾನಿ ಮೋದಿಯವರು ಈ ಹಿಂದೆ ಹೇಳಿದಂತೆ ಈ ರೋಗವು ಜಾತಿ, ಮತ, ಧರ್ಮ, ಸ್ತರಗಳನ್ನು ನೋಡುವುದಿಲ್ಲ. ಈ ಕಾರಣಕ್ಕಾಗಿಯೇ ಸಾಮಾಜಿಕ ಅಂತರಗಳ ಪರಿಪಾಲನೆ, ಮುನ್ನೆಚ್ಚರಿಕೆ ಕ್ರಮಗಳ ಕಟ್ಟುನಿಟ್ಟಾದ ಪಾಲನೆ ಅತ್ಯಗತ್ಯವಾಗಿದೆ.

ಕೋವಿಡ್‌-19 ಅಂಕಿಸಂಖ್ಯೆಗಳು, ಆ ರೋಗದ ಪ್ರಸರಣದ ಪರಿ ಎಲ್ಲೆಡೆಯೂ ಒಂದೇ ರೀತಿಯಲ್ಲಿ ಇಲ್ಲ. ಕೆಲವು ಸಮಯದ ಹಿಂದೆ ದೇಶದ ಪ್ರಮುಖ ಹಾಟ್‌ ಸ್ಪಾಟ್‌ಗಳಲ್ಲಿ ಒಂದಾಗಿದ್ದ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲೀಗ ಪರಿಸ್ಥಿತಿ ಸುಧಾರಿಸಿದೆ. ಇನ್ನೊಂದೆಡೆ ಮಹಾರಾಷ್ಟ್ರದಲ್ಲಿ ಕೋವಿಡ್‌ ಹಾವಳಿ ನಿಲ್ಲುವ ಸೂಚನೆಯೇ ಕಾಣುತ್ತಿಲ್ಲ. ಇದುವರೆಗೆ ಆ ರಾಜ್ಯದಲ್ಲಿ 4 ಲಕ್ಷಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗಿವೆ. ಆರಂಭದಿಂದಲೂ ಕೋವಿಡ್‌ ತಡೆಯಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದ ಕರ್ನಾಟಕವು ಸಕ್ರಿಯ ಪ್ರಕರಣಗಳಲ್ಲಿ ದಿಲ್ಲಿಗಿಂತಲೂ ಮುಂದಿರುವುದು ಆತಂಕದ ವಿಷಯ. ನೆರೆಯ ಆಂಧ್ರಪ್ರದೇಶದಲ್ಲೂ ಸಕ್ರಿಯ ಪ್ರಕರಣಗಳ ಸಂಖ್ಯೆ ಏರುತ್ತಲೇ ಇದೆ.

ಒಂದಂತೂ ಸತ್ಯ. ಕೆಲವು ಸಮಯದಲ್ಲಿ ನಿತ್ಯ ಟೆಸ್ಟಿಂಗ್‌ ಪ್ರಮಾಣದಲ್ಲಿ ಹೆಚ್ಚಳವಾಗಿರುವುದೂ ಸಹ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗುವುದಕ್ಕೆ ಕಾರಣ. ಗಮನಿಸಬೇಕಾದ ಸಂಗತಿಯೆಂದರೆ, ರಾಜ್ಯದಲ್ಲಿ ಕೆಲವು ದಿನಗಳಿಂದ 30 ಸಾವಿರಕ್ಕೂ ಅಧಿಕ ಟೆಸ್ಟಿಂಗ್‌ಗಳನ್ನು ನಡೆಸಲಾಗುತ್ತಿದೆ ಎನ್ನುವುದು. ಆದರೂ ಈಗಿನ ಟಾಪ್‌ 5 ‘ಸಕ್ರಿಯ’ ಹಾಟ್‌ ಸ್ಪಾಟ್‌ಗಳನ್ನು ಪರಿಗಣಿಸಿದಾಗ ಕರ್ನಾಟಕಕ್ಕಿಂತ ಉಳಿದ ರಾಜ್ಯಗಳು ಹೆಚ್ಚಿನ ಪ್ರಮಾಣದ ಟೆಸ್ಟಿಂಗ್‌ ನಡೆಸಿವೆ.

ಆದರೆ ಈಗಲೂ ಪರೀಕ್ಷೆಗೊಳಪಡದ ಸೋಂಕಿತರು ಎಷ್ಟು ಪ್ರಮಾಣದಲ್ಲಿದ್ದಾರೋ, ಇವರೆಲ್ಲ ಎಷ್ಟು ಜನರಿಗೆ ರೋಗ ಹರಡುತ್ತಿದ್ದಾರೋ ಎನ್ನುವುದು ತಿಳಿಯದು. ಈ ಕಾರಣಕ್ಕಾಗಿಯೇ, ಎಲ್ಲ ರಾಜ್ಯಗಳೂ ಮತ್ತಷ್ಟು ಹೆಚ್ಚಿನ ಪ್ರಮಾಣದಲ್ಲಿ ನಿತ್ಯಪರೀಕ್ಷೆಗಳ ಸಂಖ್ಯೆಯನ್ನು ಹೆಚ್ಚಿಸಬೇಕಾಗಿದೆ.

