ರಕ್ಷಾ ಬಂಧನದ ಖುಷಿ ಕಸಿದ ಕೋವಿಡ್

ರಾಖೀ ಖರೀದಿಗೆ ಮನೆಯಿಂದ ಹೊರಬರಲು ಯುವತಿಯರ ಹಿಂದೇಟು

Team Udayavani, Aug 3, 2020, 12:36 PM IST

ರಕ್ಷಾ ಬಂಧನದ ಖುಷಿ ಕಸಿದ ಕೋವಿಡ್

ಸಾಂದರ್ಭಿಕ ಚಿತ್ರ

ಅಥಣಿ: ತಾಲೂಕಿನಾದ್ಯಂತ ಕೋವಿಡ್ ರಕ್ಷಾ ಬಂಧನದ ಖುಷಿ ಕಸಿದಿದೆ. ಸಂಪ್ರದಾಯದ ಪ್ರಕಾರವಾಗಿ ಶ್ರಾವಣ ಮಾಸವೆಂದರೆ ಎಲ್ಲಾ ಮಹಿಳೆಯರಿಗೆ ಎಲ್ಲಿಲ್ಲದ ಖುಷಿ. ಅದರಲ್ಲೂ ನೂಲು ಹುಣ್ಣಿಮೆಯಂದು ಭ್ರಾತೃತ್ವದ ಸಂಕೇತವಾದ ರಾಖೀಯನ್ನು ಸಹೋದರರ ಕೈಗೆ ಕಟ್ಟಿ ಉಡುಗೊರೆ ಪಡೆಯುವ ಸಂಭ್ರಮವಂತೂ ಹೇಳಲೇ ತೀರದು. ನಗರ ಸೇರಿದಂತೆ ತಾಲೂಕಿನ ನಾನಾ ಪ್ರದೇಶಗಳ ಮಾರುಕಟ್ಟೆಯಲ್ಲಿ ಕಳೆದ ಕೆಲ ದಿನಗಳಿಂದ ಆರಂಭಿಸಿದ ರಾಖೀ ಅಂಗಡಿಗಳು ಕೊಳ್ಳುವವರಿಲ್ಲದೆ ಬಿಕೋ ಎನ್ನುತ್ತಿವೆ.

ಮಾರಾಟಗಾರರು ಓಂ, ಗಣೇಶ, ಕೃಷ್ಣಾ, ಬಾಹುಬಲಿ, ಛೋಟಾ ಭೀಮ, ಸೇರಿದಂತೆ ನಾನಾ ಟ್ರೆಂಡಿಂಗ್‌ ರಾಖೀಗಳನ್ನು ತಂದು ಮಾರುಕಟ್ಟೆಯಲ್ಲಿ ಮಾರಾಟಕ್ಕಿಟ್ಟಿದ್ದರೂ ಕೊಳ್ಳುವವರಿಲ್ಲದಂತಾಗಿದೆ. ಜನ, ವಿಶೇಷವಾಗಿ ಮಹಿಳೆಯರು ಮನೆಯಿಂದ ಹೊರಬರಲು ಹಿಂದೇಟು ಹಾಕುತ್ತಿದ್ದಾರೆ.

