ರೋಗ ತಡೆಗೆ ಮುಂಜಾಗ್ರತೆಯೇ ಮದ್ದು
Team Udayavani, Aug 3, 2020, 10:15 AM IST
ಶ್ರೀರಂಗಪಟ್ಟಣ: ಕೆಲವು ರೋಗಗಳಿಗೆ ಔಷಧಿ ಇಲ್ಲವಾಗಿದೆ. ಆದ್ದರಿಂದ ರೋಗ ನಿಯಂತ್ರಣಕ್ಕೆ ಮುಂಜಾಗ್ರತೆಯೇ ಮದ್ದು ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ.ಬೆನ್ನೂರ ಹೇಳಿದರು.
ಪಟ್ಟಣದ ಸಂತೆಮಾಳದ ಅಂಗನವಾಡಿ ಕೇಂದ್ರ ದಲ್ಲಿ ಆರೋಗ್ಯ ಇಲಾಖೆಯಿಂದ ನಡೆದ ಡೆಂಗ್ಯೂ ಮಾಸಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಸದ್ಯ ಮಳೆಗಾಲ ಆರಂಭವಾಗಿದೆ. ತಮ್ಮ ಮನೆ ಸುತ್ತಮುತ್ತಲು ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಸೊಳ್ಳೆಗಳ ಕಡಿತದಿಂದ ತಪ್ಪಿಸಿಕೊಂಡು ರೋಗ ಬರದಂತೆ ಎಚ್ಚರವಹಿಸಬೇಕು ಎಂದು ತಿಳಿಸಿದರು.
ಆರೋಗ್ಯ ಇಲಾಖೆ ವತಿಯಿಂದ ರೋಗಗಳ ತಡೆಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗಿದೆ. ಪರಿಸರದ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಜಾಗೃತಿ ಮೂಡಿಸುವ ಕೆಲಸಕ್ಕೆ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಬಿ.ಮಂಗಳಾ, ಅಂಗನವಾಡಿ ಕಾರ್ಯಕರ್ತೆ ವೇದಾವತಿ, ಆಶಾ ಕಾರ್ಯಕರ್ತೆ ಮೀನಾ, ಸಾಕಮ್ಮ, ಪಾರ್ವತಮ್ಮ, ಲಕ್ಷ್ಮಮ್ಮ, ಜಯಲಕ್ಷ್ಮೀ, ಅಶ್ವಿನಿ, ಪದ್ಮಾ, ಕಿರಿಯ ಆರೋಗ್ಯ ಸಹಾಯಕ ಚಂದನ ಹಾಜರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.