ರಾಜ್ಯ ಸರಕಾರಗಳು ಟೆಸ್ಟಿಂಗ್‌ ಜತೆ ಜತೆಗೇ ಮಾಡಬೇಕಾದ ಮತ್ತೊಂದು ಮುಖ್ಯ ಕೆಲಸವೆಂದರೆ, ಕ್ವಾರಂಟೈನ್‌ ಸೆಂಟರ್‌ಗಳು, ಆರೋಗ್ಯ ಕೇಂದ್ರಗಳು ಹಾಗೂ ಸರಕಾರಿ ಆಸ್ಪತ್ರೆಗಳಲ್ಲಿನ ಸ್ಥಿತಿಯನ್ನು ಸುಧಾರಿಸುವುದು. ರಾಜ್ಯದ ವಿಷಯಕ್ಕೇ ಬಂದರೆ, ನಿತ್ಯವೂ ಒಂದಲ್ಲ ಒಂದು ಭಾಗದಲ್ಲಿ ಜನರು, ಆಸ್ಪತ್ರೆಗಳು ಅಥವಾ ಸೆಂಟರ್‌ಗಳಲ್ಲಿನ ದುರವಸ್ಥೆಯ ಬಗ್ಗೆ ದೂರುತ್ತಲೇ ಇದ್ದಾರೆ.

ಕೆಲವೆಡೆಯಂತೂ ರೋಗಿಗಳಿಗೆ ಸರಿಯಾಗಿ ಊಟದ ವ್ಯವಸ್ಥೆಯೂ ಇಲ್ಲದಂಥ ಸ್ಥಿತಿ ಇದೆ. ರೋಗಿಗಳಿಗೆ ರೋಗಕ್ಕಿಂತಲೂ ಈ ಅಸಡ್ಡೆ ಹೆಚ್ಚು ಯಾತನೆ ಕೊಡುತ್ತಿದೆ. ಈ ಕಾರಣಕ್ಕಾಗಿಯೇ ನಿತ್ಯ ವೀಡಿಯೋ ಮಾಡಿ ಆರೋಗ್ಯ ವ್ಯವಸ್ಥೆಯ ದುರವಸ್ಥೆಯ ಬಗ್ಗೆ ದೂರ ಲಾರಂಭಿಸಿದ್ದಾರೆ. ಪರಿಸ್ಥಿತಿ ಹೀಗೇ ಮುಂದುವರಿದರೆ, ಜನ ಕೋವಿಡ್‌ ಟೆಸ್ಟ್ ಮಾಡಿಸಿಕೊಳ್ಳುವುದಕ್ಕೂ ಹಿಂಜರಿಯುವಂಥ ಸ್ಥಿತಿ ಬರಬಹುದು. ಈ ಕಾರಣಕ್ಕಾಗಿಯೇ ಎಲ್ಲ ಕೇಂದ್ರಗಳಲ್ಲೂ ರೋಗಿಗಳಿಗೆ ಸೂಕ್ತ ಆರೈಕೆ ಸಿಗುವಂತೆ ರಾಜ್ಯ ಸರಕಾರ, ಆರೋಗ್ಯ ಇಲಾಖೆ ಹಾಗೂ ಆಯಾ ಜಿಲ್ಲಾಡಳಿತಗಳು ಎಚ್ಚರಿಕೆ ವಹಿಸಬೇಕಾದ ಅಗತ್ಯವಿದೆ.

ಟಾಪ್ ನ್ಯೂಸ್

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ  

ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ  

Sagara-Minister-Dinesh

KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್

Gold price drops again: Rs 77240 per 10 grams!

Gold Rate: ಚಿನ್ನದ ಬೆಲೆ ಮತ್ತೆ ಇಳಿಕೆ: 10 ಗ್ರಾಂಗೆ 77240 ರೂ!

12-sirsi

Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ

EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್‌ ಟೀಕೆ

EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್‌ ಟೀಕೆ

11-sirsi

Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Winter session: ವರ್ಷದ ಕೊನೆಯ ಸಂಸತ್‌ ಅಧಿವೇಶನ ಫ‌ಲಪ್ರದವಾಗಲಿ

Winter session: ವರ್ಷದ ಕೊನೆಯ ಸಂಸತ್‌ ಅಧಿವೇಶನ ಫ‌ಲಪ್ರದವಾಗಲಿ

canada

ಭಾರತದ ಪ್ರಬುದ್ಧ ನಡೆಗೆ ಮೆತ್ತಗಾದ ಕೆನಡಾ ಸರಕಾರ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Karnataka: ಪಡಿತರ ಚೀಟಿ ಮಾನದಂಡ ಆಮೂಲಾಗ್ರ ಪರಿಷ್ಕರಣೆ ಅಗತ್ಯ

Karnataka: ಪಡಿತರ ಚೀಟಿ ಮಾನದಂಡ ಆಮೂಲಾಗ್ರ ಪರಿಷ್ಕರಣೆ ಅಗತ್ಯ

Karnataka: ರಾಜ್ಯದಲ್ಲಿ ನಕ್ಸಲರ ಸಂಪೂರ್ಣ ನಿಗ್ರಹ ನಡೆಯಲಿ

Karnataka: ರಾಜ್ಯದಲ್ಲಿ ನಕ್ಸಲರ ಸಂಪೂರ್ಣ ನಿಗ್ರಹ ನಡೆಯಲಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ  

ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ  

12

Sullia: ಕನಕಮಜಲು; ಅಂಗಡಿ, ಹೊಟೇಲ್‌ನಿಂದ ಕಳವು

Sagara-Minister-Dinesh

KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್

Mallika Sherawat breaks up with French boyfriend

Actress: ಫ್ರೆಂಚ್‌ ಗೆಳೆಯನೊಂದಿಗೆ ಬ್ರೇಕ್‌ಅಪ್‌ ಆಗಿದೆ: ಮಲ್ಲಿಕಾ ಶೆರಾವತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.