ಅಥಣಿ ನಗರದ ಬಸವೇಶ್ವರ ಸರ್ಕಲ್‌, ಹಳ್ಯಾಳ ಸರ್ಕಲ್‌, ಅಂಬೇಡ್ಕರ ಸರ್ಕಲ್‌, ವಿಜಯಪುರ ರಸ್ತೆ, ಮಾರುಕಟ್ಟೆ ಸೇರಿದಂತೆ ಪ್ರಮುಖ ರಸ್ತೆಗಳ ಬದಿಯಲ್ಲಿ ಮತ್ತು ಸರ್ಕಲ್‌ಗ‌ಳಲ್ಲಿ ಸಾಕಷ್ಟು ರಾಖೀ ಸ್ಟಾಲ್‌ ಗಳು ತಲೆ ಎತ್ತಿವೆ. ಫಳ ಫಳ ಹೊಳೆಯುವ ಮುತ್ತು, ಗಾಜಿನಿಂದ ಕೂಡಿದ ಲೇಟೆಸ್ಟ್‌ ಟ್ರೆಂಡ್‌ನ‌ ರಾಖೀಗಳು, ನವಿರಾದ ರೇಷ್ಮೆ, ನೂಲಿನಿಂದ ತಯಾರಿಸಿದ ರಾಖೀಗಳು, ಸ್ಪಂಜ್‌, ದಾರ ಸೇರಿದಂತೆ ನಾನಾ ವಿನ್ಯಾಸದ ಬಣ್ಣ ಬಣ್ಣದ ರಾಖೀಗಳನ್ನು ಆಕರ್ಷಕವಾಗಿ ಜೋಡಿಸಿಡಲಾಗಿದೆ. ರಾಖೀಗಳ ಗಾತ್ರ ಮತ್ತು ವಿನ್ಯಾಸಕ್ಕೆ ತಕ್ಕಂತೆ 5 ರೂ.ಗಳಿಂದ ನೂರಾರು ರೂ.ಗಳ ದರವಿದೆ. ಜತಗೆ ಸಾವಿರಾರು ರೂ.ಗಳ ದರದ ಚಿನ್ನ ಹಾಗೂ ಬೆಳ್ಳಿ ಲೇಪಿತ ರಾಖೀಗಳು ಲಭ್ಯ ಇವೆ. ಅಲ್ಲಲ್ಲಿ ಕೆಲ ಜನರು ತಮ್ಮ ಬೇಡಿಕೆ ತಕ್ಕಂತೆ ವಿಚಾರಿಸಿ ಖರೀದಿಸುತ್ತಿದ್ದಾರೆ.

ಕೋವಿಡ್ ದಿಂದಾಗಿ ಅನೇಕರು ಮನೆ ಬಿಟ್ಟು ಹೊರಬರುತ್ತಿಲ್ಲ. ಹಾಗಾಗಿ ಈ ಸಲ ನಾವು ತಂದ ರಾಖೀಗಳಲ್ಲಿ ಅರ್ಧದಷ್ಟು ಮಾರಾಟವಾಗದೇ ಉಳಿದಿವೆ. ಈ ಬಾರಿ ಕೋವಿಡ್‌ ನಿಂದಾಗಿ ಹಬ್ಬದ ವ್ಯಾಪಾರದಲ್ಲಿ ಮಂಕು ಕವಿದಿದೆ. –ರಾಹುಲ ಲಗಳಿ,ಕಿರಾಣಿ ವ್ಯಾಪಾರಿ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

1-chali

Dakshina Kannada and Udupi: ಮುಂಜಾನೆ ಚುಮುಚುಮು ಚಳಿ

1-deee

Udupi; ಪೊಲೀಸ್‌ ಇಲಾಖೆ ವಿರುದ್ಧ ಹಿಂದೂ ಸಂಘಟನೆಗಳ ಪ್ರತಿಭಟನೆ

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijay Raghavendra, Rudrabhishekam Movie, Sandalwood, Vasanth Kumar, Veeragase

Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್

1-bank

Karnataka; ಕೇಂದ್ರ ಸ್ವಾಮ್ಯದ ಸಂಸ್ಥೆಗಳಲ್ಲಿ ಕನ್ನಡಿಗರೇಕೆ ವಿರಳ? ಆಗಬೇಕಿರುವುದೇನು?

ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ

ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

1-kanchi

Kanchi swamiji; ದೇವಸ್ಥಾನಗಳ ಭೂಮಿ ದೇವಸ್ಥಾನಗಳಿಗೇ ಇರಲಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

1-dr

Veerendra Heggade 77ನೇ ವರ್ಷಕ್ಕೆ ಪಾದಾರ್ಪಣೆ: ಗಣ್ಯರಿಂದ ಶುಭ ಹಾರೈಕೆ

UTK

Speaker ಯು.ಟಿ.ಖಾದರ್‌ ವ್ಯಾಟಿಕನ್‌ ಸಿಟಿಗೆ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.